Cyclone Yaas: ಯಾಸ್ ಚಂಡಮಾರುತದ ಎಫೆಕ್ಟ್​; ಒರಿಸ್ಸಾದಲ್ಲಿ ನಾಳೆ ಭಾರೀ ಭೂಕುಸಿತ ಸಾಧ್ಯತೆ; ರೆಡ್ ಅಲರ್ಟ್​ ಘೋಷಣೆ

Cyclone Yaas Effect: ಒರಿಸ್ಸಾ ಮತ್ತು ಪಶ್ಚಿಮ ಬಂಗಾಳದಲ್ಲಿ ನಿನ್ನೆ ಸಂಜೆಯಿಂದ ಭಾರೀ ಮಳೆ ಸುರಿಯುತ್ತಿದ್ದು, ಒಟ್ಟು 9 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ. ಒರಿಸ್ಸಾದ 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಯಾಸ್ ಚಂಡಮಾರುತ

ಯಾಸ್ ಚಂಡಮಾರುತ

  • Share this:
ಕೊಲ್ಕತ್ತಾ (ಮೇ 25): ಪಶ್ಚಿಮ ಬಂಗಾಳ ಮತ್ತು ಒರಿಸ್ಸಾದಲ್ಲಿ ಯಾಸ್ ಚಂಡಮಾರುತದ ಆರ್ಭಟ ಶುರುವಾಗಿದೆ. ನಾಳೆ ಪಶ್ಚಿಮ ಬಂಗಾಳ ಮತ್ತು ಒರಿಸ್ಸಾದಲ್ಲಿ ಯಾಸ್ ಚಂಡಮಾರುತ (Yaas Cyclone)ದ ಅಬ್ಬರ ಹೆಚ್ಚಾಗಲಿದ್ದು, ಇಂದು ಅಲ್ಲಲ್ಲಿ ಭೂಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಒರಿಸ್ಸಾ ಮತ್ತು ಪಶ್ಚಿಮ ಬಂಗಾಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಈ ಎರಡೂ ರಾಜ್ಯಗಳಲ್ಲಿ ನಿನ್ನೆ ಸಂಜೆಯಿಂದ ಭಾರೀ ಮಳೆ ಸುರಿಯುತ್ತಿದ್ದು, ಕರಾವಳಿ ತೀರದ ಮತ್ತು ನದಿ ತೀರದ ಒಟ್ಟು 9 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ. ಒರಿಸ್ಸಾದ 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ. ಈಗಾಗಲೇ 149 ಎನ್​ಡಿಆರ್​ಎಫ್​ ತಂಡಗಳು ಕಾರ್ಯಾಚರಣೆಗೆ ಸಿದ್ಧವಾಗಿವೆ.

ಒರಿಸ್ಸಾದ ಧಮ್ರಾ ಬಂದರಿನ ಬಳಿ ನಾಳೆ ಭಾರೀ ಭೂಕುಸಿತವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪಶ್ಚಿಮ ಬಂಗಾಳದ 14 ಜಿಲ್ಲೆಗಳಿಂದ 8,09,830 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಒರಿಸ್ಸಾದಲ್ಲಿ 1 ಲಕ್ಷಕ್ಕೂ ಹೆಚ್ಚು ಜನರನ್ನು ಶಿಫ್ಟ್ ಮಾಡಲಾಗಿದೆ. ಈಗಾಗಲೇ NDRF​ ಸಿಬ್ಬಂದಿಯನ್ನು ಪಶ್ಚಿಮ ಬಂಗಾಳ ಮತ್ತು ಒರಿಸ್ಸಾಗೆ Airlift​ ಮಾಡಲಾಗಿದ್ದು, 26 ಹೆಲಿಕಾಪ್ಟರ್​ಗಳನ್ನು ಯಾವುದೇ ಕ್ಷಣದಲ್ಲಿ ಜನರ ರಕ್ಷಣೆಗೆ ಸಿದ್ಧಪಡಿಸಲಾಗಿದೆ.

ನಾಳೆ ಒರಿಸ್ಸಾ ಮತ್ತು ಪಶ್ಚಿಮ ಬಂಗಾಳದಲ್ಲಿ ಅಪ್ಪಳಿಸಲಿರುವ ಯಾಸ್ ಚಂಡಮಾರುತ ಗಂಟೆಗೆ 155 ಕಿ.ಮೀ.ಯಿಂದ 165 ಕಿ.ಮೀ. ವೇಗದಲ್ಲಿ ಚಲಿಸಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಒರಿಸ್ಸಾದಲ್ಲಿ 52 ಎನ್​ಡಿಆರ್​ಎಫ್ ತಂಡಗಳು ಹಾಗೂ ಪಶ್ಚಿಮ ಬಂಗಾಳದಲ್ಲಿ 45 ಎನ್​ಡಿಆರ್​ಎಫ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ಆಂಧ್ರಪ್ರದೇಶದ ನದಿಯಲ್ಲಿ ಮುಳುಗಿದ ದೋಣಿ; ಹಸುಗೂಸು ಸೇರಿ ಮೂವರು ಸಾವು, 6 ಜನರು ನಾಪತ್ತೆ

ನಾಳೆ ಯಾಸ್ ಚಂಡಮಾರುತ ಏಳುವುದರಿಂದ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಹಾಗೂ ಭೂಕುಸಿತವಾಗುವ ಸಾಧ್ಯತೆಯಿದೆ. ಯಾಸ್ ಚಂಡಮಾರುತದಿಂದ ಅಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ ಪಶ್ಚಿಮ ಬಂಗಾಳದಲ್ಲಿ 9 ಲಕ್ಷ ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಎರಡೂ ರಾಜ್ಯಗಳಲ್ಲಿ ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದ್ದು, ಕೇಂದ್ರ ಸರ್ಕಾರದೊಂದಿಗೆ ಒರಿಸ್ಸಾ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳು ಮಾತುಕತೆ ನಡೆಸಿ, ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಮನವಿ ಮಾಡಿದ್ದಾರೆ.

ಕರಾವಳಿ ತೀರದ ರಾಜ್ಯಗಳಲ್ಲಿ ಯಾಸ್ ಚಂಡಮಾರುತ (Cyclone Yaas) ಇಂದಿನಿಂದ ಆರ್ಭಟಿಸಲಿದ್ದು, ಮೇ 26ರವರೆಗೆ ಭಾರೀ ಮಳೆಯಾಗಲಿದೆ. ಪಶ್ಚಿಮ ಬಂಗಾಳ, ಒರಿಸ್ಸಾ, ತಮಿಳುನಾಡು, ಗೋವಾ ಸೇರಿದಂತೆ ಕರಾವಳಿ ತೀರದ ರಾಜ್ಯಗಳಲ್ಲಿ ಯಾಸ್ ಚಂಡಮಾರುತದ ಆರ್ಭಟವಿರಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಮೇ 26ರಂದು ಯಾಸ್ ಚಂಡಮಾರುತ ಪಶ್ಚಿಮ ಕರಾವಳಿಯ ರಾಜ್ಯಗಳಿಗೆ ಅಪ್ಪಳಿಸಲಿದೆ. ಹೀಗಾಗಿ, ಕಡಲ ತೀರದ ಪ್ರದೇಶಗಳಲ್ಲಿ ಮೇ 26ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Cyclone Yaas: ಪಶ್ಚಿಮ ಬಂಗಾಳಕ್ಕೆ ಇಂದು ಅಪ್ಪಳಿಸಲಿದೆ ಯಾಸ್ ಚಂಡಮಾರುತ; 950 NDRF​ ಸಿಬ್ಬಂದಿ ಏರ್​ಲಿಫ್ಟ್​

ಪಶ್ಚಿಮ ಬಂಗಾಳ ಮತ್ತು ಒರಿಸ್ಸಾದಲ್ಲಿ ಭಾರೀ ಮಳೆಯಿಂದ ಭೂಕುಸಿತವಾಗುತ್ತಿದ್ದು, 46 ಎನ್​ಡಿಆರ್​ಎಫ್​ ತಂಡಗಳನ್ನು ರಚಿಸಲಾಗಿದೆ. ಬಂಗಾಳದ ತಗ್ಗು ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲಾಗುತ್ತಿದೆ. ತೌಕ್ತೆ ಚಂಡಮಾರುತಕ್ಕಿಂತ ಯಾಸ್ ಚಂಡಮಾರುತದ ಅಬ್ಬರ ಹೆಚ್ಚಾಗಿರಲಿದ್ದು, ಕೇಂದ್ರ ಸರ್ಕಾರ ಸಕಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಆಯಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ಯಾಸ್​ ಚಂಡಮಾರುತದ ಅಬ್ಬರ ತೀವ್ರವಾಗಿರಲಿದೆ ಎಂಬ ಕಾರಣಕ್ಕೆ ಈಗಾಗಲೇ ಎನ್​ಡಿಆರ್​ಎಫ್, ಕೋಸ್ಟಲ್ ಗಾರ್ಡ್, ಐಎನ್​ಎಸ್​ ಚಿಲಿಕಾಗೆ ಒರಿಸ್ಸಾ ಮತ್ತು ಪಶ್ಚಿಮ ಬಂಗಾಳ ಸರ್ಕಾರ ಸನ್ನದ್ಧರಾಗಿರಲು ಸೂಚಿಸಿದೆ. ಮೇ 26ರಂದು ಯಾಸ್ ಚಂಡಮಾರುತ ಅಪ್ಪಳಿಸುವುದರಿಂದ ಈಗಾಗಲೇ ಭಾರೀ ಮಳೆ ಶುರುವಾಗಿದ್ದು, ಪಶ್ಚಿಮ ಬಂಗಾಳ, ಗುಜರಾತ್, ಒರಿಸ್ಸಾ, ಗೋವಾದ ಎಲ್ಲ ಕರಾವಳಿ ತೀರದ ಜಿಲ್ಲೆಗಳಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ ಒರಿಸ್ಸಾದಲ್ಲಿ 28 ಎನ್​ಡಿಆರ್​ಎಫ್ ತಂಡಗಳು ಹಾಗೂ ಪಶ್ಚಿಮ ಬಂಗಾಳದಲ್ಲಿ 32 ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ ಆಂಧ್ರಪ್ರದೇಶ, ತಮಿಳುನಾಡು, ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲೂ ಕೆಲವು ಎನ್​ಡಿಆರ್​ಎಫ್ ತಂಡಗಳನ್ನು ಕಳುಹಿಸಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಚಂಡಮಾರುತವಾಗಿ ಬದಲಾಗಿದ್ದು, ಗುಜರಾತ್, ಮಹಾರಾಷ್ಟ್ರದ, ಪಶ್ಚಿಮ ಬಂಗಾಳ, ಒರಿಸ್ಸಾ ಸೇರಿ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳ ಕೊಲ್ಲಿಯ ಪೂರ್ವ ಕೇಂದ್ರ ಹಾಗೂ ನೆರೆಯ ಉತ್ತರ ಅಂಡಮಾನ್‍ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಕರಾವಳಿ ರಕ್ಷಣಾ ಪಡೆ ಅಧಿಕೃತ ಎಚ್ಚರಿಕೆ ಹೊರಡಿಸಿದೆ. ಇದರ ಪ್ರಭಾವದಿಂದ ಗಾಳಿಯ ವೇಗ ಹೆಚ್ಚಾಗಿ ಮೇ 26ರವರೆಗೆ ಅಂಡಮಾನ್‍ ಸಮುದ್ರದಲ್ಲಿ ಪ್ರತಿಕೂಲ ಹವಾಮಾನ ಉಂಟಾಗಲಿದೆ.

ಜೂನ್ 1ರಂದು ಕೇರಳಕ್ಕೆ ಮುಂಗಾರು (Kerala Monsoon) ಪ್ರವೇಶವಾಗಲಿದೆ. ಅಷ್ಟರೊಳಗೆ ಯಾಸ್ ಎಂಬ ಮತ್ತೊಂದು ಚಂಡಮಾರುತ ಅಪ್ಪಳಿಸಲಿದ್ದು, ಇನ್ನೊಂದು ವಾರ ದಕ್ಷಿಣ ಕನ್ನಡ, ಉಡುಪಿ, ಕಾರವಾರ ಭಾಗಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
Published by:Sushma Chakre
First published: