ನವದೆಹಲಿ (ಫೆ. 19): ಅಪರಾಧಿಗಳು ಎಷ್ಟೇ ದೊಡ್ಡವರೂ ಆಗಿದ್ದರೂ ಶಿಕ್ಷೆ ಆಗಬೇಕು. ಕಾನೂನು ಎಲ್ಲರಿಗೂ ಒಂದೇ ಎಂಬುದು ಸಾರ್ವಜನಿಕರ ಭಾವನೆ. ಆದರೆ, ತಪ್ಪು ಮಾಡಿದ ವ್ಯಕ್ತಿಗಳಿಗೆ ಶಿಕ್ಷೆ ಆಗಬೇಕು. ತಪ್ಪು ಮಾಡಿದ ವ್ಯಕ್ತಿಯನ್ನು ಸಮರ್ಥಿಸಿಕೊಳ್ಳಬಾರದು ಎಂಬ ಮಾತು ಕೂಡ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತದೆ. ಆದರೆ, ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಕೆನ್ನೆಗೆ ನಾಲ್ಕು ಕಪಾಳಮೋಕ್ಷ, ಒಂದು ಲಕ್ಷ ರೂ. ದಂಡ ವಿಧಿಸುವ ಮೂಲಕ ಉತ್ತರ ಪ್ರದೇಶದ ಪಂಚಾಯಿತಿ ಕಟ್ಟೆ ನ್ಯಾಯ ತೀರ್ಮಾನಿಸಿದೆ.
ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿರುವ ಗ್ರಾಮದಲ್ಲಿ ಯುವಕನೊಬ್ಬ ತನ್ನ ಸೋದರ ಸಂಬಂಧಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅತ್ಯಾಚಾರ ಪ್ರಕರಣವನ್ನು ಅಲ್ಲಿನ ಗ್ರಾಮ ಪಂಚಾಯಿತಿ ಅತ್ಯಾಚಾರ ಪ್ರಕರಣದ ಇತ್ಯರ್ಥಕ್ಕೆ ಮುಂದೆ ಬಂದಿದೆ. ಅತ್ಯಾಚಾರ ಎಸಗಿದ ಯುವಕನಿಗೆ ನಾಲ್ಕು ಬಾರಿ ಕಪಾಳಮೋಕ್ಷ ಮಾಡಬೇಕು. ಆರೋಪಿಯೂ 1 ಲಕ್ಷ ರೂಪಾಯಿ ದಂಡವನ್ನು ಕಟ್ಟಬೇಕು ಎಂದು ಪಂಚಾಯಿತಿ ನ್ಯಾಯ ನೀಡಿದೆ.
ಠಾಣೆಗೆ ಏಕೆ ದೂರು ಕೊಟ್ಟಿಲ್ಲ ಗೊತ್ತಾ?:
ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯೂ ಸಂತ್ರಸ್ತ ಬಾಲಕನಿಗೆ ಸಂಬಂಧಿ ಆಗಿದ್ದರಿಂದ ಈ ಪ್ರಕರಣವನ್ನು ಪಂಚಾಯಿತಿ ನ್ಯಾಯ ತೀರ್ಮಾಣದ ಮೂಲಕ ಬಗೆಹರಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಅತ್ಯಾಚಾರ ಎಸಗಿದ 16 ವರ್ಷದ ಆರೋಪಿ ಬಿಜ್ನೋರ್‌ನ ನೆಹತೌರ್ ಪ್ರದೇಶದಲ್ಲಿ ತನ್ನ 8 ವರ್ಷದ ಸೋದರ ಸಂಬಂಧಿಯ ಮೇಲೆ ಅತ್ಯಾಚಾರ ಎಸಗಿದ್ದಾನೆಂದು ಆರೋಪಿಸಲಾಗಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕನ ಕುಟುಂಬದವರು ಪೊಲೀಸ್ ಠಾಣೆಗೆ ತೆರಳದೇ ಅಲ್ಲಿನ ಸ್ಥಳೀಯ ಪಂಚಾಯಿತಿಯಲ್ಲಿ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡಿದ್ದಾರೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕನನ್ನು ಭಾನುವಾರ ಸಂಜೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
16 ವರ್ಷದ ಆರೋಪಿಯೂ 8 ವರ್ಷದ ಬಾಲಕನನ್ನು ಗ್ರಾಮದ ಹೊರ ವಲಯದಲ್ಲಿರುವ ಹೊಲವೊಂದಕ್ಕೆ ಕರೆದುಕೊಂಡು ಹೋಗಿದ್ದ. ಬಳಿಕ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಹೊಲದ ಸಮೀಪವಿದ್ದ ಸ್ಥಳೀಯ ಜನರು ಬಾಲಕನ ಕೂಗು ಕೇಳಿ ಆತನನ್ನು ಗ್ರಾಮದೊಳಗೆ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ