Crime News: ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ; ಗರ್ಭಪಾತ ಮಾಡಿಸುವಂತೆ ಒತ್ತಾಯ

ಇಷ್ಟೇ ಅಲ್ಲದೇ ತನ್ನ ಮೇಲಾಗುತ್ತಿರುವ ಲೈಂಗಿಕ ದೌರ್ಜನ್ಯವನ್ನು ತಡೆಯಲು ಯತ್ನಿಸಿದರೆ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದೂ ಸಹ ಸಂತ್ರಸ್ತೆ ಆರೋಪ ಮಾಡಿದ್ದಾಳೆ.

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

 • Share this:
  ಹರಿಯಾಣ(ಜ.18): ತಂದೆಯೇ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹರಿಯಾಣದ ಹಿಸಾರ್​​ನಲ್ಲಿ ನಡೆದಿದೆ. ಕಳೆದ 7 ವರ್ಷಗಳಿಂದ ಮಗಳ ಮೇಲೆ ಅತ್ಯಾಚಾರ ಎಸಗುತ್ತಿದ್ದ ಎಂಬ ವಿಷಯ ಬೆಳಕಿಗೆ ಬಂದಿದೆ. 17 ವರ್ಷದ ಮಗಳ ಮೇಲೆ, ಕಳೆದ 7 ವರ್ಷಗಳಿಂದ ಅಂದರೆ ಆಕೆ 10 ವರ್ಷದವಳಾಗಿದ್ದಾಗಿನಿಂದಲೂ ಈ ಕೃತ್ಯ ಎಸಗಿದ್ದಾನೆ. ಇಷ್ಟೇ ಅಲ್ಲದೇ, ಅತ್ಯಾಚಾರ ಎಸಗಿದ ಬಳಿಕ ಆಕೆ ಗರ್ಭವತಿಯಾಗಿದ್ದು, ಗರ್ಭಪಾತ ಮಾಡಿಸುವಂತೆ ಮಗಳಿಗೆ ಒತ್ತಾಯಿಸುತ್ತಿದ್ದ ಎಂದು ತಿಳಿದು ಬಂದಿದೆ.

  ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗೆ ಇಬ್ಬರು ಹೆಣ್ಣುಮಕ್ಕಳಿದ್ದು, 11 ವರ್ಷದ ಕಿರಿಯ ಮಗಳಿಗೂ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪವೂ ಸಹ ಕೇಳಿ ಬಂದಿದೆ.

  ಟೈಮ್ಸ್​ ಆಫ್​ ಇಂಡಿಯಾದ ವರದಿ ಪ್ರಕಾರ, ಸರ್ಕಾರಿ ಅಧಿಕಾರಿಯೊಂದಿಗೆ ಅಡುಗೆ ಕೆಲಸ ಮಾಡಿಕೊಂಡಿದ್ದ ತನ್ನ ತಂದೆ ಕಳೆದ 7 ವರ್ಷಗಳಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಸಂತ್ರಸ್ತೆ ಪೊಲೀಸರ ಬಳಿ ಹೇಳಿದ್ದಾಳೆ.

  ಸಿದ್ದರಾಮಯ್ಯನವರದ್ದು ಜಿನ್ನಾವಾದವೇ ಹೊರತು, ಗಾಂಧಿವಾದ ಅಲ್ಲ; ಸಿ.ಟಿ.ರವಿ ವ್ಯಂಗ್ಯ

  ಇಷ್ಟೇ ಅಲ್ಲದೇ ತನ್ನ ಮೇಲಾಗುತ್ತಿರುವ ಲೈಂಗಿಕ ದೌರ್ಜನ್ಯವನ್ನು ತಡೆಯಲು ಯತ್ನಿಸಿದರೆ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದೂ ಸಹ ಸಂತ್ರಸ್ತೆ ಆರೋಪ ಮಾಡಿದ್ದಾಳೆ.

  ಆರೋಪಿಯು ಮಗಳನ್ನು ಹಲವು ಬಾರಿ ಗರ್ಭಿಣಿಯನ್ನಾಗಿ ಮಾಡಿ, ನಂತರ ಗರ್ಭಪಾತ ಮಾಡಿಸುವಂತೆ ಒತ್ತಾಯಿಸುತ್ತಿದ್ದ ಎಂದು ತಿಳಿದು ಬಂದಿದೆ. ತನ್ನ ತಂದೆಯು ತನ್ನ 11 ವರ್ಷದ ತಂಗಿಗೂ ಸಹ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾಳೆ.  ಸಂತ್ರಸ್ರೆಯ ದೂರಿನ ಆಧಾರದ ಮೇಲೆ ಹಿಸಾರ್ ಪೊಲೀಸರು ಐಪಿಸಿ ಸೆಕ್ಷನ್ 376(2), 376(2) ಎಫ್​, 313, 506 ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಆರೋಪಿಯ ಮೇಲೆ ದೂರು ಹೊರಿಸಲಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
  Published by:Latha CG
  First published: