HOME » NEWS » National-international » CONTINUED CORONAVIRUS IN THE COUNTRY NUMBER OF INFECTED PERSONS CROSSING 13 LAKHS MAK

CoronaVirus: ದೇಶದಲ್ಲಿ ಮುಂದುವರೆದ ಕೊರೋನಾ ಉಪಟಳ:13 ಲಕ್ಷ ದಾಟಿದ ಸೋಂಕು ಪೀಡಿತರ ಸಂಖ್ಯೆ

ಶುಕ್ರವಾರ ದೇಶದಾದ್ಯಂತ 757 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 31,358ಕ್ಕೆ ಏರಿಕೆಯಾಗಿದೆ.

news18-kannada
Updated:July 25, 2020, 11:14 AM IST
CoronaVirus: ದೇಶದಲ್ಲಿ ಮುಂದುವರೆದ ಕೊರೋನಾ ಉಪಟಳ:13 ಲಕ್ಷ ದಾಟಿದ ಸೋಂಕು ಪೀಡಿತರ ಸಂಖ್ಯೆ
ಸಾಂದರ್ಭಿಕ ಚಿತ್ರ.
  • Share this:
ನವದೆಹಲಿ (ಜುಲೈ 25): ಕೊರೋನಾ ಸೋಂಕು ಹರಡುವಿಕೆ ವ್ಯಾಪಕವಾಗಿದ್ದರೂ ಲಾಕ್‌ಡೌನ್ ನಿಯಮಗಳನ್ನು ಸಡಿಲಿಸಿ ಅನ್ ಲಾಕ್ 1 ಮತ್ತು 2 ಅನ್ನು ಜಾರಿ ಮಾಡಿದ ಪರಿಣಾಮ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಲೇ ಇದೆ. ಪರಿಣಾಮವಾಗಿ ದೇಶದಲ್ಲಿ ಮಾರಣಾಂತಿಕ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಇದೀಗ 13 ಲಕ್ಷದ ಗಡಿ ದಾಟಿದೆ.

ಭಾರತದಲ್ಲಿ ಜುಲೈ 1ರಂದು 19 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 2ರಂದು 20 ಸಾವಿರ, ಜುಲೈ 3ರಂದು 22  ಸಾವಿರ ಹಾಗೂ ಜುಲೈ 4ರಿಂದ 24 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದರೆ, ದಿನ ಕಳೆದಂತೆ ಈ ಸಂಖ್ಯೆ ದ್ವಿಗುಣವಾಗುತ್ತಲೇ ಸಾಗುತ್ತಿದೆ. ಪರಿಣಾಮ ಶುಕ್ರವಾರದ ವೇಳೆಗೆ 48,916 ಹೊಸ ಪ್ರಕರಣಗಳು ವರದಿಯಾಗಿದೆ. ಇದರಿಂದ ದೇಶದ ಕೊರೋನಾ ಸೋಂಕು ಪೀಡಿತರ ಸಂಖ್ಯೆ 13,36,861ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ : ರಾಜಸ್ಥಾನದ ಸರ್ಕಾರವನ್ನು ಉರುಳಿಸಲು ಬಿಜೆಪಿ ಷಡ್ಯಂತ್ರ ಸ್ಪಷ್ಟವಾಗಿದೆ; ರಾಹುಲ್ ಗಾಂಧಿ

ಇದಲ್ಲದೆ ಶುಕ್ರವಾರ ದೇಶದಾದ್ಯಂತ 757 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 31,358ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 8,49,431 ಜನ ಮಾತ್ರ. ದೇಶದಲ್ಲಿ ಇನ್ನೂ 4,56,071 ಜನರಲ್ಲಿ ಕೊರೋನಾ ಸಕ್ರೀಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.
Published by: MAshok Kumar
First published: July 25, 2020, 11:14 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories