HOME » NEWS » National-international » CORONAVIRUS PANDEMIC MAHARASHTRA TO PROMOTE STUDENTS FROM CLASSES 1 TO 8 WITHOUT EXAMS DECISION ON CLASSES 9 11 SOON LG

Coronavirus Pandemic: ಪರೀಕ್ಷೆ ನಡೆಸದೆ 1-8ನೇ ತರಗತಿ ವಿದ್ಯಾರ್ಥಿಗಳನ್ನು ಪಾಸ್ ಮಾಡಿದ ಮಹಾರಾಷ್ಟ್ರ ಸರ್ಕಾರ

ಮಹಾರಾಷ್ಟ್ರದ ಶಿಕ್ಷಣ ಸಚಿವೆ ವರ್ಷಾ ಗಾಯಕ್​ವಾಡ್​ ಟ್ವಿಟ್ಟರ್​​ನಲ್ಲಿ ಈ ವಿಷಯವನ್ನು ಪ್ರಕಟಿಸಿದ್ದಾರೆ. ಪ್ರಸ್ತುತ ಕೋವಿಡ್​ -19 ಸಂದರ್ಭವನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದಲ್ಲಿನ ಎಲ್ಲಾ 1-9ನೇ ತರಗತಿ ವಿದ್ಯಾರ್ಥಿಗಳನ್ನು ಯಾವುದೇ ವಾರ್ಷಿಕ ಪರೀಕ್ಷೆ ನಡೆಸದೆ ಮುಂದಿನ ತರಗತಿಗೆ ಪಾಸ್ ಮಾಡಲಾಗಿದೆ. ಇನ್ನು, 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳ ಬಗ್ಗೆಯೂ ಶೀಘ್ರದಲ್ಲೇ ಒಂದು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

news18-kannada
Updated:April 3, 2021, 4:53 PM IST
Coronavirus Pandemic: ಪರೀಕ್ಷೆ ನಡೆಸದೆ 1-8ನೇ ತರಗತಿ ವಿದ್ಯಾರ್ಥಿಗಳನ್ನು ಪಾಸ್ ಮಾಡಿದ ಮಹಾರಾಷ್ಟ್ರ ಸರ್ಕಾರ
ಪ್ರಾತಿನಿಧಿಕ ಚಿತ್ರ
  • Share this:
ಮಹಾರಾಷ್ಟ್ರ(ಏ.03): ಕೊರೋನಾ ಎರಡನೇ ಅಲೆ ತೀವ್ರತೆ ಹೆಚ್ಚಾಗುತ್ತಿದ್ದು, ದೇಶಾದ್ಯಂತ ಭಯದ ವಾತಾವರಣ ಮನೆಮಾಡಿದೆ. ಕರ್ನಾಟಕದಲ್ಲಿಯೂ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ನಿನ್ನೆ ರಾಜ್ಯ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದೆ. ಹೀಗಾಗಿ ಮಹಾರಾಷ್ಟ್ರ ಸರ್ಕಾರವು ಹಲವಾರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಅದರಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಒಂದು ಮಹತ್ವದ ಕ್ರಮ ತೆಗೆದುಕೊಂಡಿದೆ. ಕೊರೋನಾ ರಣಕೇಕೆ ಹೆಚ್ಚಾಗುತ್ತಿರುವ ಹಿನ್ನೆಲೆ, ಮಹಾರಾಷ್ಟ್ರ ಸರ್ಕಾರವಿ 1ರಿಂದ 8ನೇ ತರಗತಿ ವಿದ್ಯಾರ್ಥಿಗಳನ್ನು ವಾರ್ಷಿಕ ಪರೀಕ್ಷೆ ನಡೆಸದೆ ಪಾಸ್​ ಮಾಡಿದೆ.

ಕಳೆದ ವರ್ಷ ಕೂಡ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೆ ಪಾಸ್ ಮಾಡಲಾಗಿತ್ತು. ಈ ವರ್ಷ ಕೂಡ ಅದೇ ಪರಿಸ್ಥಿತಿ ಮುಂದುವರೆದಿದ್ದು, ಮುಂಜಾಗ್ರತಾ ಕ್ರಮವಾಗಿ ಮಹಾರಾಷ್ಟ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಕೊರೋನಾ ಹೆಚ್ಚಾಗಿರುವ ಹಿನ್ನೆಲೆ, ಶಾಲೆಗಳನ್ನು ಮುಚ್ಚಿರುವ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಸರಿಯಾದ ಶಿಕ್ಷಣ ಸಿಕ್ಕಿಲ್ಲ. ಹೀಗಾಗಿ ಪರೀಕ್ಷೆ ನಡೆಸದೆ ವಿದ್ಯಾರ್ಥಿಗಳನ್ನು ಪಾಸ್ ಮಾಡುವ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. 2020ರ ಮಾರ್ಚ್​ ತಿಂಗಳಿನಿಂದ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವ ಭೀತಿಯಿಂದ ಎಲ್ಲಾ ಶಾಲೆಗಳನ್ನು ಮುಚ್ಚಲಾಗಿದೆ.

ಆಸ್ಪತ್ರೆಗೆ ಬೆಂಕಿ ಬಿದ್ದರೂ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ ರಷ್ಯಾ ವೈದ್ಯರು

ಮಹಾರಾಷ್ಟ್ರದ ಶಿಕ್ಷಣ ಸಚಿವೆ ವರ್ಷಾ ಗಾಯಕ್​ವಾಡ್​ ಟ್ವಿಟ್ಟರ್​​ನಲ್ಲಿ ಈ ವಿಷಯವನ್ನು ಪ್ರಕಟಿಸಿದ್ದಾರೆ. ಪ್ರಸ್ತುತ ಕೋವಿಡ್​ -19 ಸಂದರ್ಭವನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದಲ್ಲಿನ ಎಲ್ಲಾ 1-9ನೇ ತರಗತಿ ವಿದ್ಯಾರ್ಥಿಗಳನ್ನು ಯಾವುದೇ ವಾರ್ಷಿಕ ಪರೀಕ್ಷೆ ನಡೆಸದೆ ಮುಂದಿನ ತರಗತಿಗೆ ಪಾಸ್ ಮಾಡಲಾಗಿದೆ. ಇನ್ನು, 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳ ಬಗ್ಗೆಯೂ ಶೀಘ್ರದಲ್ಲೇ ಒಂದು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

ಈವರೆಗೆ 9 ಮತ್ತು 11 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದೋ ಅಥವಾ ಬೇಡವೋ ಎಂಬ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇಡೀ ವರ್ಷ ಆನ್​ಲೈನ್​ ತರಗತಿಗಳನ್ನು ಕೇಳಿರುವುದರಿಂದ ಈ ವಿದ್ಯಾರ್ಥಿಗಳು ಆನ್​ಲೈನ್ ಪರೀಕ್ಷೆ ನಡೆಸುವಂತೆ ಬೇಡಿಕೆ ಇಟ್ಟಿದ್ದಾರೆ. ಆದರೆ ಈವರೆಗೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿರುವ ಗಾಯಕ್​​ವಾಡ್​, ಶೀಘ್ರದಲ್ಲೇ ತೀರ್ಮಾನ ಪ್ರಕಟಿಸಲಾಗುವುದು ಎಂದಿದ್ದಾರೆ.
Youtube Video

ಇನ್ನು, 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಕಟಿಸಿರುವ ವೇಳಾಪಟ್ಟಿಯಂತೆ ಪರೀಕ್ಷೆ ನಡೆಸಲಾಗುವುದು. ಆಫ್​ಲೈನ್ ಮಾದರಿಯಲ್ಲಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಮಂಡಳಿಯಿಂದ ವಿದ್ಯಾರ್ಥಿಗಳಿಗೆ ಹಲವು ವಿನಾಯಿತಿಗಳನ್ನು ನೀಡಲಾಗಿದೆ. ಕಡಿತಗೊಳಿಸಲಾಗಿರುವ ಪಠ್ಯಕ್ರಮದಲ್ಲೇ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಪ್ರಶ್ನೆ ಕೇಳಲಾಗುತ್ತದೆ. ಆಯಾ ಶಾಳೆಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶವಿದೆ. ಕೊರೋನಾ ಸೋಂಕು ತಗುಲಿರುವ ವಿದ್ಯಾರ್ಥಿಗಳಿಗೆ ಜೂನ್​ ತಿಂಗಳಿನಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಪ್ರತೀ ವರ್ಷ ಸುಮಾರು 30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ.
Published by: Latha CG
First published: April 3, 2021, 4:53 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories