Rape And Murder: ಪಶ್ಚಿಮ ಬಂಗಾಳದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ, ಕೊಲೆ; ಬಸ್​ಗಳಿಗೆ ಬೆಂಕಿ ಹಚ್ಚಿ, ಹೆದ್ದಾರಿ ಬಂದ್ ಮಾಡಿದ ಗ್ರಾಮಸ್ಥರು

West Bengal Rape Case: ಪಶ್ಚಿಮ ಬಂಗಾಳದ ಧೀನಜ್​ಪುರದ ಸೋನ್​ಪುರ ಎಂಬ ಗ್ರಾಮದ ಅಪ್ರಾಪ್ತ ಬಾಲಕಿ ಇಂದು ಮುಂಜಾನೆ ಮೂತ್ರ ವಿಸರ್ಜನೆಗೆಂದು ಹೊರಗೆ ಹೋಗಿದ್ದವಳು ವಾಪಾಸ್ ಬಂದಿರಲಿಲ್ಲ. ಆಕೆಗಾಗಿ ಎಲ್ಲ ಕಡೆ ಹುಡುಕಾಡಿದ ನಂತರ ಬೆಳಗ್ಗೆ 8 ಗಂಟೆ ಸುಮಾರಿಗೆ ಆಕೆಯ ಶವ ಪತ್ತೆಯಾಗಿತ್ತು.

ಪಶ್ಚಿಮ ಬಂಗಾಳದಲ್ಲಿ ಸರ್ಕಾರಿ ವಾಹನಗಳಿಗೆ ಬೆಂಕಿ ಹಚ್ಚಿದ ಜನರು

ಪಶ್ಚಿಮ ಬಂಗಾಳದಲ್ಲಿ ಸರ್ಕಾರಿ ವಾಹನಗಳಿಗೆ ಬೆಂಕಿ ಹಚ್ಚಿದ ಜನರು

  • Share this:
ಕೊಲ್ಕತಾ (ಜು 19): ಮೂತ್ರ ವಿಸರ್ಜನೆಗೆಂದು ಇಂದು ಬೆಳಗ್ಗೆ ಮನೆಯಿಂದ ಆಚೆ ಹೋಗಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಧೀನಜ್​ಪುರ ಜಿಲ್ಲೆಯಲ್ಲಿ ನಡೆದಿತ್ತು. ಈ ಪ್ರಕರಣದಲ್ಲಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಇಂದು ಆ ಜಿಲ್ಲೆಯ ಚೋಪ್ರಾ ಪ್ರದೇಶದಲ್ಲಿ ಭಾರೀ ಪ್ರತಿಭಟನೆ ನಡೆಸಲಾಯಿತು.

ತಮ್ಮ ಗ್ರಾಮದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿರುವ ಅಪರಾಧಿಗಳನ್ನು ಬಂಧಿಸಿ, ಶಿಕ್ಷೆ ನೀಡಬೇಕೆಂದು ದೂರು ನೀಡಿದ್ದರೂ ಪೊಲೀಸರು ಗಂಭೀರವಾಗಿ ಪರಿಗಣಿಸಿರಲಿಲ್ಲ. ಹೀಗಾಗಿ, ಇಂದು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿ, ಸರ್ಕಾರಿ ಬಸ್​ಗಳಿಗೆ ಬೆಂಕಿ ಹಚ್ಚಿ ಗ್ರಾಮಸ್ಥರು ತಮ್ಮ ಆಕ್ರೋಶವನ್ನು ಹೊರಹಾಕಿದರು.

ಇದನ್ನೂ ಓದಿ: Crime News: 70ನೇ ವಯಸ್ಸಿನಲ್ಲಿ ಮದುವೆಯಾಗಲು ಹೋಗಿ 28 ಲಕ್ಷ ಕಳೆದುಕೊಂಡ ತಾತ!



ಪಶ್ಚಿಮ ಬಂಗಾಳದ ಧೀನಜ್​ಪುರದ ರಾಷ್ಟ್ರೀಯ ಹೆದ್ದಾರಿ 31ನ್ನು ಬಂದ್ ಮಾಡಿ, ಬಸ್​ಗಳಿಗೆ ಬೆಂಕಿ ಹಚ್ಚಿ ಜನರು ಪ್ರತಿಭಟನೆ ನಡೆಸಿದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಗೌತಮ್ ದೇವ್, ಈ ಪ್ರಕರಣವನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳಬಾರದು. ಇದು ಬಹಳ ಆಘಾತಕಾರಿ ಮತ್ತು ಹೇಯ ಕೃತ್ಯ. ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗುವುದರಲ್ಲಿ ಅನುಮಾನ ಬೇಡ. ಕಾನೂನುಪ್ರಕಾರವಾಗಿ ಅಪರಾಧಿಗಳಿಗೆ ಸೂಕ್ತ ಶಿಕ್ಷೆಯಾಗಲಿದೆ. ಸೋಮವಾರ ನಾವು ಮೃತ ಯುವತಿಯ ಕುಟುಂಬಸ್ಥರನ್ನು ಭೇಟಿಯಾಗಲಿದ್ದೇವೆ ಎಂದು ತಿಳಿಸಿದ್ದಾರೆ.

ಇಲ್ಲಿನ ಸೋನ್​ಪುರ ಎಂಬ ಗ್ರಾಮದ ಅಪ್ರಾಪ್ತ ಬಾಲಕಿ ಇಂದು ಮುಂಜಾನೆ ಮೂತ್ರ ವಿಸರ್ಜನೆಗೆಂದು ಹೊರಗೆ ಹೋಗಿದ್ದವಳು ವಾಪಾಸ್ ಬಂದಿರಲಿಲ್ಲ. ಆಕೆಗಾಗಿ ಎಲ್ಲ ಕಡೆ ಹುಡುಕಾಡಿದ ನಂತರ ಬೆಳಗ್ಗೆ 8 ಗಂಟೆ ಸುಮಾರಿಗೆ ಆಕೆಯ ಶವ ಪತ್ತೆಯಾಗಿತ್ತು. ಆಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿದೆ ಎಂದು ಗ್ರಾಮಸ್ಥರು ಮತ್ತು ಕುಟುಂಬಸ್ಥರು ಆರೋಪಿಸಿದ್ದರು.
Published by:Sushma Chakre
First published: