Naxal Encounter: ಛತ್ತೀಸ್​ಘಡದಲ್ಲಿ ನಾಲ್ವರು ನಕ್ಸಲರ ಎನ್​ಕೌಂಟರ್

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Naxal Encounter: ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯ ಹೊರವಲಯದ ಜಗರಗುಂಡ ಬಳಿ ಈ ಎನ್​ಕೌಂಟರ್ ನಡೆದಿದೆ. ಈ ಘಟನೆಯಲ್ಲಿ ನಾಲ್ಕು ನಕ್ಸಲರು ಸಾವನ್ನಪ್ಪಿದ್ದಾರೆ. ಉಳಿದ ನಕ್ಸಲರು ಓಡಿಹೋಗಿದ್ದಾರೆ.

  • Share this:

ರಾಯ್ಪುರ (ಆ. 12): ಛತ್ತೀಸ್​ಘಡದ ಸುಕ್ಮಾ ಜಿಲ್ಲೆಯಲ್ಲಿ ನಾಲ್ವರು ನಕ್ಸಲರನ್ನು ಭದ್ರತಾ ಪಡೆಯ ಸಿಬ್ಬಂದಿ ಎನ್​ಕೌಂಟರ್ ಮಾಡಿದ್ದಾರೆ. ನಕ್ಸಲ್ ಪೀಡಿತ ಛತ್ತೀಸ್​ಘಡದಲ್ಲಿ ಭದ್ರತಾ ಪಡೆಗಳು 4 ಮಂದಿ ನಕ್ಸಲರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಬಗ್ಗೆ ನಕ್ಸಲ್ ನಿಗ್ರಹ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯ ಹೊರವಲಯದ ಜಗರಗುಂಡ ಬಳಿ ಈ ಎನ್​ಕೌಂಟರ್ ನಡೆದಿದೆ. ಈ ಘಟನೆಯಲ್ಲಿ ನಾಲ್ಕು ನಕ್ಸಲರು ಸಾವನ್ನಪ್ಪಿದ್ದಾರೆ. ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ), ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್‌ಪಿಎಫ್) ಮತ್ತು ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಪಡೆಗಳ ಸಿಬ್ಬಂದಿಗಳು ಎನ್​ಕೌಂಟರ್ ಕಾರ್ಯಾಚರಣೆ ನಡೆಸಿದ್ದಾರೆ. ಇಂದು ಬೆಳಗ್ಗೆ 9.30ಕ್ಕೆ ಭದ್ರತಾಪಡೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

top videos


    ಇದನ್ನೂ ಓದಿ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಎನ್​ಕೌಂಟರ್; ಓರ್ವ ಯೋಧ ಹುತಾತ್ಮ



    ಛತ್ತೀಸ್​ಘಡದ ಫುಲಂಪಾರ್ ಗ್ರಾಮದಲ್ಲಿ ಸೇನಾಪಡೆಗಳು ಗಸ್ತು ತಿರುಗುತ್ತಿದ್ದಾಗ ಇದ್ದಕ್ಕಿದ್ದಂತೆ ನಕ್ಸಲರು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು, ಎನ್​ಕೌಂಟರ್ ನಡೆಸಿ ನಾಲ್ವರು ನಕ್ಸಲರನ್ನು ಹತ್ಯೆ ಮಾಡಿದ್ದಾರೆ. ಉಳಿದ ನಕ್ಸಲರು ಓಡಿಹೋಗಿದ್ದಾರೆ. ಘಟನಾ ಸ್ಥಳದಲ್ಲಿ ನಾಲ್ಕು ನಕ್ಸಲರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಐಜಿಪಿ ಸುಂದರ್ ರಾಜ್ ಪಿ. ತಿಳಿಸಿದ್ದಾರೆ.

    ಛತ್ತೀಸ್​ಘಡದ ರಾಜಧಾನಿ ರಾಯ್ಪುರದಿಂದ 450 ಕಿ.ಮೀ. ದೂರದಲ್ಲಿರುವ ಫುಲಂಪಾರ್ ಗ್ರಾಮದಲ್ಲಿ ಗುಂಡಿನ ಚಕಮಕಿ ನಡೆದಿದೆ. ಉಳಿದವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ದೇಸಿ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳಿಂದ ದಾಳಿ ನಡೆಸಲಾಗಿದೆ ಎಂದು ಜೀ ನ್ಯೂಸ್ ವರದಿ ಮಾಡಿದೆ.

    First published: