ಬೆಂಗಳೂರು (ಮೇ 15): ಭಾರತದಲ್ಲಿ ಈ ವರ್ಷದ ಮೊದಲ ಚಂಡಮಾರುತ ಇಂದು ಸಂಜೆಯ ವೇಳೆಗೆ ಅಬ್ಬರಿಸಲಿದೆ. ಹೀಗಾಗಿ, ಕರ್ನಾಟಕ, ಕೇರಳ, ಗುಜರಾತ್, ಒರಿಸ್ಸಾದಲ್ಲಿ ನಿನ್ನೆ ಸಂಜೆಯಿಂದಲೇ ಮಳೆ ಶುರುವಾಗಿದೆ. ಈ ಚಂಡಮಾರುತಕ್ಕೆ ತೌಕ್ತೆ ಚಂಡಮಾರುತ ಎಂದು ಹೆಸರಿಡಲಾಗಿದೆ. ಇಂದಿನಿಂದ ಮೇ 17ರವೆರೆಗೆ ಚಂಡಮಾರುತದ ಪರಿಣಾಮ ಹೆಚ್ಚಾಗಿರಲಿದ್ದು, ಹಲವು ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ಕೇರಳದ 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತದಿಂದ ಭಾರೀ ಮಳೆ ಉಂಟಾಗಿ ಅನಾಹುತಗಳು ಸೃಷ್ಟಿಯಾಗುವ ಸಾಧ್ಯತೆ ಇರುವುದರಿಂದ 50 ಎನ್ಡಿಆರ್ಎಫ್ ತಂಡಗಳನ್ನು ಕೇರಳ, ಕರ್ನಾಟಕ, ತಮಿಳುನಾಡು, ಗುಜರಾತ್ ಮತ್ತು ಮಹಾರಾಷ್ಟ್ರಕ್ಕೆ ನಿಯೋಜನೆ ಮಾಡಲಾಗಿದೆ. ತೌಕ್ತೆ ಚಂಡಮಾರುತದ ಆರ್ಭಟ ಜೋರಾಗುವ ಸಾಧ್ಯತೆ ಇರುವುದರಿಂದ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
ಕರ್ನಾಟಕ, ಕೇರಳ, ಗೋವಾದಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಕೇರಳದಲ್ಲಿ ಈಗಾಗಲೇ ಸುಮಾರು 200ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ. 50 ಎನ್ಡಿಆರ್ಎಫ್ ತಂಡಗಳ ಪೈಕಿ ಈಗಾಗಲೇ 24 ತಂಡಗಳು ಸಜ್ಜಾಗಿದ್ದು, ಅಗತ್ಯವಿದ್ದಾಗ ಆಯಾ ರಾಜ್ಯಗಳಿಗೆ ಕಳುಹಿಸಲಾಗುವುದು. ಇಂದು ಸಂಜೆಯ ವೇಳೆಗೆ ಚಂಡಮಾರುತದ ಆರ್ಭಟ ಹೆಚ್ಚಾಗಲಿದೆ. ಮಲಪ್ಪುರಂನ ಪೊನ್ನಾನಿಯಲ್ಲಿ ಸುಮಾರು 50 ಮನೆಗಳಿಗೆ ನೀರು ನುಗ್ಗಿವೆ. ಕೊಡುಂಗಲ್ಲೂರಿನಲ್ಲಿ ಸುಮಾರು 100 ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ. ಕೇರಳದಲ್ಲಿ ನಿನ್ನೆ ಸುರಿದ ಮಳೆಯಿಂದ ಇಬ್ಬರು ಸಾವನ್ನಪ್ಪಿದ್ದಾರೆ.
#CycloneTauktae
Update 1
Deep depression 240 Nm NW off Kochi on 14th evening very likely to intensify into a cyclonic storm Tauktae by 15th morning#IndianNavy ships, aircraft, helicopters, diving and disaster relief teams standby... (1/2)@SpokespersonMoD @DefenceMinIndia pic.twitter.com/mJRLb9fgyk
— SpokespersonNavy (@indiannavy) May 14, 2021
#Mangaluru #CycloneTauktae Electric poles and trees crashed to the ground as Mangaluru and surrounding areas witness heavy rains @XpressBengaluru @santwana99 pic.twitter.com/PVE9hB4RUz
— vincent dsouza (@vinndz_TNIE) May 15, 2021
Live From Kerala 🌊🌧️#CycloneTauktae pic.twitter.com/KSqRUGqH1m
— lajucp (@lajucp4) May 14, 2021
Cyclonic Storm “Tauktae” (pronounced as Tau’Te) over eastcentral and adjoining southeast Arabian Sea: Cyclone Alert for Gujarat & Diu coasts (Yellow message) pic.twitter.com/fmcTMVmrjg
— India Meteorological Department (@Indiametdept) May 15, 2021
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ