Covid 19 Prevention: ಮಾಸ್ಕ್ ಧರಿಸಿ, ಜೀವ ಉಳಿಸಿ, ಕೊರೋನಾ ನಿಯಂತ್ರಿಸಿ; ಡೂಡಲ್ ಮೂಲಕ ಗೂಗಲ್ ಮನವಿ
Google Doodles: ಗೂಗಲ್ ಡೂಡಲ್ ಕೊರೋನಾ ಜಗತ್ತಿಗೆ ಕಾಲಿಟ್ಟ ಬಳಿಕ ನಿರಂತರವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಜೊತೆಗೆ ಕೊರೋನಾ ವಿರುದ್ದ ಹೋರಾಡುತ್ತಿರುವ ವಾರಿಯರ್ಸ್ಗೆ ಧನ್ಯವಾದ ಹೇಳುವುದರ ಜೊತೆಗೆ ಗೌರವವನ್ನೂ ಸಲ್ಲಿಸುತ್ತಾ ಬಂದಿದೆ.
ಮಾರಕ ಕೊರೋನಾ ಸದ್ಯ ಜಗತ್ತನ್ನು ಕಾಡುತ್ತಿರುವ ಅತಿ ದೊಡ್ಡ ಸಾಂಕ್ರಾಮಿಕ ರೋಗ. ಕೊರೋನಾ ಸೋಂಕಿನ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆಯೇ ಹೊರತು ಕಡಿಮೆಯಾಗುತ್ತಿಲ್ಲ. ಜನರು ಮುಂಜಾಗ್ರತಾ ಕ್ರಮವಾಗಿ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಸರ್ಕಾರ ಪ್ರಾರಂಭಿಕ ದಿನಗಳಿಂದ ಹೇಳುತ್ತಲೇ ಬಂದಿದೆ. ಗೂಗಲ್ ಸಹ ಜನರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡುತ್ತಲೇ ಇದೆ. ಡೂಡಲ್ ಮೂಲಕ ಸುರಕ್ಷತಾ ಕ್ರಮಗಳನ್ನು ಪಾಲಿಸಿ, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಜನರಿಗೆ ಜಾಗೃತಿ ಮೂಡಿಸುತ್ತಿದೆ. ಇಂದು ಸಹ ಗೂಗಲ್ ಡೂಡಲ್ ಮೂಲಕ ಜನರಿಗೆ ಎಚ್ಚರಿಕೆಯ ಸಂದೇಶವನ್ನು ನೀಡಿದೆ. ಕೊರೋನಾ ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸಿ, ಜೀವ ಉಳಿಸಿ ಎಂಬ ಸಂದೇಶವನ್ನು ರವಾನಿಸಿದೆ. ಮಾಸ್ಕ್ ಧರಿಸಿ, ಜೀವ ಉಳಿಸಿ, ಕೈಗಳನ್ನು ಆಗಾಗ್ಗೆ ಸ್ವಚ್ಛಗೊಳಿಸಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಿ ಎಂದು ಗೂಗಲ್ ಡೂಡಲ್ ಮೂಲಕ ಜನರಿಗೆ ಹೇಳಿದೆ. ಮುಂಜಾಗ್ರತಾ ಕ್ರಮವಾಗಿ ನೀವು ನಿಮ್ಮ ರಕ್ಷಣೆ ಮಾಡಿಕೊಂಡರೆ, ನಿಮ್ಮ ಸುತ್ತಮುತ್ತಲಿನ ಜನರಿಗೂ ಅರಿವು ಮೂಡುತ್ತದೆ ಎಂದು ಗೂಗಲ್ ಹೇಳಿದೆ.
ನಿಮ್ಮ ಕೈಗಳನ್ನು ಸೋಪು ಅಥವಾ ಸ್ಯಾನಿಟೈಜರ್ನಿಂದ ಆಗಾಗ್ಗೆ ಸ್ವಚ್ಛಗೊಳಿಸಿಕೊಳ್ಳಿ.
ನಿಮ್ಮ ಸುತ್ತಮುತ್ತಲೂ ಯಾರಾದರೂ ಕೆಮ್ಮುವುದು, ಸೀನುವುದು ಮಾಡಿದರೆ ಅವರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಿ.
ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸಾಧ್ಯವಿಲ್ಲದಿದ್ದಾಗ, ಕಡ್ಡಾಯವಾಗಿ ಮಾಸ್ಕ್ ಧರಿಸಿ.
ನಿಮ್ಮ ಮೂಗು, ಕಣ್ಣು ಹಾಗೂ ಬಾಯಿಯನ್ನು ಪದೇ ಪದೇ ಮುಟ್ಟಬೇಡಿ.
ನೀವು ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರದಿಂದ ಬಾಯಿ ಮತ್ತು ಮೂಗನ್ನು ಮುಚ್ಚಿಕೊಳ್ಳಿ.
ನಿಮಗೆ ಆರೋಗ್ಯದಲ್ಲಿ ಏರುಪೇರು ಆದರೆ ಮನೆಯಲ್ಲೇ ಉಳಿಯಿರಿ.
ನಿಮಗೆ ಜ್ವರ, ಕೆಮ್ಮು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡರೆ ಕೂಡಲೇ ಸಮೀಪದ ವೈದ್ಯರನ್ನು ಸಂಪರ್ಕಿಸಿ ಎಂದು ಆರೋಗ್ಯ ಇಲಾಖೆ ಕೆಲವು ಸೂಚನೆಗಳನ್ನು ನೀಡಿದೆ.
ಗೂಗಲ್ ಡೂಡಲ್ ಕೊರೋನಾ ಜಗತ್ತಿಗೆ ಕಾಲಿಟ್ಟ ಬಳಿಕ ನಿರಂತರವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಜೊತೆಗೆ ಕೊರೋನಾ ವಿರುದ್ದ ಹೋರಾಡುತ್ತಿರುವ ವಾರಿಯರ್ಸ್ಗೆ ಧನ್ಯವಾದ ಹೇಳುವುದರ ಜೊತೆಗೆ ಗೌರವವನ್ನೂ ಸಲ್ಲಿಸುತ್ತಾ ಬಂದಿದೆ.
ನಾಲ್ಕೈದು ದಿನಗಳ ಹಿಂದಷ್ಟೇ ಗೂಗಲ್ ಡೂಡಲ್ ಮೂಲಕ ಕೊರೋನಾ ವಾರಿಯರ್ಸ್ಗೆ ಕೃತಜ್ಞತೆ ತಿಳಿಸಿತ್ತು. ಇಂದು ಕೊರೋನಾ ನಿಯಂತ್ರಣಕ್ಕಾಗಿ ಜನರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮತ್ತೆ ಮನದಟ್ಟು ಮಾಡಿಕೊಟ್ಟಿದೆ.
Published by:Latha CG
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ