ಬೆಂಗಳೂರು: ಚೀನಾದಲ್ಲಿ (China) ಕೊರೋನಾ (Corona Virus) ಆರ್ಭಟ ಶುರುವಾಗಿದ್ದು, ಈಗಾಗಲೇ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಸೋಂಕಿಗೆ ಅನೇಕ ಮಂದಿ ಬಲಿಯಾಗುತ್ತಿದ್ದಾರೆ. ಇನ್ನೂ ಚೀನಾದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದಂತೆ ದೇಶದಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ (Union Health Minister Mansukh Mandaviya) ಮನವಿ ಮಾಡಿದ್ದಾರೆ. ಜೊತೆಗೆ ಜನನಿಬಿಡ ಪ್ರದೇಶಗಳಲ್ಲಿ ಮಾಸ್ಕ್ (Mask) ಧರಿಸುವಂತೆ ಸಲಹೆ ನೀಡಲಾಗಿದೆ. ಚೀನಾದಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು, ಈ ಬೆನ್ನಲ್ಲೇ ಭಾರತದಲ್ಲಿ ಇಂದು ಮನ್ಸುಖ್ ಮಾಂಡವೀಯ ದೇಶದ ಕೋವಿಡ್ ಪರಿಸ್ಥಿತಿಯ ಕುರಿತು ಉನ್ನತ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಸಭೆ ನಡೆಸಿದರು.
In view of the rising cases of #Covid19 in some countries, reviewed the situation with experts and officials today.
COVID is not over yet. I have directed all concerned to be alert and strengthen surveillance.
We are prepared to manage any situation. pic.twitter.com/DNEj2PmE2W
— Dr Mansukh Mandaviya (@mansukhmandviya) December 21, 2022
ಕೊರೋನಾ ಇನ್ನೂ ಮುಗಿದಿಲ್ಲ, ಎಲ್ಲರೂ ಎಚ್ಚರದಿಂದ ಇರಿ
ಸಭೆ ನಂತರ ಟ್ವೀಟ್ ಮಾಡಿರುವ ಅವರು, COVID ಇನ್ನೂ ಮುಗಿದಿಲ್ಲ. ಎಲ್ಲರೂ ಎಚ್ಚರದಿಂದ ಇರುವಂತೆ ಮತ್ತು ಕಣ್ಗಾವಲು ಬಲಪಡಿಸುವಂತೆ ಸೂಚಿಸಿದ್ದೇನೆ. ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ನಾವು ಸಿದ್ಧರಾಗಿದ್ದೇವೆ. ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಇಂದು ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಪರಿಸ್ಥಿತಿ ಕುರಿತಂತೆ ಚರ್ಚೆ ನಡೆಸಲಾಯಿತು.
ಕೋವಿಡ್ ಕುರಿತ ರಾಷ್ಟ್ರೀಯ ಕಾರ್ಯಪಡೆಯ ಮುಖ್ಯಸ್ಥರಾಗಿರುವ ಎನ್ಐಟಿಐ ಆಯೋಗದ ಸದಸ್ಯ ವಿಕೆ ಪಾಲ್ ಮಾತನಾಡಿ, ಯಾರೂ ಭಯಪಡುವ ಅಗತ್ಯವಿಲ್ಲ. ಸಾಕಷ್ಟು ಟೆಸ್ಟ್ಗಳನ್ನು ನಡೆಸಲಾಗುತ್ತಿದೆ. ಜನಸಂದಣಿ ಇರುವ ಪ್ರದೇಶಗಳಲ್ಲಿ ಎಲ್ಲರೂ ಮಾಸ್ಕ್ ಧರಿಸಬೇಕು ಎಂದ ಅವರು, ಅಂತಾರಾಷ್ಟ್ರೀಯ ವಿಮಾನ ಪ್ರಯಾಣದ ಮಾರ್ಗಸೂಚಿಗಳಲ್ಲಿ ಇನ್ನೂ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದರು.
ವಿದೇಶದಿಂದ ಆಗಮಿಸುವ ಪ್ರಯಾಣಿಕರಿಗೆ ಮಾರ್ಗಸೂಚಿ
ಇದಕ್ಕೂ ಮುನ್ನ, ಪರಿಶೀಲನಾ ಸಭೆಯಲ್ಲಿ ಪ್ರಾಥಮಿಕವಾಗಿ ಆರು ಪ್ರಮುಖ ಅಂಶಗಳ ಕುರಿತಂತೆ ಚರ್ಚೆಗಳು ನಡೆದಿದೆ ಎಂದು ಮೂಲಗಳ ಪ್ರಕಾರ ತಿಳಿದುಬಂದಿದೆ. ವಿದೇಶದಿಂದ ಆಗಮಿಸುವ ಪ್ರಯಾಣಿಕರಿಗೆ ಮಾರ್ಗಸೂಚಿಗಳನ್ನು ಹಾಕುವುದು ಮತ್ತು ಕೋವಿಡ್ನ ಹೊಸ ರೂಪಾಂತರದ ಕುರಿತು ತಜ್ಞರೊಂದಿಗೆ ಸಮಾಲೋಚನೆಯನ್ನು ನಡೆಸಲಾಗುವುದು ಹಾಗೂ ಮುಂಬರುವ ಹೊಸ ವರ್ಷದ ವೇಳೆ ಕೊರೋನಾ ಹೆಚ್ಚಳವಾಗದಂತೆ ತಡೆಗಟ್ಟಲು ಜಾರಿಗೆ ತರಬೇಕಾದ ಹೊಸ ಮಾರ್ಗಸೂಚಿಗಳ ಬಗ್ಗೆಯೂ ಚರ್ಚಿಸಲಾಗಿದೆ.
ಮತ್ತೊಂದೆಡೆ ಕೋವಿಡ್–19 ನಿಯಮಾವಳಿಗಳನ್ನು ಪಾಲನೆ ಮಾಡಿ. ಸಾಧ್ಯವಾಗದಿದ್ದರೆ ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸಿ ಎಂದು ಕಾಂಗ್ರೆಸ್ಗೆ ಕೇಂದ್ರ ಸರ್ಕಾರ ಸೂಚಿಸಿದೆ.
ಕೋವಿಡ್ 19 ದೇಶದಲ್ಲಿ ಹರಡದಂತೆ ನೋಡಿಕೊಳ್ಳುವುದು ನನ್ನ ಕರ್ತವ್ಯ
ಈ ಕುರಿತಂತೆ ಕೂಡ ಪ್ರತಿಕ್ರಿಯಿಸಿದ ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಅವರು, ಕೋವಿಡ್ 19 ದೇಶದಲ್ಲಿ ಹರಡದಂತೆ ನೋಡಿಕೊಳ್ಳುವುದು ನನ್ನ ಕರ್ತವ್ಯ. ಆದರೆ ಒಬ್ಬ ಮಂತ್ರಿಯನ್ನು ಪ್ರಶ್ನಿಸುವುದು ಹೇಗೆ ಎಂಬುವುದನ್ನು ಆಲೋಚಿಸುತ್ತಿದ್ದರೆ, ಅವರಿಗೆ ನಾವೇನು ಮಾಡಬೇಕು? ಈ ರೀತಿ ಪ್ರಶ್ನಿಸುವುದು ನನ್ನ ಕರ್ತವ್ಯಕ್ಕೆ ಅಡ್ಡಿಪಡಿಸಿದಂತೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Covid 19 Cases: ಚೀನಾಗೆ ಶಾಕ್, 90 ದಿನಗಳಲ್ಲಿ ಶೇಕಡಾ 60 ರಷ್ಟು ಜನಸಂಖ್ಯೆಗೆ ವ್ಯಾಪಿಸಲಿದೆ ಕೊರೋನಾ!
3 Rajasthan MPs had written to me that a number of
Congress' Bharat Jodo Yatra participants have been detected Covid19 positive. Himachal Pradesh CM also tested positive after attending this yatra: Union Health Minister Dr Mansukh Mandaviya pic.twitter.com/OPaPcQvfGl
— ANI (@ANI) December 21, 2022
ರಾಜಸ್ಥಾನದ ಮೂವರು ಸಂಸದರು ನನಗೆ ಪತ್ರ ಬರೆದಿದ್ದರು. ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದವರಲ್ಲಿ ಕೋವಿಡ್-19 ಪತ್ತೆಯಾಗಿದೆ. ಈ ಯಾತ್ರೆಯಲ್ಲಿ ಪಾಲ್ಗೊಂಡ ನಂತರ ಹಿಮಾಚಲ ಪ್ರದೇಶ ಸಿಎಂ ಕೂಡ ಕೊರೋನಾ ಪಾಸಿಟಿವ್ ಆಗಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ