ಮೀಸಲಾತಿ ನೀಡಿ ಎಂದು ರಾಜ್ಯ ಸರ್ಕಾರಗಳಿಗೆ ಕೋರ್ಟ್ ನಿರ್ದೇಶಿಸಲು ಸಾಧ್ಯವಿಲ್ಲ; ಸುಪ್ರೀಂ ಮಹತ್ವದ ಆದೇಶ

ಮೀಸಲಾತಿ ನೀಡಬೇಕೆ ಅಥವಾ ಬೇಡವೇ ಎನ್ನುವುದನ್ನು ನಿರ್ಧರಿಸುವ ಸಂಪೂರ್ಣ ವಿವೇಚನಾಧಿಕಾರ ರಾಜ್ಯ ಸರ್ಕಾರಕ್ಕೆ ಇದೆ. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಯಾವುದೇ ನಿರ್ಬಂಧ ಇಲ್ಲ ಎಂದು ಕೋರ್ಟ್​ ಹೇಳಿದೆ.

ಸುಪ್ರೀಂ ಕೋರ್ಟ್​.

ಸುಪ್ರೀಂ ಕೋರ್ಟ್​.

 • Share this:
  ನವದೆಹಲಿ (ಫೆ.8): ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಪಡೆಯಲು ಯಾವುದೇ ಮೂಲಭೂತ ಹಕ್ಕಿಲ್ಲ ಮತ್ತು ಎಸ್​ಸಿ/ಎಸ್​ಟಿಗಳಿಗೆ ಮೀಸಲಾತಿ ನೀಡಿ ಎಂದು ಯಾವ ನ್ಯಾಯಾಲಯವೂ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್​ ಆದೇಶಿಸಿದೆ.

  ಮೀಸಲಾತಿ ನೀಡಬೇಕೆ ಅಥವಾ ಬೇಡವೇ ಎನ್ನುವುದನ್ನು ನಿರ್ಧರಿಸುವ ಸಂಪೂರ್ಣ ವಿವೇಚನಾಧಿಕಾರ ರಾಜ್ಯ ಸರ್ಕಾರಕ್ಕೆ ಇದೆ. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಯಾವುದೇ ನಿರ್ಬಂಧ ಇಲ್ಲ ಎಂದು ಕೋರ್ಟ್​ ಹೇಳಿದೆ.

  “ರಾಜ್ಯ ಸರ್ಕಾರ ಮೀಸಲಾತಿ ನೀಡಲು ಕಾರ್ಯ ನಿರ್ವಹಿಸುತ್ತಿಲ್ಲ. ಸಾರ್ವಜನಿಕ ಉದ್ಯೋಗಗಳಲ್ಲಿ ಮೀಸಲಾತಿ ಪಡೆಯಲು ಯಾವುದೇ ಮೂಲಭೂತ ಹಕ್ಕಿಲ್ಲ. ಯಾವ ನ್ಯಾಯಲಯವೂ ಈ ಬಗ್ಗೆ ಆದೇಶ ನೀಡಲು ಸಾಧ್ಯವಿಲ್ಲ,” ಎಂದು ನ್ಯಾಯಮೂರ್ತಿ ಎಲ್​ ನಾಗೇಶ್ವರ್​ ರಾವ್​ ಮತ್ತು ಹೇಮಂತ್​ ಗುಪ್ತಾ ಅವರನ್ನೊಳಗೊಂಡ ಪೀಠ ಹೇಳಿದೆ.

  ಉತ್ತರಾಖಂಡದ ಸಾರ್ವಜನಿಕ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಹಾಯಕ ಇಂಜಿನಿಯರ್​ ಹುದ್ದೆಗೆ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿ ಅರ್ಜಿ ಸಲ್ಲಿಕೆ ಆಗಿತ್ತು. ಈ ವೇಳೆ ಸುಪ್ರೀಂಕೋರ್ಟ್​ ಈ ಆದೇಶ ಹೊರಡಿಸಿದೆ.

  ಇದನ್ನೂ ಓದಿ: ಮೆಟ್ರೋ ಇಳಿದು ಮನೆಗೆ ತೆರಳುತ್ತಿದ್ದ ಪೊಲೀಸ್ ಅಧಿಕಾರಿಯನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು
  First published: