Tauktae Cyclone: ಮುಂಬೈನಲ್ಲಿ ಬಾರ್ಜ್ ಮುಳುಗಿ 24 ಜನ ನಾಪತ್ತೆ; ಸಾವಿನ ಸಂಖ್ಯೆ 51ಕ್ಕೆ ಏರಿಕೆ

Cyclone Tauktae: ಮುಂಬೈನಲ್ಲಿ ಅರಬ್ಬಿ ಸಮುದ್ರದಲ್ಲಿ ಸಿಲುಕಿದ್ದ ಪಿ-305 ಬಾರ್ಜ್​ನಲ್ಲಿದ್ದ  (Barge P-305) 261 ಜನರ ಪೈಕಿ ಒಟ್ಟು 51 ಜನರ ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ. ಇನ್ನೂ 24 ಜನರು ನಾಪತ್ತೆಯಾಗಿದ್ದು, ಅವರು ಬದುಕುಳಿದಿರುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.

ಮುಂಬೈನಲ್ಲಿ ತೌಕ್ತೆ ಚಂಡಮಾರುತದ ಎಫೆಕ್ಟ್

ಮುಂಬೈನಲ್ಲಿ ತೌಕ್ತೆ ಚಂಡಮಾರುತದ ಎಫೆಕ್ಟ್

  • Share this:
ಮುಂಬೈ (ಮೇ 21): ತೌಕ್ತೆ ಚಂಡಮಾರುತದ (Cyclone Tauktae) ಅಬ್ಬರಕ್ಕೆ ಮಹಾರಾಷ್ಟ್ರ, ಗುಜರಾತ್​ನಲ್ಲಿ ಅಪಾರ ಆಸ್ತಿ-ಪಾಸ್ತಿ ನಾಶವಾಗಿದೆ. ಚಂಡಮಾರುತದಿಂದ ಕಳೆದ ಸೋಮವಾರ ಮುಂಬೈನಲ್ಲಿ ಅರಬ್ಬಿ ಸಮುದ್ರದಲ್ಲಿ ಸಿಲುಕಿದ್ದ ಪಿ-305 ಬಾರ್ಜ್​ನಲ್ಲಿದ್ದ  (Barge P-305) 261 ಜನರ ಪೈಕಿ ಒಟ್ಟು 51 ಜನರ ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ. ಇನ್ನೂ 24 ಜನರು ನಾಪತ್ತೆಯಾಗಿದ್ದು, ಅವರು ಬದುಕುಳಿದಿರುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.

ಮುಂಬೈ ಕರಾವಳಿ ಪ್ರದೇಶದಲ್ಲಿ ಸುಮಾರು 35 ನಾಟಿಕಲ್ ಮೈಲು ದೂರದಲ್ಲಿ ಪಿ-305 ಬಾರ್ಜ್ ಮುಳುಗಿತ್ತು. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಇನ್ನು 24 ಮಂದಿ ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 261 ಮಂದಿಯಿದ್ದ ಈ ಬಾರ್ಜ್ ತೌಕ್ತೆ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಸೋಮವಾರ ಸಮುದ್ರದಲ್ಲಿ ಮುಳುಗಿತ್ತು. ಐಎನ್​ಎಸ್​ ಕೊಚ್ಚಿ (INS Cochin) ಮತ್ತು ಐಎನ್​ಎಸ್​ ಕೊಲ್ಕತ್ತಾದ (INS Kolkata) ಹಡಗುಗಳಲ್ಲಿ ಗುರುವಾರ ತಡರಾತ್ರಿಯವರೆಗೂ ಕಾರ್ಯಾಚರಣೆ ನಡೆಸಿ ಒಟ್ಟು 51 ಜನರ ಶವಗಳನ್ನು ಹೊರಗೆ ತೆಗೆಯಲಾಗಿದೆ.

ಹಡಗುಗಳು, ಹೆಲಿಕಾಪ್ಟರ್, ಎನ್​ಡಿಆರ್​​ಎಫ್​ ಯೋಧರು ಈ ದುರಂತ ನಡೆದ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ತೌಕ್ತೆ ಚಂಡಮಾರುತದ ಹೊಡೆತಕ್ಕೆ ಒಳಗಾದ ಪ್ರದೇಶಗಳಿಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅತಿಹೆಚ್ಚು ಹಾನಿಗೀಡಾದ ರತ್ನಗಿರಿ ಮತ್ತಿತರ ಪ್ರದೇಶಗಳಿಗೆ ಪರಿಹಾರ ಘೋಷಿಸುವುದಾಗಿ ತಿಳಿಸಿದ್ದಾರೆ. ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಮಹಾರಾಷ್ಟ್ರದಲ್ಲಿ 19 ಜನರು ಸಾವನ್ನಪ್ಪಿದ್ದು, 37 ಜನರು ಗಾಯಗೊಂಡಿದ್ದಾರೆ.ಇದರ ನಡುವೆ ಮತ್ತೊಂದು ಚಂಡಮಾರುತ ಅಪ್ಪಳಿಸಲು ಸಜ್ಜಾಗಿದೆ. ಯಾಸ್ ಚಂಡಮಾರುತ (Cyclone Yaas) ಮೇ 26ರಂದು ಅಪ್ಪಳಿಸಲಿದ್ದು, ಇಂದಿನಿಂದ ಮೇ 26ರವರೆಗೆ ಕರಾವಳಿ ತೀರದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಪಶ್ಚಿಮ ಬಂಗಾಳ, ಒರಿಸ್ಸಾ, ತಮಿಳುನಾಡು, ಗೋವಾ ಸೇರಿದಂತೆ ಕರಾವಳಿ ತೀರದ ರಾಜ್ಯಗಳಲ್ಲಿ ಯಾಸ್ ಚಂಡಮಾರುತದ ಆರ್ಭಟವಿರಲಿದೆ.ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಮೇ 23ರಿಂದ 26ರವರೆಗೆ ಯಾಸ್ ಚಂಡಮಾರುತ ಪಶ್ಚಿಮ ಕರಾವಳಿಯ ರಾಜ್ಯಗಳಿಗೆ ಅಪ್ಪಳಿಸಲಿದೆ. ಮೇ 23ರಂದು ಈ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಳ್ಳಲಿದ್ದು, ಮೇ 26ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Cyclone Yaas: ತೌಕ್ತೆ ಬೆನ್ನಲ್ಲೇ ಮೇ 23ರಿಂದ ಅಪ್ಪಳಿಸಲಿದೆ ಯಾಸ್ ಚಂಡಮಾರುತ; ನಾಳೆಯಿಂದ ಭಾರೀ ಮಳೆ ಸಾಧ್ಯತೆ

ಜೂನ್ 1ರಂದು ಕೇರಳಕ್ಕೆ ಮುಂಗಾರು (Kerala Monsoon) ಪ್ರವೇಶವಾಗಲಿದೆ. ಅಷ್ಟರೊಳಗೆ ಯಾಸ್ ಎಂಬ ಮತ್ತೊಂದು ಚಂಡಮಾರುತ ಅಪ್ಪಳಿಸಲಿದ್ದು, ಇನ್ನೊಂದು ವಾರ ದಕ್ಷಿಣ ಕನ್ನಡ, ಉಡುಪಿ, ಕಾರವಾರ ಭಾಗಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇಂದು ಬೆಳಗ್ಗೆಯಿಂದಲೇ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆ ಮುಂದುವರೆಯುವ ಸಾಧ್ಯತೆಯಿದೆ.

ಬಂಗಾಳ ಕೊಲ್ಲಿಯಲ್ಲಿ ಮೇ 23ರಂದು ಸೃಷ್ಟಿಯಾಗುವ ಯಾಸ್ ಚಂಡಮಾರುತ ಬಳಿಕ ಪಶ್ಚಿಮ ಬಂಗಾಳ ಮತ್ತು ಒರಿಸ್ಸಾ ಕಡೆಗೆ ಚಲಿಸುವ ಸಾಧ್ಯತೆಯಿದೆ. ಹೀಗಾಗಿ, ಕರಾವಳಿ ತೀರದಲ್ಲಿರುವ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಚಂಡಮಾರುತವಾಗಿ ಬದಲಾಗಲಿದ್ದು, ಗುಜರಾತ್, ಮಹಾರಾಷ್ಟ್ರದ, ಪಶ್ಚಿಮ ಬಂಗಾಳ, ಒರಿಸ್ಸಾ ಸೇರಿ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
Published by:Sushma Chakre
First published: