ನವದೆಹಲಿ (ಫೆ. 18): ಉತ್ತರ ಪ್ರದೇಶದ ಉನ್ನಾವೋದಲ್ಲಿ ನಾಪತ್ತೆಯಾಗಿದ್ದ ಇಬ್ಬರು ದಲಿತ ಬಾಲಕಿಯರು ಶವವಾಗಿ ಪತ್ತೆಯಾಗಿದ್ದಾರೆ. ನಿಗೂಢವಾಗಿ ಸಾವನ್ನಪ್ಪಿರುವ ಇವರಿಬ್ಬರು ಶವವಾಗಿ ಗೋಧಿ ಹೊಲದಲ್ಲಿ ಪತ್ತೆಯಾಗಿದ್ದಾರೆ. ಇವರಿಬ್ಬರ ಜೊತೆಗಿದ್ದ ಇನ್ನೋರ್ವ ಯುವತಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಈ ನಿಗೂಢ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ.
ಉನ್ನಾವೋದ 13, 16 ಮತ್ತು 17 ವರ್ಷದ ಮೂವರು ಅಪ್ರಾಪ್ತ ಬಾಲಕಿಯರು ಹಸು, ಎಮ್ಮೆಗಳನ್ನು ಹೊಡೆದುಕೊಂಡು ಬರಲು ಬೆಟ್ಟಕ್ಕೆ ಹೋಗಿದ್ದರು. ಮೇಯಲು ಹೋಗಿದ್ದ ಹಸುಗಳನ್ನು ವಾಪಾಸ್ ಕರೆದುಕೊಂಡು ಬರಲು ಹೋಗಿದ್ದ ಅವರು ಮನೆಗೆ ಮರಳಿರಲಿಲ್ಲ. ಸ್ಥಳೀಯರು ಅವರಿಗಾಗಿ ಎಲ್ಲ ಕಡೆ ಹುಡುಕಾಟ ನಡೆಸಿದ್ದರು. ಆದರೂ ಅವರ ಪತ್ತೆಯಾಗಿರಲಿಲ್ಲ.
ಎಷ್ಟು ಹುಡುಕಿದರೂ ಮೂವರು ಬಾಲಕಿಯರು ಸಿಗದ ಕಾರಣ ಊರಿನವರು ಪೊಲೀಸರಿಗೆ ದೂರು ನೀಡಿದ್ದರು. ಇಂದು ಗೋಧಿ ಹೊಲದಲ್ಲಿ ಮೂವರು ಬಾಲಕಿಯರು ಪ್ರಜ್ಞಾಹೀನರಾಗಿ ಬಿದ್ದಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಇಬ್ಬರು ಸಾವನ್ನಪ್ಪಿದ್ದರು. ಇನ್ನೋರ್ವ ಬಾಲಕಿಯ ಸ್ಥಿತಿ ಗಂಭೀರವಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ