CSTRI Recruitment 2021; ಜ್ಯೂನಿಯರ್​ ರಿಸರ್ಚ್​ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಿ.ಟೆಕ್ ಅಥವಾ ಎಂ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

jobs

jobs

 • Share this:
  ಕೇಂದ್ರೀಯ ರೇಷ್ಮೆ ತಾಂತ್ರಿಕ ಸಂಶೋಧನಾ ಸಂಸ್ಥೆ ಖಾಲಿ ಇರುವ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಯನ್ನು ಭರ್ತಿ ಮಾಡಲು ಮುಂದಾಗಿದೆ. ನೇರ ಸಂದರ್ಶನ ಮಾಡುವ ಮೂಲಕ ಅಭ್ಯರ್ಥಿಗಳು ಆಯ್ಕೆ ಮಾಡಲಿದೆ. 

  ವಿದ್ಯಾರ್ಹತೆ:

  ಬಿ.ಟೆಕ್ ಅಥವಾ ಎಂ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

  ವಯೋಮಿತಿ:

  ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಷ್ಟು ಮಾತ್ರವಲ್ಲದೆ, ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

  ಫೆಲೋಶಿಪ್:

  ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಲಿಗೆ 18,600 ರೂ ಫೆಲೋಶಿಪ್ ನೀಡಲಾಗುವುದು.

  ಸಂದರ್ಶನ ನಡೆಯುವ ದಿನಾಂಕ:

  ಜನವರಿ 12, 2021ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ನಡೆಯಲಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

  ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ http://cstri.res.in/ ಗೆ ಭೇಟಿ ನೀಡಿ. ನೇಮಕಾತಿ ಬಗೆಗಿನ ಹೆಚ್ಚಿನ ಮಾಃಇತಿಯನ್ನು ತಿಳಿದುಕೊಳ್ಳಿ.
  First published: