ಕೊರೋನಾಗೆ ಬೆಚ್ಚಿದ ಅಮೆರಿಕ; ಒಂದೇ ದಿನ 2,100 ಜನ ಸಾವು; 45 ಸಾವಿರಕ್ಕೇರಿದ ಮೃತರ ಸಂಖ್ಯೆ

ವಿಶ್ವದಲ್ಲಿ ಮಾಹಾಮಾರಿ ಕೊರೋನಾ ವೈರಸ್ ದಾಳಿಗೆ ಮೃತಪಡುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಇಡೀ ವಿಶ್ವದಲ್ಲಿ 25.56 ಲಕ್ಷ ಜನರಿಗೆ ಕೊರೋನಾ ಅಂಟಿದೆ. ಈ ಮಹಾಮಾರಿ ವೈರಸ್​ನಿಂದ 1.78 ಲಕ್ಷ ಮಂದಿ ಅಸುನೀಗಿದ್ದಾರೆ.

news18-kannada
Updated:April 22, 2020, 9:08 AM IST
ಕೊರೋನಾಗೆ ಬೆಚ್ಚಿದ ಅಮೆರಿಕ; ಒಂದೇ ದಿನ 2,100 ಜನ ಸಾವು; 45 ಸಾವಿರಕ್ಕೇರಿದ ಮೃತರ ಸಂಖ್ಯೆ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು (ಏ.15): ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಕೊರೋನಾ ಹಾವಳಿ ಸದ್ಯಕ್ಕೆ ನಿಲ್ಲುವ ಲಕ್ಷಣ  ಗೋಚರವಾಗುತ್ತಿಲ್ಲ. 24 ಗಂಟೆಯಲ್ಲಿ ಅಮೆರಿಕದಲ್ಲಿ ಕೊರೋನಾ ವೈರಸ್​ಗೆ 2,141 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 45 ಸಾವಿರಕ್ಕೆ ಏರಿಕೆ ಆಗಿದೆ. 8.19 ಲಕ್ಷ ಮಂದಿಯಲ್ಲಿ ಸೋಂಕಿರುವುದು ದೃಢಪಟ್ಟಿದೆ.

ವಿಶ್ವದಲ್ಲಿ ಮಾಹಾಮಾರಿ ಕೊರೋನಾ ವೈರಸ್ ದಾಳಿಗೆ ಮೃತಪಡುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಇಡೀ ವಿಶ್ವದಲ್ಲಿ 25.56 ಲಕ್ಷ ಜನರಿಗೆ ಕೊರೋನಾ ಅಂಟಿದೆ. ಈ ಮಹಾಮಾರಿ ವೈರಸ್​ನಿಂದ 1.78 ಲಕ್ಷ ಮಂದಿ ಅಸುನೀಗಿದ್ದಾರೆ. ಈ ವೈರಸ್​ನಿಂದ ಗುಣಮುಖರಾದವರ ಸಂಖ್ಯೆ 6.89 ಲಕ್ಷ ಮಂದಿ.

ಸ್ಪೇನ್​ನಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷದ ಗಡಿ ತಲುಪಿದೆ. 21 ಸಾವಿರ ಮಂದಿ ಮೃತಪಟ್ಟಿದ್ದಾರೆ. ಇಟಲಿಯಲ್ಲಿ 1.83 ಲಕ್ಷ ಜನರಿಗೆ ಸೋಂಕು ಅಂಟಿದ್ದು, ಸಾವಿನ ಸಂಖ್ಯೆ 24 ಸಾವಿರದ ಗಡಿ ತಲುಪಿದೆ. ಈ ಮೊದಲ ವಾರಗಳಿಗೆ ಹೋಲಿಸಿದರೆ ಇಟಲಿಯಲ್ಲಿ ಕೊರೋನಾ ಕೊಂಚ ನಿಯಂತ್ರಣಕ್ಕೆ ಬಂದಿದೆ ಎನ್ನಬಹುದು.

ಇದನ್ನೂ ಓದಿ: ಮುಂಬೈನಲ್ಲಿ ಒಂದೇ ದಿನದಲ್ಲಿ ಮತ್ತೆ 552 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

ಫ್ರಾನ್ಸ್​, ಜರ್ಮನಿ, ಇಂಗ್ಲೆಂಡ್​ನಲ್ಲೂ ಪರಿಸ್ಥಿತಿ ಕೈ ಮೀರಿದೆ. ಫ್ರಾನ್ಸ್​ನಲ್ಲಿ 1.58 ಲಕ್ಷ ಮಂದಿಗೆ ಕೊರೋನಾ ದೃಢಪಟ್ಟಿದೆ. 20 ಸಾವಿರ ಮಂದಿ ಮೃತಪಟ್ಟಿದ್ದಾರೆ. ಜರ್ಮನಿಯಲ್ಲಿ 1.48 ಲಕ್ಷ ಜನರಿಗೆ ಕೊರೋನಾ ಸೋಂಕಿದೆ. 5086 ಜನರು ಮೃತಪಟ್ಟಿದ್ದಾರೆ. 
First published: April 22, 2020, 9:08 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading