ಮುಂಬೈ (ಫೆ. 16): ಮಹಾರಾಷ್ಟ್ರದ ಥಾಣೆ ಗ್ರಾಮೀಣ ಪ್ರದೇಶದಲ್ಲಿ 13 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಾಲ್ಕು ಅಪ್ರಾಪ್ತ ವಯಸ್ಕರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಥಾಣೆ ಗ್ರಾಮೀಣ ಪ್ರದೇಶದ 13 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಾಲ್ಕು ಅಪ್ರಾಪ್ತ ವಯಸ್ಕರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಆಕೆಯ ಪೋಷಕರನ್ನು ಕೊಲ್ಲುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಪ್ರಕರಣದ ನಾಲ್ವರು ಆರೋಪಿಗಳು ಅಪ್ರಾಪ್ತ ವಯಸ್ಕರು ಎಂದು ಗಣೇಶಪುರಿ ಪೊಲೀಸರು ತಿಳಿಸಿದ್ದಾರೆ.
ಕಳೆದ ವರ್ಷ ಜುಲೈನಲ್ಲೇ ಈ ಘಟನೆ ನಡೆದಿದ್ದು, ಸಂತ್ರಸ್ಥೆ ಭಾನುವಾರ ಈ ಘಟನೆ ಬಗ್ಗೆ ವಿವರಿಸಿದ್ದಾಳೆ. ನಂತರ, ಆಕೆಯ ತಂದೆ ಒಬ್ಬ ಆರೋಪಿಯನ್ನು ಭೇಟಿಯಾಗಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ನಂತರ ತಂದೆ ಸಾಮಾಜಿಕ ಕಾರ್ಯಕರ್ತರನ್ನು ಸಂಪರ್ಕಿಸಿದ್ದು, ಅವರು ಪೊಲೀಸರಿಗೆ ಈ ಬಗ್ಗೆ ತಿಳಿಸಿದ್ದಾರೆ. ಈ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ಇದನ್ನೂ ಓದಿ: Mysore Crime: ಮೈಸೂರು ಯುವಕನಿಂದ ಬೀದಿ ನಾಯಿಗೆ ಲೈಂಗಿಕ ಕಿರುಕುಳ!; ವಿಡಿಯೋದಲ್ಲಿ ಕಾಮುಕನ ಕೃತ್ಯ ಸೆರೆ
ಅಪ್ರಾಪ್ತ ಬಾಲಕಿ ಮನೆಗೆ ಕೆಲವು ದಿನಸಿ ವಸ್ತುಗಳನ್ನು ಖರೀದಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಜುಲೈ 2020ರಂದು ಈ ಘಟನೆ ನಡೆದಿದೆ. ಆರೋಪಿಗಳಲ್ಲಿ ಒಬ್ಬ ಹಳ್ಳಿಯ ಬಳಿಯಿರುವ ಹಳೆಯ ಪ್ರತ್ಯೇಕ ಬಂಗಲೆಗೆ ಬರುವಂತೆ ಕೇಳಿಕೊಂಡಿದ್ದು, ನಂತರ ಆತ ಮತ್ತು ಅವನ ಮೂವರು ಸ್ನೇಹಿತರು ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ, ಈ ಬಗ್ಗೆ ಯಾರಿಗಾದರೂ ಹೇಳಿದರೆ ಬಾಲಕಿಯ ತಂದೆಯನ್ನು ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ. ಕೆಲವು ದಿನಗಳ ನಂತರ ಇಬ್ಬರು ಆರೋಪಿಗಳು ಅವಳನ್ನು ಹಿಡಿದುಕೊಂಡು ಮತ್ತೆ ಅದೇ ಬಂಗಲೆಗೆ ಕರೆದುಕೊಂಡು ಹೋಗಿ ಮತ್ತೆ ಅತ್ಯಾಚಾರ ಮಾಡಿದ್ದಾರೆ ಎಂದೂ ತಿಳಿದುಬಂದಿದೆ.
“ಭಾನುವಾರ, ಹುಡುಗಿಯ ತಂದೆ ಆರೋಪಿಗಳಲ್ಲಿ ಒಬ್ಬನನ್ನು ನೋಡಿದ್ದು, ತನ್ನ ಮಗಳ ಬಗ್ಗೆ ಅಶ್ಲೀಲ ಸನ್ನೆ ಮಾಡುತ್ತಿರುವುದನ್ನು ನೋಡಿದನು. ಈ ಹಿನ್ನೆಲೆ ಆತನೊಂದಿಗೆ ಜಗಳವಾಡಿದರು. ನಂತರ ಬಾಲಕಿಯ ತಂದೆ ಒಂದು ಸಾಮಾಜಿಕ ಸಂಘಟನೆಯನ್ನು ಸಂಪರ್ಕಿಸಿದನು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ