HOME » NEWS » National-international » CORONAVIRUS INDIA UPDATES CORONA POSITIVE CASES CROSSED 43 LAKH IN INDIA LG

Coronavirus India Updates: ಭಾರತದಲ್ಲಿ 43 ಲಕ್ಷ ದಾಟಿದ‌ ಕೊರೋನಾ ಸೋಂಕಿತರ ಸಂಖ್ಯೆ

ಮಂಗಳವಾರ 1,115 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 73 ಸಾವಿರದ ಗಡಿ‌ ದಾಟಿದ್ದು 73,890ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾದಿಂದ ಗುಣ ಆದವರು 33,98,844 ಜನ ಮಾತ್ರ.

news18-kannada
Updated:September 9, 2020, 10:16 AM IST
Coronavirus India Updates: ಭಾರತದಲ್ಲಿ 43 ಲಕ್ಷ ದಾಟಿದ‌ ಕೊರೋನಾ ಸೋಂಕಿತರ ಸಂಖ್ಯೆ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ(ಸೆ. 9): ದೇಶದಲ್ಲಿ ಕೊರೋನಾ ಸೋಂಕು ಹರಡುವಿಕೆ ಸುನಾಮಿ ಸ್ವರೂಪ ಪಡೆದುಕೊಂಡಿದ್ದು ಅತಿ ಹೆಚ್ಚು ಕೊರೊನಾ ಸೋಂಕು ಪೀಡಿತರರಿರುವ ದೇಶಗಳ ಪಟ್ಟಿಯಲ್ಲಿ ಭಾರತವು ಬ್ರಿಜಿಲ್ ಅನ್ನು ಹಿಂದಿಕ್ಕಿ ಎರಡನೇ ಸ್ಥಾನ ತಲುಪಿತ್ತು‌‌. ಈಗ ದೇಶದ ಕೊರೊನಾ ಸೋಂಕು ಪೀಡಿತರ ಸಂಖ್ಯೆ 43 ಲಕ್ಷದ ಗಡಿ ದಾಟಿದೆ. ದೇಶದಲ್ಲಿ ಆಗಸ್ಟ್ 6 ನಂತರ ಪ್ರತಿ ದಿನ 60 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕು ಪ್ರಕರಣಗಳು ದಾಖಲಾಗುವ ಟ್ರೆಂಡ್ ಶುರುವಾಗಿತ್ತು. ಆಗಸ್ಟ್‌ 19ರ ನಂತರ ಪ್ರತಿದಿನ ಸುಮಾರು70 ಸಾವಿರ ಪ್ರಕರಣಗಳು ಕಾಣಿಸಿಕೊಳ್ಳಲಾರಂಭಿಸಿದವು. ಆಗಸ್ಟ್ 26ರಿಂದ 75 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು.‌ ಸೆಪ್ಟೆಂಬರ್ 2ರಿಂದ 80 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್ದವು. ಸೆಪ್ಟೆಂಬರ್ 5ರಿಂದ ಪ್ರತಿದಿನ 90 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಲು ಆರಂಭಿಸಿದವು.

ಸೆಪ್ಟೆಂಬರ್ 5ರಂದು  90,633 ಪ್ರಕರಣಗಳು ಹಾಗೂ ಸೆಪ್ಟೆಂಬರ್ 6ರಂದು 90,802 ಪ್ರಕರಣಗಳು ಪತ್ತೆಯಾಗಿದ್ದವು. ಈಗ ಸ್ವಲ್ಪ ಕಡಿಮೆಯಾಗಿದೆ. ಸೆಪ್ಟೆಂಬರ್ 7ರಂದು 75,809 ಪ್ರಕರಣಗಳು ವರದಿಯಾಗಿವೆ. ಸೆಪ್ಟೆಂಬರ್  8ರಂದು 89,706 ಪ್ರಕರಣಗಳು ಕಂಡುಬಂದಿವೆ. ಇದರಿಂದ ದೇಶದ ಕೊರೊನಾ ಪೀಡಿತರ ಸಂಖ್ಯೆ 43,70,128ಕ್ಕೆ ಏರಿಕೆಯಾಗಿದೆ.

Bengaluru Weather: ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆ; ಇಂದಿನ ವಾತಾವರಣ ಹೇಗಿರಲಿದೆ?

ಇದಲ್ಲದೆ ಮಂಗಳವಾರ 1,115 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 73 ಸಾವಿರದ ಗಡಿ‌ ದಾಟಿದ್ದು 73,890ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾದಿಂದ ಗುಣ ಆದವರು 33,98,844 ಜನ ಮಾತ್ರ. ಇನ್ನೂ ಸಕ್ರಿಯವಾಗಿರುವ ಪ್ರಕರಣಗಳ ಸಂಖ್ಯೆ 8,97,394 ಎಂದು ಕೇಂದ್ರ ಆರೋಗ್ಯ ಇಲಾಖೆಯು ಮಾಹಿತಿ ಬಿಡುಗಡೆ ಮಾಡಿದೆ.

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಆಗಸ್ಟ್ 1ರಂದು 54,736, ಆಗಸ್ಟ್ 2ರಂದು 52,972, ಆಗಸ್ಟ್ 3ರಂದು 52,050, ಆಗಸ್ಟ್ 4ರಂದು 52,509, ಆಗಸ್ಟ್ 5ರಂದು 56,282, ಆಗಸ್ಟ್ 6ರಂದು 62,538, ಆಗಸ್ಟ್ 7ರಂದು 61,537, ಆಗಸ್ಟ್ 8ರಂದು 64,399, ಆಗಸ್ಟ್ 9ರಂದು 62,064, ಆಗಸ್ಟ್ 10ರಂದು  53,601, ಆಗಸ್ಟ್ 11ರಂದು 60,963, ಆಗಸ್ಟ್ 12ರಂದು 66,999, ಆಗಸ್ಟ್ 13ರಂದು 64,553, ಆಗಸ್ಟ್ 14ರಂದು 65,002, ಆಗಸ್ಟ್ 15ರಂದು 63,489, ಆಗಸ್ಟ್ 16ರಂದು 57,982, ಆಗಸ್ಟ್ 17ರಂದು 55,079, ಆಗಸ್ಟ್ 18ರಂದು 64,531, ಆಗಸ್ಟ್ 19ರಂದು 69,652, ಆಗಸ್ಟ್ 20ರಂದು 68,898, ಆಗಸ್ಟ್ 21ರಂದು 69,878, ಆಗಸ್ಟ್ 22ರಂದು 69,239, ಆಗಸ್ಟ್ 23ರಂದು 61,408, ಆಗಸ್ಟ್‌ 24ರಂದು 60,975, ಆಗಸ್ಟ್ 25ರಂದು 67,151, ಆಗಸ್ಟ್ 26ರಂದು 75,760, ಆಗಸ್ಟ್ 27ರಂದು 77,266, ಆಗಸ್ಟ್ 28ರಂದು 76,472, ಆಗಸ್ಟ್ 29ರಂದು 78,761, ಆಗಸ್ಟ್ 30ರಂದು 78,512, ಆಗಸ್ಟ್ 31ರಂದು 69,921 ಪ್ರಕರಣಗಳು ಪತ್ತೆಯಾಗಿವೆ.
Youtube Video

ಇನ್ನು, ಸೆಪ್ಟೆಂಬರ್ 1ರಂದು 78,357, ಸೆಪ್ಟೆಂಬರ್ 2ರಂದು 83,883, ಸೆಪ್ಟೆಂಬರ್ 4ರಂದು 86,432, ಸೆಪ್ಟೆಂಬರ್ 5ರಂದು 90,633, ಸೆಪ್ಟೆಂಬರ್ 6ರಂದು 90,802, ಸೆಪ್ಟೆಂಬರ್ 7ರಂದು 75,809 ಹಾಗೂ ಸೆಪ್ಟೆಂಬರ್ 8ರಂದು 89,706 ಹೊಸ ಪ್ರಕರಣಗಳು ಪತ್ತೆಯಾಗಿವೆ.
Published by: Latha CG
First published: September 9, 2020, 10:07 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories