• Home
 • »
 • News
 • »
 • national-international
 • »
 • ನಿರ್ಭಯಾ ಕೇಸ್​​: ಕ್ಷಮಾದಾನ ಅರ್ಜಿ ತಿರಸ್ಕಾರ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಅತ್ಯಾಚಾರಿ

ನಿರ್ಭಯಾ ಕೇಸ್​​: ಕ್ಷಮಾದಾನ ಅರ್ಜಿ ತಿರಸ್ಕಾರ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಅತ್ಯಾಚಾರಿ

ರೇಖಾಚಿತ್ರ- ಮೀರ್ ಸುಹೈಲ್

ರೇಖಾಚಿತ್ರ- ಮೀರ್ ಸುಹೈಲ್

ಈ ಹಿಂದೆಯೇ ಅಪರಾಧಿ ವಿನಯ್ ಶರ್ಮಾ ಎಂಬಾತ ತಾನು ರಾಷ್ಟ್ರಪತಿಗಳಿಗೆ ಇನ್ನೂ ಕ್ಷಮಾದಾನದ ಅರ್ಜಿ ಸಲ್ಲಿಸದ ಕಾರಣ ಮರಣದಂಡನೆ ತೀರ್ಪಿಗೆ ತಡೆ ನೀಡಬೇಕೆಂದು ಮನವಿ ಸಲ್ಲಿಸಿದ್ದ. ಈ ಮನವಿ ಪುರಸ್ಕರಿಸಿದ್ದ ನ್ಯಾಯಲಯವೂ ಮುಂದಿನ ಆದೇಶ ಬರುವವರೆಗೂ ಮರಣದಂಡನೆ ಶಿಕ್ಷೆಗೆ ತಡೆ ನೀಡಿತ್ತು.

 • Share this:

  ನವದೆಹಲಿ(ಫೆ.11): ನಿರ್ಭಯಾ ಕೊಲೆ ಅತ್ಯಾಚಾರ ಪ್ರಕರಣದ ನಾಲ್ವರು ಅತ್ಯಾಚಾರಿಗಳ ಪೈಕಿ ವಿನಯ್​​​ ಕುಮಾರ್​​ ಶರ್ಮಾ ಎಂಬಾತ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿರಸ್ಕರಿಸಿದ್ದಾರೆ. ಇದನ್ನು ಪ್ರಶ್ನಿಸಿ ಈಗ ಅಪರಾಧಿ ವಿನಯ್‌ ಕುಮಾರ್‌ ಶರ್ಮಾ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾನೆ.


  ಕಳೆದ ಜ.29ನೇ ತಾರಿಕಿನಂದು ನಿರ್ಭಯಾ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅತ್ಯಾಚಾರಿಗಳ ಪೈಕಿ ವಿನಯ್ ಶರ್ಮಾ ಎಂಬಾತ ಕ್ಷಮಾದಾನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರಪತಿಗಳ ಅವಗಾಹನೆಗೆ ಕಳುಹಿಸಿಕೊಡಲಾಗಿತ್ತು. ಆದರೆ, ವಿನಯ್ ಶರ್ಮಾನ ಈ ಮನವಿಯನ್ನು ತಿರಸ್ಕರಿಸುವಂತೆ ಕೇಂದ್ರ ಗೃಹ ಸಚಿವಾಲಯ ಶಿಫಾರಸು ಕೂಡ ಮಾಡಿತ್ತು. ಅದರಂತೆಯೇ ರಾಷ್ಟ್ರಪತಿಗಳು ಕ್ಷಮಾದಾನದ ಅರ್ಜಿಯನ್ನು ತಿರಸ್ಕರಿಸಿದ್ದರು. ಆದರೀಗ ರಾಷ್ಟ್ರಪತಿಗಳ ಈ ನಡೆಯನ್ನು ಪ್ರಶ್ನಿಸಿ ಆರೋಪಿ ಪರ ವಕೀಲ ವಕೀಲ ಎ ಪಿ ಸಿಂಗ್ ಸುಪ್ರೀಂಕೋರ್ಟ್​ ಮೊರೆ ಹೋಗಿದ್ದು, ಮರಣ ದಂಡನೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸುವಂತೆ ಮನವಿ ಮಾಡಿದ್ಧಾರೆ.


  ಒಂದು ವಾರದ ಹಿಂದೆಯಷ್ಟೇ ಪ್ರಕರಣದಲ್ಲಿ ಆರೋಪಿಗಳಿಗೆ ನೀಡಲಾದ ಮರಣದಂಡನೆ ಯಾವುದೇ ಕಾರಣಕ್ಕೂ ತಡವಾಗಬಾರದು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ದೆಹಲಿ ಹೈಕೋರ್ಟ್​​ಗೆ ತಿಳಿಸಿದ್ದರು. ಪ್ರಕರಣ ಸಂಬಂಧ ನಾಲ್ವರು ಅಪರಾಧಿಗಳಿಗೆ ವಿಧಿಸಿದ್ದ ಮರಣದಂಡನೆ ಆದೇಶಕ್ಕೆ ತಡೆ ನೀಡಿರುವ ಕುರಿತಂತೆ ದೆಹಲಿ ಹೈಕೋರ್ಟ್​​ನಲ್ಲಿ ವಿಶೇಷ ಕಲಾಪ ನಡೆಯಿತು. ಈ ವಿಶೇಷ ಕಲಾಪದಲ್ಲಿ ತಮ್ಮ ವಾದ ಮಂಡಿಸುವ ವೇಳೆ ತುಷಾರ್​​ ಮೆಹ್ತಾ ಹೀಗೆ ದೆಹಲಿ ಹೈಕೋರ್ಟ್​ಗೆ ಮನವಿ ಮಾಡಿದರು.


  ಇನ್ನು ನಿರ್ಭಯಾ ಹಂತಕರಿಗೆ ಫೆಬ್ರವರಿ 01ರಂದು ವಿಧಿಸಬೇಕಾಗಿದ್ದ ಗಲ್ಲು ಶಿಕ್ಷೆಗೆ ಶುಕ್ರವಾರದಂದು ತಡೆ ನೀಡಿದ್ದ ಪಟಿಯಾಲ ಹೌಸ್ ನ್ಯಾಯಾಲಯ ಆದೇಶವನ್ನು ಪ್ರಶ್ನಿಸಿ ಕೇಂದ್ರ ಗೃಹ ಸಚಿವಾಲಯ ದೆಹಲಿ ಹೈಕೋರ್ಟ್​​ ಮೆಟ್ಟಿಲೇರಿತ್ತು. ನಂತರ ಕೇಂದ್ರ ಸಲ್ಲಿಸಿದ್ದ ಮನವಿ ಅರ್ಜಿಯ ವಿಚಾರಣೆ ಮುಕ್ತಾಯಗೊಂಡಿದ್ದು ನ್ಯಾಯಾಧೀಶರು ತಮ್ಮ ತೀರ್ಪನ್ನು ಕಾಯ್ದಿರಿಸಿದ್ದರು.


  ಇದನ್ನೂ ಓದಿ: ನಿರ್ಭಯಾ ಅತ್ಯಾಚಾರ ಪ್ರಕರಣ: ಅಪರಾಧಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ, ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದ ಸುಪ್ರೀಂಕೋರ್ಟ್​


  ಈ ಹಿಂದೆಯೇ ಅಪರಾಧಿ ವಿನಯ್ ಶರ್ಮಾ ಎಂಬಾತ ತಾನು ರಾಷ್ಟ್ರಪತಿಗಳಿಗೆ ಇನ್ನೂ ಕ್ಷಮಾದಾನದ ಅರ್ಜಿ ಸಲ್ಲಿಸದ ಕಾರಣ ಮರಣದಂಡನೆ ತೀರ್ಪಿಗೆ ತಡೆ ನೀಡಬೇಕೆಂದು ಮನವಿ ಸಲ್ಲಿಸಿದ್ದ. ಈ ಮನವಿ ಪುರಸ್ಕರಿಸಿದ್ದ ನ್ಯಾಯಲಯವೂ ಮುಂದಿನ ಆದೇಶ ಬರುವವರೆಗೂ ಮರಣದಂಡನೆ ಶಿಕ್ಷೆಗೆ ತಡೆ ನೀಡಿತ್ತು.


  2012ರ ಡಿ. 16ರಂದು 23 ವರ್ಷದ ಅರೆ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಆರು ಜನರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಬಸ್ಸಿನೊಳಗೆ ಈ ಪೈಶಾಚಿಕ ಕೃತ್ಯ ಎಸಗಿ ಆಕೆಯನ್ನು ತೀರಾ ಗಂಭೀರವಾಗಿ ಗಾಯಗೊಳಿಸಿದ ಬಳಿಕ ಬಸ್ಸಿನಿಂದ ಹೊರ ಎಸೆದುಹೋಗಿದ್ದರು. ಬಹು ಅಂಗಾಂಗ ವೈಫಲ್ಯಗೊಂಡು ಈ ವಿದ್ಯಾರ್ಥಿನಿಯ ಕೆಲ ದಿನಗಳ ಬಳಿಕ ಅಸು ನೀಗಿದ್ದರು. ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಲ್ಲಾ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಅವರಲ್ಲಿ ಒಬ್ಬಾತ ಬಾಲಾಪರಾಧಿಯಾಗಿದ್ದ. ರಾಮ್ ಸಿಂಗ್ ಎಂಬ ಮತ್ತೊಬ್ಬ ಆರೋಪಿ ತಿಹಾರ್ ಜೈಲಿನ ಕೋಣೆಯಲ್ಲೇ ನೇಣಿಗೆ ಶರಣಾಗಿದ್ದ. ಉಳಿದ ನಾಲ್ವರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.

  Published by:Ganesh Nachikethu
  First published: