Coronavirus India Updates: ಭಾರತದಲ್ಲಿ 61 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ

ಸೆಪ್ಟೆಂಬರ್ 28ರಂದು 70,589 ಪ್ರಕರಣಗಳು ಕಂಡುಬಂದಿದ್ದು ಇದರಿಂದ ದೇಶದ ಕೊರೊನಾ ಪೀಡಿತರ ಸಂಖ್ಯೆ 61,45,292ಕ್ಕೆ ಏರಿಕೆಯಾಗಿದೆ. ಇದಲ್ಲದೆ ಸೋಮವಾರ 776 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ.

news18-kannada
Updated:September 29, 2020, 10:26 AM IST
Coronavirus India Updates: ಭಾರತದಲ್ಲಿ 61 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ,(ಸೆ. 29): ದೇಶದಲ್ಲಿ ಕೊರೋನಾ ಸೋಂಕು ಹರಡುವಿಕೆ ಸುನಾಮಿ ಸ್ವರೂಪ ಪಡೆದುಕೊಂಡಿದ್ದು, ಅತಿ ಹೆಚ್ಚು ಕೊರೊನಾ ಸೋಂಕು ಪೀಡಿತರರಿರುವ ದೇಶಗಳ ಪಟ್ಟಿಯಲ್ಲಿ ಭಾರತವು ಮೊದಲನೆ ಸ್ಥಾನದತ್ತ ಬಿರಬಿರನೆ ಸಾಗುತ್ತಿದೆ. ಮೊದಲು ಪ್ರತಿದಿನ ಸುಮಾರು ಒಂದು ಲಕ್ಷ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಅಲ್ಲದೇ ದೇಶದಲ್ಲಿದ ಕೊರೋನಾ ಸೋಂಕಿತರ ಸಂಖ್ಯೆ 62 ಲಕ್ಷ ದಾಟಿದೆ. ದೇಶದಲ್ಲಿ ಸೆಪ್ಟೆಂಬರ್ 2ರಿಂದ 80 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್ದವು. ಸೆಪ್ಟೆಂಬರ್ 5ರಿಂದ ಪ್ರತಿದಿನ 90 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದವು. ಸೆಪ್ಟೆಂಬರ್ 17ರಿಂದ 95ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿದ್ದವು. ಇದಾದ ಬಳಿಕ  ಸೆಪ್ಟೆಂಬರ್ 20ರಿಂದ ಇಳಿಕೆಯಾಗಿದೆ. ಸೆಪ್ಟೆಂಬರ್ 20ರಂದು 86,961 ಪ್ರಕರಣಗಳು, ಸೆಪ್ಟೆಂಬರ್ 21ರಂದು 75,083 ಪ್ರಕರಣಗಳು, ಸೆಪ್ಟೆಂಬರ್ 22ರಂದು 83,347 ಪ್ರಕರಣಗಳು, ಸೆಪ್ಟೆಂಬರ್ 23ರಂದು 86,508 ಪ್ರಕರಣಗಳು, ಸೆಪ್ಟೆಂಬರ್ 24ರಂದು 86,052, ಸೆಪ್ಟೆಂಬರ್ 25ರಂದು 85,362 ಪ್ರಕರಣಗಳು, ಸೆಪ್ಟೆಂಬರ್ 26ರಂದು 88,600 ಪ್ರಕರಣಗಳು ಹಾಗೂ ಸೆಪ್ಟೆಂಬರ್ 27ರಂದು 82,170 ಪ್ರಕರಣಗಳು ಪತ್ತೆಯಾಗಿದ್ದವು.

ಸೆಪ್ಟೆಂಬರ್ 28ರಂದು 70,589 ಪ್ರಕರಣಗಳು ಕಂಡುಬಂದಿದ್ದು ಇದರಿಂದ ದೇಶದ ಕೊರೊನಾ ಪೀಡಿತರ ಸಂಖ್ಯೆ 61,45,292ಕ್ಕೆ ಏರಿಕೆಯಾಗಿದೆ. ಇದಲ್ಲದೆ ಸೋಮವಾರ 776 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 96 ಸಾವಿರದ ಗಡಿ‌ ದಾಟಿದ್ದು 96,318ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾದಿಂದ ಗುಣ ಆದವರು 51,01,398 ಜನ ಮಾತ್ರ. ಇನ್ನೂ ಸಕ್ರಿಯವಾಗಿರುವ ಪ್ರಕರಣಗಳ ಸಂಖ್ಯೆ 9,47,576 ಎಂದು ಕೇಂದ್ರ ಆರೋಗ್ಯ ಇಲಾಖೆಯು ಮಾಹಿತಿ ಬಿಡುಗಡೆ ಮಾಡಿದೆ.

ಉತ್ತರ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ದಲಿತ ಯುವತಿ ಇಂದು ಸಾವು

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಸೆಪ್ಟೆಂಬರ್ 1ರಂದು 78,357, ಸೆಪ್ಟೆಂಬರ್ 2ರಂದು 83,883, ಸೆಪ್ಟೆಂಬರ್ 4ರಂದು 86,432, ಸೆಪ್ಟೆಂಬರ್ 5ರಂದು 90,633, ಸೆಪ್ಟೆಂಬರ್ 6ರಂದು 90,802, ಸೆಪ್ಟೆಂಬರ್ 7ರಂದು 75,809, ಸೆಪ್ಟೆಂಬರ್ 8ರಂದು 89,706, ಸೆಪ್ಟೆಂಬರ್ 9ರಂದು 95,735, ಸೆಪ್ಟೆಂಬರ್ 10ರಂದು 96,551, ಸೆಪ್ಟೆಂಬರ್ 11ರಂದು 97,570, ಸೆಪ್ಟೆಂಬರ್ 12ರಂದು 94,372, ಸೆಪ್ಟೆಂಬರ್ 13ರಂದು 92,071, ಸೆಪ್ಟೆಂಬರ್ 14ರಂದು 83,809, ಸೆಪ್ಟೆಂಬರ್ 15ರಂದು 90,123 ಪ್ರಕರಣಗಳು ಪತ್ತೆಯಾಗಿವೆ.

ಸೆಪ್ಟೆಂಬರ್ 16ರಂದು 97,894, ಸೆಪ್ಟೆಂಬರ್ 17ರಂದು 96,424, ಸೆಪ್ಟೆಂಬರ್ 18ರಂದು 93,337, ಸೆಪ್ಟೆಂಬರ್ 19ರಂದು 92,605 ಸೆಪ್ಟೆಂಬರ್ 20ರಂದು‌ 86,961, ಸೆಪ್ಟೆಂಬರ್ 21ರಂದು 75,083 ಸೆಪ್ಟೆಂಬರ್ 22ರಂದು 83,347, ಸೆಪ್ಟೆಂಬರ್ 23ರಂದು 86,508, ಸೆಪ್ಟೆಂಬರ್ 24ರಂದು 86,052, ಸೆಪ್ಟಂಬರ್ 25ರಂದು 85,362, ಸೆಪ್ಟೆಂಬರ್ 26ರಂದು 88,600, ಸೆಪ್ಟೆಂಬರ್ 27ರಂದು 82,170 ಹಾಗೂ ಸೆಪ್ಟೆಂಬರ್ 28ರಂದು‌ 70,589 ಹೊಸ ಪ್ರಕರಣಗಳು ಪತ್ತೆಯಾಗಿವೆ.
Published by: Latha CG
First published: September 29, 2020, 10:26 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading