• Home
 • »
 • News
 • »
 • national-international
 • »
 • Cyclone Mandous: ಮಾಂಡೌಸ್ ಎಫೆಕ್ಟ್​: ತಮಿಳುನಾಡು, ಚೆನ್ನೈ, ಪುದುಚೇರಿಯಲ್ಲಿ ಭಾರೀ ಮಳೆ?

Cyclone Mandous: ಮಾಂಡೌಸ್ ಎಫೆಕ್ಟ್​: ತಮಿಳುನಾಡು, ಚೆನ್ನೈ, ಪುದುಚೇರಿಯಲ್ಲಿ ಭಾರೀ ಮಳೆ?

ಚಂಡಮಾರುತದಿಂದ ಭಾರೀ ಮಳೆಯಾಗುವ ಸಾಧ್ಯತೆ

ಚಂಡಮಾರುತದಿಂದ ಭಾರೀ ಮಳೆಯಾಗುವ ಸಾಧ್ಯತೆ

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಉತ್ತರ ತಮಿಳುನಾಡು, ಪುದುಚೇರಿ ಹಾಗೂ ದಕ್ಷಿಣ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಬಗ್ಗೆ ಎಚ್ಚರಿಕೆ ನೀಡಿದೆ. ಐಎಂಡಿ ಎಚ್ಚರಿಕೆ ರವಾನಿಸುತ್ತಿದ್ದಂತೆ, ಆಯಾ ರಾಜ್ಯದ ಇಲಾಖೆಗಳು ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ಸಹ ತೆಗೆದುಕೊಂಡಿವೆ.

ಮುಂದೆ ಓದಿ ...
 • Trending Desk
 • 2-MIN READ
 • Last Updated :
 • Chennai [Madras], India
 • Share this:

  ಚೆನ್ನೈ(ಡಿ.08): ನೈಋತ್ಯ ಹಾಗೂ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮಾಂಡೌಸ್ ಚಂಡಮಾರುತ ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಉತ್ತರ ತಮಿಳುನಾಡು, ಪುದುಚೇರಿ ಹಾಗೂ ದಕ್ಷಿಣ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಬಗ್ಗೆ ಎಚ್ಚರಿಕೆ ನೀಡಿದೆ. ಐಎಂಡಿ ಎಚ್ಚರಿಕೆ ರವಾನಿಸುತ್ತಿದ್ದಂತೆ, ಆಯಾ ರಾಜ್ಯದ ಇಲಾಖೆಗಳು ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ಸಹ ತೆಗೆದುಕೊಂಡಿವೆ.


  ಇಂದಿನಿಂದ ಈ ರಾಜ್ಯಗಳಲ್ಲಿ ವರುಣನ ಆರ್ಭಟ


  ಹವಾಮಾನ ಇಲಾಖೆ ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದು, "ನೈಋತ್ಯ ಮತ್ತು ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮಾಂಡೌಸ್ ಚಂಡಮಾರುತ ತೀವ್ರಗೊಂಡಿದ್ದು, ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ ಎಂದಿದೆ.


  ಇದನ್ನೂ ಓದಿ: Protein Deficiency: ಪ್ರೋಟೀನ್ ಕೊರತೆ ಇದ್ರೆ ಈ ಹಣ್ಣುಗಳೇ ಪರಿಹಾರವಂತೆ


  ಮಾಂಡೌಸ್ ಚಂಡಮಾರುತ ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸಲಿದ್ದು, ಡಿಸೆಂಬರ್ 7 ರಂದು ಇದರ ತೀವ್ರತೆ ಹೆಚ್ಚಾಗಲಿದೆ. ಡಿಸೆಂಬರ್ 8 ರಂದು ಉತ್ತರ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗಕ್ಕೆ ತಲುಪಲಿದ್ದು, ನೈಋತ್ಯ ಬಂಗಾಳಕೊಲ್ಲಿ ತಲುಪುವ ಸಾಧ್ಯತೆ ಇದೆ. ಡಿಸೆಂಬರ್ 10ರ ಮುಂಜಾನೆ ಗಂಟೆಗೆ 65.75 ಕಿಮೀ ವೇಗದಲ್ಲಿ ಚಂಡಮಾರುತದ ಪ್ರಭಾವ ಬಲವಾದ ಗಾಳಿ ಬೀಸಲಿದೆ ಎಂದು ಇಲಾಖೆ ಎಚ್ಚರಿಸಿದೆ.


  ಇತರೆ ರಾಜ್ಯಗಳಲ್ಲೂ ಮಳೆ ಸಾಧ್ಯತೆ


  ಒಟ್ಟಾರೆ ಹವಾಮಾನ ಮುನ್ಸೂಚನಾ ಸಂಸ್ಥೆ ನೀಡಿರುವ ಮಾಹಿತಿಯ ಪ್ರಕಾರ, ಮಾಂಡೌಸ್ ಚಂಡಮಾರುತದ ಪ್ರಭಾವದಿಂದಾಗಿ ಮುಂದಿನ ಎರಡು ದಿನಗಳ ಕಾಲ ಹಲವಾರು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.


  ತಮಿಳುನಾಡಿನ ಕರಾವಳಿ ಭಾಗ, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಭಾಗ ಮತ್ತು ರಾಯಲಸೀಮಾದ ಅಕ್ಕ ಪಕ್ಕದ ಪ್ರದೇಶಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮಾಹಿತಿ ನೀಡಿದೆ


  ಡಿಸೆಂಬರ್ 10ರವರೆಗೂ ಮಳೆ


  ಇದಾದ ನಂತರ ಮಳೆ ಸಂಭವ ಸಾಧ್ಯತೆ ಕಡಿಮೆ ಇದೆ ಎಂದು ಇಲಾಖೆ ಹೇಳಿದೆ. ಅದಾಗ್ಯೂ ಇತರೆ ರಾಜ್ಯಗಳನ್ನು ಹೊರತುಪಡಿಸಿ ತಮಿಳುನಾಡು, ಪುದುಚೇರಿ ಮತ್ತು ಆಂಧ್ರಪ್ರದೇಶದ ಕೆಲವು ಪ್ರದೇಶಗಳಲ್ಲಿ ಡಿಸೆಂಬರ್ 10 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ.


  ಮಳೆ ಎಚ್ಚರಿಕೆ, ವಿವಿಧ ರಾಜ್ಯಗಳಲ್ಲಿ ಅಧಿಕಾರಿಗಳು ತೆಗೆದುಕೊಂಡ ಮುನ್ನೆಚ್ಚರಿಕೆಗಳೇನು?


  1) ಈ ಅವಧಿಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಶ್ರೀಲಂಕಾದ ಕರಾವಳಿಯಲ್ಲಿ ಮತ್ತು ಹೊರಗೆ ಹೋಗದಂತೆ ಸೂಚಿಸಲಾಗಿದೆ.


  2) ಭಾರೀ ಮಳೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ ಪುದುಚೇರಿ ಮುಖ್ಯಮಂತ್ರಿ ಎನ್ ರಂಗಸ್ವಾಮಿ, ಪುದುಚೇರಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪರಿಶೀಲನಾ ಸಭೆಯನ್ನು ನಡೆಸಿದ್ದಾರೆ.


  ಸಭೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಕ್ಕೆ ವಿಶೇಷ ಮುನ್ಸೂಚನೆ ನೀಡಿದ್ದು, ಪರಿಸ್ಥಿತಿಯನ್ನು ನಿಭಾಯಿಸಲು ಸಿದ್ಧವಾಗಿರಲು ಸೂಚಿಸಿದೆ.


  3) ಸಂದೀಪ್ ಕುಮಾರ್, ಕಮಾಂಡರ್, ಮತ್ತು ಸಬ್ ಇನ್ಸ್‌ಪೆಕ್ಟರ್, NDRF ಅರಕ್ಕೋಣಂ, ಇವರು ಮಾತನಾಡಿ "ನಮ್ಮ ತಂಡವು ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ. ಪ್ರವಾಹ ಅಥವಾ ಭಾರಿ ಮಳೆಯಿಂದಾಗಿ ಉಂಟಾಗುವ ಹಾನಿಯ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿದ್ದೇವೆ, ಸಹಾಯಕ್ಕೆ ತಕ್ಷಣ ಧಾವಿಸುತ್ತೇವೆ" ಎಂದಿದ್ದಾರೆ.


  ಇದನ್ನೂ ಓದಿ: Children: ಪೋಷಕರೇ ಗಮನಿಸಿ, ಮಕ್ಕಳಲ್ಲಿ ಹೆಚ್ಚಾಗ್ತಿದೆ ಲೈಂಗಿಕ ಆಸಕ್ತಿ; ಕೊರೊನಾ ನಂತರ ಕೆಟ್ಟ ಚಟಕ್ಕೆ ಬಿದ್ದ ವಿದ್ಯಾರ್ಥಿಗಳು


  4) ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವೈ ಹರಿನಾರಾಯಣನ್ ಅವರು ಡಿಸೆಂಬರ್ 8 ರಿಂದ 11 ರವರೆಗೆ ನಾಲ್ಕು ದಿನಗಳ ಕಾಲ ಮಾಂಡೌಸ್ ಚಂಡಮಾರುತದ ಹಿನ್ನೆಲೆಯಲ್ಲಿ ಜಾಗರೂಕರಾಗಿರಿ ಮತ್ತು ಪರಿಹಾರ ಕಾರ್ಯಾಚರಣೆಗೆ ಮುಂಗಡ ವ್ಯವಸ್ಥೆಗಳನ್ನು ಮಾಡುವಂತೆ ಎಲ್ಲಾ ಇಲಾಖೆಗಳ ಜಿಲ್ಲಾ ಮತ್ತು ಮಂಡಲ ಮಟ್ಟದ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.


  5) ಮಾಂಡೌಸ್ ಚಂಡಮಾರುತದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಮುಂಗಡ ವ್ಯವಸ್ಥೆಗಳ ಕುರಿತು ಬುಧವಾರ ಜಿಲ್ಲಾ ಕಾರ್ಯದರ್ಶಿ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲನೆ ನಡೆಸಲಾಯಿತು.


  6) ಪುನರ್ವಸತಿ ಕೇಂದ್ರಗಳನ್ನು ಗುರುತಿಸಿ ಅವರಿಗೆ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸುವ ಅಂಗವಾಗಿ ಶಾಲೆಗಳಲ್ಲಿ ಮಧ್ಯಾಹ್ನದ ಊಟ ತಯಾರಿಸುವವರಿಗೆ
  ಊಟದ ವ್ಯವಸ್ಥೆಗೆ ಅಗತ್ಯ ವಸ್ತುಗಳ ಲಭ್ಯವಾಗುವಂತೆ ಚಿತ್ತೂರು ಜಿಲ್ಲಾಧಿಕಾರಿಗಳು ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.

  Published by:Precilla Olivia Dias
  First published:

  ಸುದ್ದಿ 18ಕನ್ನಡ ಟ್ರೆಂಡಿಂಗ್

  ಮತ್ತಷ್ಟು ಓದು