ನವದೆಹಲಿ: ಹಣದುಬ್ಬರ (Inflation) ಪ್ರಮಾಣ ಹೆಚ್ಚುತ್ತಾ ಇದೆ. ಆರ್ಥಿಕತೆ (Economy) ಕುಸಿಯುತ್ತಿದೆ. ರೂಪಾಯಿ ಮೌಲ್ಯ ಕುಸಿಯುತ್ತಿದೆ. ನಿರುದ್ಯೋಗ (Unemployment) ಸಮಸ್ಯೆ ಹೆಚ್ಚಾಗುತ್ತಿದೆ. ಇವು ದೇಶದ ಜನರನ್ನು ನಾನಾ ರೀತಿಯ ಕಷ್ಟಗಳಿಗೆ ದೂಡಿವೆ. ಈ ನಡುವೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Prime Minister Narendra Modi) ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ (Union Government) ನಿರಂತರವಾಗಿ ಪೆಟ್ರೋಲ್ (Petrol), ಡೀಸೆಲ್ (Diesel) ಮತ್ತು ಅಡುಗೆ ಅನಿಲ ಸಿಲಿಂಡರ್ (Gas Cylinder) ಬೆಲೆಯನ್ನು (Price) ಏರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ (Congress) ದೇಶಾದ್ಯಂತ ತಮಟೆ, ಗಂಟೆ ಬಾರಿಸುವ ಚಳವಳಿಗೆ ಕರೆಕೊಟ್ಟಿದೆ.
ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್ ಹೋರಾಟ
ಕಳೆದ ಹತ್ತು ದಿನಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒಂಬತ್ತು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಕೆ ಮಾಡಿದೆ. ಇಂದು ಪ್ರತಿ ಲೀಡರ್ ಪೆಟ್ರೋಲ್ ಮೇಲೆ 84 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 78 ಪೈಸೆ ಏರಿಕೆ ಮಾಡಿದೆ. ನಡುವೆ ಅಡುಗೆ ಅನಿಲದ ಸಿಲಿಂಡರ್ ಬೆಲೆಯನ್ನೂ ಏರಿಸಲಾಗಿದೆ. ಹೀಗೆ ನಿರಂತರವಾಗಿ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷವು ಇಂದು ಬೆಳಿಗ್ಗೆ 11 ಗಂಟೆಗೆ ದೇಶಾದ್ಯಂತ ಗಂಟೆ ಭಾರಿಸುವ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದೆ.
ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ
ಜನರ ಕಷ್ಟಗಳಿಗೆ ಕಿವಿಗೊಡದ ಬಿಜೆಪಿಯ ಕಿವುಡು ಸರ್ಕಾರದ ಗಮನ ಸೆಳೆಯಲು ಜನರು ತಮ್ಮ ಮನೆ ಮತ್ತು ಸಾರ್ವಜನಿಕ ಸ್ಥಳಗಳ ಹೊರಗೆ ಗ್ಯಾಸ್ ಸಿಲಿಂಡರ್ ಮತ್ತು ಡ್ರಮ್-ಬೆಲ್ಸ್, ಇತರೆ ವಾದ್ಯಗಳೊಂದಿಗೆ ಪ್ರತಿಭಟನೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ತಿಳಿಸಿದ್ದಾರೆ.
ಇದನ್ನೂ ಓದಿ: Narendra Modi: ಮೋದಿ ದಿನನಿತ್ಯ ಏನು ಯೋಚಿಸ್ತಾರೆ; ರಾಹುಲ್ ಗಾಂಧಿ ಹೇಳಿದ್ದೇನು?
ಸಂಸತ್ತಿನ ಹೊರಗೆ, ಪೆಟ್ರೋಲಿಯಂ ಇಲಾಖೆ ಬಳಿಯೂ ಪ್ರತಿಭಟನೆ
ದೇಶಾದ್ಯಂತ ಜನರು ತಮಟೆ ಭಾರಿಸುವ ಮೂಲಕ ಪ್ರತಿಭಟನೆ ನಡೆಸಲು ಕರೆಕೊಟ್ಟಿರುವ ಕಾಂಗ್ರೆಸ್ ತಮ್ಮ ಪಕ್ಷದ ಸಂಸದರಿಗೆ ಇಂದು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಲು ಸೂಚಿಸಿದೆ. ಕಾಂಗ್ರೆಸ್ ಸಂಸದರು ವಿಜಯ್ ಚೌಕ್‌ನಿಂದ ಸಂಸತ್ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ಅಲ್ಲದೆ ಸಂಸತ್ ಕಲಾಪದಲ್ಲೂ ಬೆಲೆ ಏರಿಕೆ ಬಗ್ಗೆ ಪ್ರಸ್ತಾಪ ಮಾಡುವ ಸಾಧ್ಯತೆ ಇದೆ. ಇನ್ನೊಂದೆಡೆ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಶಾಸ್ತ್ರಿ ಭವನದಲ್ಲಿರುವ ಪೆಟ್ರೋಲಿಯಂ ಸಚಿವಾಲಯದ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ.
ಬೆಂಗಳೂರು, ದೆಹಲಿ, ಮುಂಬೈನಲ್ಲಿ ಇಂದಿನ ಬೆಲೆಗಳು
ರಾಜ್ಯಗಳು ವಿಧಿಸುವ ತೆರಿಗೆಗಳಿಗೆ ಅನುಗುಣವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ರಾಜ್ಯದಿಂದ ರಾಜ್ಯಕ್ಕೆ ವ್ಯತ್ಯಾಸ ಇರುತ್ತದೆ. ಎಚ್‌ಪಿಸಿಎಲ್ ಜಾಲತಾಣದ ಮಾಹಿತಿಯ ಪ್ರಕಾರ, ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 107.28 ರೂಪಾಯಿ ಮತ್ತು ಪ್ರತಿ ಲೀಟರ್ ಡೀಸೆಲ್ ದರ 91.25 ರೂಪಾಯಿ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 101.81 ರೂಪಾಯಿ. ಪ್ರತಿ ಲೀಟರ್ ಡೀಸೆಲ್ ದರ 93.07 ರೂಪಾಯಿ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 116.72 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ಬೆಲೆ 100.94 ರೂಪಾಯಿ.
ಅಂದೇ ಎಚ್ಚರಿಸಿದ್ದ ರಾಹುಲ್ ಗಾಂಧಿ
ಬೆಲೆ ಏರಿಕೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಬ್ಯಾರಲ್ ಒಂದಕ್ಕೆ 100 ಡಾಲರ್ ಆಗಲಿದೆ. ಆಹಾರದ ಬೆಲೆಗಳಲ್ಲಿ ಶೇಕಡಾ 22ರಷ್ಟು ಏರಿಕೆಯಾಗುವ ನಿರೀಕ್ಷೆಯಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು. ಬೆಲೆ ಏರಿಕೆಯ ಬಿಸಿಯಿಂದ ಜನರನ್ನು ರಕ್ಷಿಸಬೇಕು ಎಂದು ಮಾರ್ಚ್ 22ರಂದು ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಎಚ್ಚರಿಸಿದ್ದರು.
ಇದನ್ನೂ ಓದಿ: Narendra Modi: ಮೋದಿ ಫೋಟೋ ಇಟ್ಟುಕೊಂಡ ಮುಸ್ಲಿಂ ವ್ಯಕ್ತಿಗೆ ಹೊಡೆದು ಮನೆ ಖಾಲಿ ಮಾಡುವಂತೆ ಬೆದರಿಸಿದ ಮಾಲೀಕ
ಆದರೂ ಕೇಂದ್ರ ಸರ್ಕಾರ ಏನೇನೂ ಕ್ರಮ ಕೈಗೊಂಡಿಲ್ಲದರಿವುದರಿಂದ ಈಗ ಪ್ರತಿ ನಿತ್ಯ ಪೆಟ್ರೋಲ್ ಮತ್ತು ಡೀಸೆಲೆ ಬೆಲೆ ಏರಿಕೆ ಆಗುತ್ತಲೇ ಇದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ