ಪಶ್ಚಿಮ ಬಂಗಾಳದಲ್ಲಿ ಕೊರೋನಾಗೆ ಮತ್ತೊಂದು ಬಲಿ; ದೇಶದಲ್ಲಿ ಸಾವಿನ ಸಂಖ್ಯೆ 29ಕ್ಕೆ ಏರಿಕೆ

Corona Death in West Bengal: ಇಂದು ಪಶ್ಚಿಮ ಬಂಗಾಳದಲ್ಲಿ 44 ವರ್ಷದ ಮಹಿಳೆಯೊಬ್ಬರು ಕೊರೋನಾ ವೈರಸ್​ಗೆ ಬಲಿಯಾಗಿದ್ದಾರೆ. ಈ ಮೂಲಕ ಪಶ್ಚಿಮ ಬಂಗಾಳದಲ್ಲಿ ಕೊರೋನಾದಿಂದ ಎರಡನೇ ವ್ಯಕ್ತಿ ಸಾವನ್ನಪ್ಪಿದಂತಾಗಿದೆ.

Sushma Chakre | news18-kannada
Updated:March 30, 2020, 11:08 AM IST
ಪಶ್ಚಿಮ ಬಂಗಾಳದಲ್ಲಿ ಕೊರೋನಾಗೆ ಮತ್ತೊಂದು ಬಲಿ; ದೇಶದಲ್ಲಿ ಸಾವಿನ ಸಂಖ್ಯೆ 29ಕ್ಕೆ ಏರಿಕೆ
ಸಾಂದರ್ಭಿಕ ಚಿತ್ರ
  • Share this:
ಕೊಲ್ಕತಾ (ಮಾ. 30): ದೇಶದಲ್ಲಿ ಈಗಾಗಲೇ ಕೊರೋನಾ ಸೋಂಕಿತರ ಸಂಖ್ಯೆ 1 ಸಾವಿರದ ಗಡಿ ದಾಟಿದೆ. ನಿನ್ನೆಯವರೆಗೆ 1,071 ಸೋಂಕಿತ ಪ್ರಕರಣಗಳು ದಾಖಲಾಗಿವೆ. ಇಂದು ಪಶ್ಚಿಮ ಬಂಗಾಳದಲ್ಲಿ ಮತ್ತೋರ್ವ ಮಹಿಳೆ ಸಾವನ್ನಪ್ಪುವ ಮೂಲಕ ದೇಶದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 83 ಮುಟ್ಟಿದೆ. ಮಹಾರಾಷ್ಟ್ರದಲ್ಲಿ ಈ ಸಂಖ್ಯೆ 200ರ ಗಡಿ ದಾಟಿದೆ. ಅಮೆರಿಕದಲ್ಲಿ ನಿನ್ನೆ ಒಂದೇ ದಿನ 16 ಸಾವಿರ ಪ್ರಕರಣ ದಾಖಲಾಗಿದ್ದು, ಈ ಮೂಲಕ ಕೊರೋನಾ ಪೀಡಿತರ ಸಂಖ್ಯೆ 1.40 ಲಕ್ಷಕ್ಕೆ ಏರಿಕೆ ಆಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿನ್ನೆ 23 ಹೊಸ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 72ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಕೊರೋನಾ ವೈರಸ್ ಸೋಂಕು ತಗುಲಿದವರ ಸಂಖ್ಯೆ 1,071ಕ್ಕೆ ಮುಟ್ಟಿದೆ.

ಇದನ್ನೂ ಓದಿ: ಅಮೆರಿಕದಲ್ಲಿ ಒಂದೇ ದಿನ 16 ಸಾವಿರ ಕೊರೋನಾ ಪ್ರಕರಣ; ವಿಶ್ವಾದ್ಯಂತ 33 ಸಾವಿರ ಸಾವು

ಇಂದು ಪಶ್ಚಿಮ ಬಂಗಾಳದಲ್ಲಿ 44 ವರ್ಷದ ಮಹಿಳೆಯೊಬ್ಬರು ಕೊರೋನಾ ವೈರಸ್​ಗೆ ಬಲಿಯಾಗಿದ್ದಾರೆ. ಈ ಮೂಲಕ ಪಶ್ಚಿಮ ಬಂಗಾಳದಲ್ಲಿ ಕೊರೋನಾದಿಂದ ಎರಡನೇ ವ್ಯಕ್ತಿ ಸಾವನ್ನಪ್ಪಿದಂತಾಗಿದೆ. ಆಕೆಗೆ ಚಿಕಿತ್ಸೆ ನೀಡಿದ ವೈದ್ಯರು, ನರ್ಸ್​, ಆಸ್ಪತ್ರೆಯ ಸಿಬ್ಬಂದಿಯನ್ನು ಐಸೋಲೇಷನ್​ನಲ್ಲಿ ಇರಿಸಲಾಗಿದೆ. ಹಾಗೇ, ಆ ರೋಗಿಯ ಕುಟುಂಬಸ್ಥರನ್ನು ಕೂಡ ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ.
First published: March 30, 2020, 10:04 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading