ಕೊಲ್ಕತ್ತಾ (ಮೇ 27): ನಿನ್ನೆಯಿಂದ ಪಶ್ಚಿಮ ಬಂಗಾಳ ಮತ್ತು ಒರಿಸ್ಸಾದಲ್ಲಿ ಯಾಸ್ ಚಂಡಮಾರುತದ ಆರ್ಭಟ ಹೆಚ್ಚಾಗಿದೆ. ಪಶ್ಚಿಮ ಬಂಗಾಳದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿದೆ. ಇಂದು ರಾತ್ರಿಯವರೆಗೂ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೇ, ಒರಿಸ್ಸಾದಲ್ಲಿ ಚಂಡಮಾರುತದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ 128 ಗ್ರಾಮಗಳ ಜನರಿಗೆ 7 ದಿನಗಳ ಕಾಲ ಪುನರ್ವಸತಿ ಒದಗಿಸುವುದಾಗಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಘೋಷಿಸಿದ್ದಾರೆ.
ತೀವ್ರವಾದ ಚಂಡಮಾರುತ ಗಾಳಿ ಯಾಸ್ ಹಿನ್ನೆಯಲ್ಲಿ ಆಂಧ್ರದ ಕಡಲ ತೀರದ ಮೂರು ಜಿಲ್ಲೆಗಳಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಕೆಯನ್ನು ನೀಡಿದೆ. ಶ್ರೀಕಾಕುಳಂ, ವಿಜಿಯನಗರಂ, ವಿಶಾಖಪಟ್ಟಣಂ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಪ್ರತಿ ಗಂಟೆಗೆ ಚಂಡಮಾರುತ 50-60 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನೂ 2 ದಿನಗಳ ಕಾಲ ಸಮುದ್ರಕ್ಕೆ ಇಳಿಯದಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಕೆ ನೀಡಿದೆ.
7 Indian Navy teams from Visakhapatnam, comprising 2 Diving & 5 Flood Relief Teams (FRT) undertake relief operations in aftermath of impending #CycloneYaas at 3 separate locations-Digha, Fraserganj & Diamond Harbour in West Bengal: Indian Navy pic.twitter.com/QYr78lcZ0C
— ANI (@ANI) May 27, 2021
ಇದನ್ನೂ ಓದಿ: Petrol Price Today: ಮೇ ತಿಂಗಳೊಂದರಲ್ಲೇ 14 ಬಾರಿ ಪೆಟ್ರೋಲ್ - ಡೀಸೆಲ್ ಬೆಲೆ ಏರಿಸಿದ ಕೇಂದ್ರ ಸರ್ಕಾರ
ಪಶ್ಚಿಮ ಬಂಗಾಳದಲ್ಲಿ ಯಾಸ್ ಚಂಡಮಾರುತದ ಅಬ್ಬರದಿಂದ 1 ಕೋಟಿ ಜನರು ತೊಂದರೆಗೊಳಗಾಗಿದ್ದಾರೆ. ಸುಮಾರು 3 ಲಕ್ಷ ಮನೆಗಳು ಹಾನಿಗೀಡಾಗಿವೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಒರಿಸ್ಸಾದಲ್ಲಿ ಚಂಡಮಾರುತದ ಆರ್ಭಟಕ್ಕೆ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. 20 ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ.
In preparation for #CycloneYaas, 12T of #HADR eqpt and 164 pers of @NDRFHQ were airlifted to Kolkata & Kalaikunda from Arakkonam & Lilabari yesterday, by 2xC-130 and 2xAn-32.
Airlift of 4T of load and 41 pers of #NDRF by 2xAn-32 from Lilabari to Panagarh & Durgapur is underway. pic.twitter.com/XDsb9CQXxj
— Indian Air Force (@IAF_MCC) May 26, 2021
ಇದನ್ನೂ ಓದಿ: Cyclone Yaas: ಪಶ್ಚಿಮ ಬಂಗಾಳಕ್ಕೆ ಇಂದು ಅಪ್ಪಳಿಸಲಿದೆ ಯಾಸ್ ಚಂಡಮಾರುತ; 950 NDRF ಸಿಬ್ಬಂದಿ ಏರ್ಲಿಫ್ಟ್
ಪಶ್ಚಿಮ ಬಂಗಾಳದ 14 ಜಿಲ್ಲೆಗಳಿಂದ 11 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಒರಿಸ್ಸಾದಲ್ಲಿ 10 ಲಕ್ಷಕ್ಕೂ ಹೆಚ್ಚು ಜನರನ್ನು ಶಿಫ್ಟ್ ಮಾಡಲಾಗಿದೆ. ಯಾಸ್ ಚಂಡಮಾರುತದ ಅಬ್ಬರ ತೀವ್ರವಾಗಿರಲಿದೆ ಎಂಬ ಕಾರಣಕ್ಕೆ ಈಗಾಗಲೇ ಎನ್ಡಿಆರ್ಎಫ್, ಕೋಸ್ಟಲ್ ಗಾರ್ಡ್, ಐಎನ್ಎಸ್ ಚಿಲಿಕಾಗೆ ಒರಿಸ್ಸಾ ಮತ್ತು ಪಶ್ಚಿಮ ಬಂಗಾಳ ಸರ್ಕಾರ ಸನ್ನದ್ಧರಾಗಿರಲು ಸೂಚಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ ಒರಿಸ್ಸಾದಲ್ಲಿ 28 ಎನ್ಡಿಆರ್ಎಫ್ ತಂಡಗಳು ಹಾಗೂ ಪಶ್ಚಿಮ ಬಂಗಾಳದಲ್ಲಿ 32 ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ ಆಂಧ್ರಪ್ರದೇಶ, ತಮಿಳುನಾಡು, ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲೂ ಕೆಲವು ಎನ್ಡಿಆರ್ಎಫ್ ತಂಡಗಳನ್ನು ಕಳುಹಿಸಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ