Cyclone Burevi: ಬುರೇವಿ ಚಂಡಮಾರುತದ ಹಾವಳಿಯಿಂದ ತಮಿಳುನಾಡಿನಲ್ಲಿ 7 ಜನರು ಸಾವನ್ನಪ್ಪಿದ್ದಾರೆ. ಕಡ್ಡಲೂರ್ ಜಿಲ್ಲೆಯಲ್ಲಿ 300ಕ್ಕೂ ಹೆಚ್ಚು ಗ್ರಾಮಗಳು ನೀರಿನಿಂದ ಮುಳುಗಡೆಯಾಗಿದೆ. ಇಂದು ಕೇರಳದ 4 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಚೆನ್ನೈ (ಡಿ. 6): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಬುರೇವಿ ಚಂಡಮಾರುತ ಸೃಷ್ಟಿಯಾಗಿತ್ತು. ಶ್ರೀಲಂಕಾದಿಂದ ತಮಿಳುನಾಡು, ಕೇರಳದ ಕರಾವಳಿಯನ್ನು ಪ್ರವೇಶಿಸಿದ್ದ ಈ ಚಂಡಮಾರುತದ ಪರಿಣಾಮದಿಂದ ತಮಿಳುನಾಡೊಂದರಲ್ಲೇ 7 ಜನರು ಸಾವನ್ನಪ್ಪಿದ್ದಾರೆ. ಉಗ್ರರೂಪ ತಾಳಿದ ಚಂಡಮಾರುತದ ಅಬ್ಬರಕ್ಕೆ ನೂರಾರು ಗ್ರಾಮಗಳು ಜಲಾವೃತವಾಗಿವೆ. ಕೇರಳದಲ್ಲೂ ಚಂಡಮಾರುತದ ಅಬ್ಬರ ಹೆಚ್ಚಾಗಿದ್ದು, ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ತಮಿಳುನಾಡಿನ ಕಡ್ಡಲೂರ್ ಜಿಲ್ಲೆಯಲ್ಲಿ 300ಕ್ಕೂ ಹೆಚ್ಚು ಗ್ರಾಮಗಳು ನೀರಿನಿಂದ ಮುಳುಗಡೆಯಾಗಿದೆ. ಮಳೆಯಿಂದ ಮೃತಪಟ್ಟವರ ಕುಟುಂಬಕ್ಕೆ ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಮನೆ ಹಾಗೂ ಜಾನುವಾರುಗಳನ್ನು ಕಳೆದುಕೊಂಡವರಿಗೆ ಕೂಡ ಪರಿಹಾರ ಘೋಷಿಸಲಾಗಿದೆ. ಹಸುವನ್ನು ಕಳೆದುಕೊಂಡವರಿಗೆ 30 ಸಾವಿರ ರೂ., ಕರುವಿಗೆ 16 ಸಾವಿರ ಹಾಗೂ ಮೇಕೆಯನ್ನು ಕಳೆದುಕೊಂಡವರಿಗೆ 3,000 ಪರಿಹಾರ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ.
ಬುರೇವಿ ಚಂಡಮಾರುತದ ಹಾವಳಿಯಿಂದ ತಮಿಳುನಾಡಿನ ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಕಡ್ಡಲೂರ್ ಜಿಲ್ಲೆಯಲ್ಲಿ 66,000ಕ್ಕೂ ಅಧಿಕ ಜನರನ್ನು ಈಗಾಗಲೇ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. 5,000 ಜನರನ್ನು ರಾಮನಾಥಪುರಕ್ಕೆ ಸ್ಥಳಾಂತರಿಸಲಾಗಿದೆ. ತಮಿಳುನಾಡಿನಲ್ಲಿ ಅನೇಕ ಹಸುಗಳು, ಸಾಕುಪ್ರಾಣಿಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ.
திமுக தலைவர் 2021 தமிழக முதல்வர் மாண்புமிகு @mkstalin அவர்கள் நிவர் புயலை தொடர்ந்து புரெவி புயலின் தாக்கத்தால் வெள்ள பாதிப்பிற்குள்ளான கடலூர் மாவட்டத்திற்கு நேரில் சென்று வெள்ள பாதிப்பை பார்த்ததுடன் பாதிக்கப்பட்ட மக்களுக்கு நிவாரண உதவிகளை வழங்கினார்,#BureviCyclone#CuddaloreRainpic.twitter.com/m8jbtjDLWJ
— SENGUTTUVAN ELANGOVAN SRIMUSHNAM, CUDDALORE, (@SenguttuvanSrm) December 5, 2020
ತಮಿಳುನಾಡಿನ ಕನ್ಯಾಕುಮಾರಿ, ತಿರುನೆಲ್ವೇಲಿ, ತೂತುಕುಡಿ, ರಾಮನಾಥಪುರಂ, ಸಿವಗಂಗೈ ಮತ್ತು ಕೇರಳದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ ಭಾಗದಲ್ಲಿ ನಿನ್ನೆಯವರೆಗೆ ಭಾರೀ ಮಳೆಯಾಗಿತ್ತು. ಇದರಿಂದ ಕೇರಳದಲ್ಲೂ ಅನೇಕ ಕಡೆ ಮನೆಗಳು ಮುಳುಗಡೆಯಾಗಿವೆ. ಹೀಗಾಗಿ, ಇಂದು ಕೇರಳದ 4 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೇರಳದ ಪಥನಾಂತಿಟ್ಟ, ಎರ್ನಾಕುಲಂ, ಇಡುಕ್ಕಿ, ಮಲಪ್ಪುರಂ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Published by:Sushma Chakre
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ