ಕೊರೋನಾಗೆ ತತ್ತರಿಸಿದ ವಿಶ್ವದ ದೊಡ್ಡಣ್ಣ; ಒಂದೇ ದಿನ ಅಮೆರಿಕದಲ್ಲಿ 10 ಸಾವಿರ ಹೊಸ ಪ್ರಕರಣ

ಶಾಕಿಂಗ್​ ವಿಚಾರ ಏನೆಂದೆ ಕೊರೋನಾ ವೈರಸ್​ ಸೋಂಕಿತರ ಸಂಖ್ಯೆಯಲ್ಲಿ ಅಮೆರಿಕ ಚೀನಾ ಹಾಗೂ ಇಟಲಿಯನ್ನು ಹಿಂದಿಕ್ಕಿದೆ. ಇದು ಅಲ್ಲಿನ ಜನತೆಯಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.

news18-kannada
Updated:March 27, 2020, 8:28 AM IST
ಕೊರೋನಾಗೆ ತತ್ತರಿಸಿದ ವಿಶ್ವದ ದೊಡ್ಡಣ್ಣ; ಒಂದೇ ದಿನ ಅಮೆರಿಕದಲ್ಲಿ 10 ಸಾವಿರ ಹೊಸ ಪ್ರಕರಣ
ಸಾಂದರ್ಭಿಕ ಚಿತ್ರ
  • Share this:
ನ್ಯೂಯಾರ್ಕ್ (ಮಾ.27)​: ಕೊರೋನಾ ವೈರಸ್​ಗೆ ಅಮೆರಿಕ ಅಕ್ಷರಶಃ ನಲುಗಿದೆ. ವಿಶ್ವದ ಮುಂದುವರಿದ ರಾಷ್ಟ್ರಗಳಲ್ಲಿ ಮುಂಚೂಣಿಯಲ್ಲಿದ್ದರೂ ಕೊರೋನಾ ವೈರಸ್​ ತಡೆಯಲು ಮಾತ್ರ ಅಮೆರಿಕದ ಬಳಿ ಸಾಧ್ಯವಾಗುತ್ತಿಲ್ಲ. ಪರಿಣಾಮ ಗುರುವಾರ ಒಂದೇ ದಿನ ಅಮೆರಿಕದಲ್ಲಿ 10 ಸಾವಿರ ಪ್ರಕರಣ ದಾಖಲಾಗಿದೆ.

ದೇಶವೊಂದರಲ್ಲಿ ಒಂದೇ ದಿನ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಕೊರೋನಾ ವೈರಸ್​ ಪ್ರಕರಣ ದಾಖಲಾಗಿದ್ದು ವಿಶ್ವದಲ್ಲಿ ಇದೇ ಮೊದಲು ಎನ್ನಲಾಗಿದೆ. ಈ ಮೂಲಕ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 85,327ಕ್ಕೆ ಏರಿಕೆ ಆಗಿದೆ. ನಿನ್ನೆ ಒಂದೇ ದಿನ ಅಮೆರಿಕದಲ್ಲಿ 220 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ1,293ಕ್ಕೆ ಏರಿಕೆ ಆಗಿದೆ.

ಶಾಕಿಂಗ್​ ವಿಚಾರ ಏನೆಂದೆ ಕೊರೋನಾ ವೈರಸ್​ ಸೋಂಕಿತರ ಸಂಖ್ಯೆಯಲ್ಲಿ ಅಮೆರಿಕ ಚೀನಾ ಹಾಗೂ ಇಟಲಿಯನ್ನು ಹಿಂದಿಕ್ಕಿದೆ. ಇದು ಅಲ್ಲಿನ ಜನತೆಯಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಅಲ್ಲದೆ, ಮುಂದಿನ ದಿನಗಖಳಲ್ಲಿ ಮತ್ತಷ್ಟು ಸಾವು ಸಂಭವಿಸಬಹುದು ಎಂದು ಅಮೆರಿಕ ಅಭಿಪ್ರಾಯ ಪಟ್ಟಿದೆ.

ಇದನ್ನೂ ಓದಿ: ಒಂದೇ ದಿನದಲ್ಲಿ 88 ಹೊಸ ಪ್ರಕರಣಗಳು; ದೇಶದಲ್ಲಿ 700ರ ಗಡಿ ಮುಟ್ಟಿದ ಕೊರೋನಾ ಸೋಂಕಿತರ ಸಂಖ್ಯೆ

ಇನ್ನು, ಇಟಲಿಯಲ್ಲಿ ಸದ್ಯದ ಮಟ್ಟಿಗೆ ಪರಿಸ್ಥಿತಿ ನಿಯಂತ್ರಣಕ್ಕೆ ಬರು ಲಕ್ಷಣ ಗೋಚರವಾಗುತ್ತಿಲ್ಲ. ಬುಧವಾರ ಒಂದೇ ದಿನ ಇಟಲಿಯಲ್ಲಿ 712 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 8,215ಕ್ಕೆ ಏರಿಕೆ ಆಗಿದೆ. ಒಟ್ಟು 80 ಸಾವಿರ ಕೊರೋನಾ ಸೋಂಕಿತರಿದ್ದಾರೆ. ಸಾವಿನ ಸಂಖ್ಯೆಯಲ್ಲಿ ಸ್ಪೇನ್​ ಚೀನಾವನ್ನು ಹಿಂದಿಕ್ಕಿದೆ. ಸ್ಪೇನ್​ನಲ್ಲಿ ಈವರೆಗೆ 4365 ಸಾವುಗಳು ಸಂಭವಿಸಿವೆ. ಇನ್ನು, ಕೊರೋನಾ ಪೀಡಿತರ ಸಂಖ್ಯೆ 57 ಸಾವಿರದ ಗಡಿ ದಾಟಿದೆ.
First published:March 27, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading