Cyclone Yaas: ಒರಿಸ್ಸಾಗೆ ಅಪ್ಪಳಿಸಿದ ಯಾಸ್ ಚಂಡಮಾರುತ; ಬಂಗಾಳದಲ್ಲಿ ಭಾರೀ ಮಳೆ; ವಿಮಾನ ಸಂಚಾರ ಸ್ಥಗಿತ

Cyclone Yaas in Odisha: ಒರಿಸ್ಸಾದ ಕರಾವಳಿ ತೀರಕ್ಕೆ ಯಾಸ್ ಚಂಡಮಾರುತ ಅಪ್ಪಳಿಸಿದ್ದು, ಗಂಟೆಗೆ 155 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. ಇಂದು ಮುಂಜಾನೆಯಿಂದಲೇ ಬಂಗಾಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಸುಂಟರಗಾಳಿ ಎದ್ದಿದೆ.

ಒರಿಸ್ಸಾದಲ್ಲಿ ಯಾಸ್ ಚಂಡಮಾರುತದ ಅಟ್ಟಹಾಸ

ಒರಿಸ್ಸಾದಲ್ಲಿ ಯಾಸ್ ಚಂಡಮಾರುತದ ಅಟ್ಟಹಾಸ

  • Share this:
ಕೊಲ್ಕತ್ತಾ (ಮೇ 26): ಪಶ್ಚಿಮ ಬಂಗಾಳ ಮತ್ತು ಒರಿಸ್ಸಾದಲ್ಲಿ ಯಾಸ್ ಚಂಡಮಾರುತದ ಆರ್ಭಟ ಹೆಚ್ಚಾಗಿದೆ. ಇಂದು ಮಧ್ಯಾಹ್ನ ಒರಿಸ್ಸಾದ ಕರಾವಳಿ ತೀರಕ್ಕೆ ಯಾಸ್ ಚಂಡಮಾರುತ ಅಪ್ಪಳಿಸಿದ್ದು, ಗಂಟೆಗೆ 155 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. ಕರಾವಳಿ ತೀರದ ಯಾರೂ ಮನೆಯಿಂದ ಹೊರಗೆ ಬಾರದಂತೆ ಎಚ್ಚರಿಕೆ ನೀಡಲಾಗಿದೆ. ಒರಿಸ್ಸಾದಲ್ಲಿ ಇಂದು ಬೆಳಗ್ಗೆ 9 ಗಂಟೆಯಿಂದಲೇ ಭೂಕುಸಿತ ಆರಂಭವಾಗಿದೆ. ಇಂದು ಮಧ್ಯಾಹ್ನ ಉತ್ತರ ಒರಿಸ್ಸಾವನ್ನು ಹಾದುಹೋಗಿರುವ ಯಾಸ್ ಚಂಡಮಾರುತ ಅಬ್ಬರ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಯಾಸ್ ಚಂಡಮಾರುತದ ಹಿನ್ನೆಲೆ ಮುಂಬೈನಿಂದ ಹೊರಡುವ 6 ವಿಮಾನಗಳ ಸಂಚಾರವನ್ನು ಸ್ಥಗಿತಗೊಳಿಸಿದೆ. ಜಾರ್ಖಂಡ್, ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ಇಂದು ಸಂಜೆಯ ವೇಳೆಗೆ ಪಶ್ಚಿಮ ಬಂಗಾಳದಲ್ಲಿ ಯಾಸ್ ಚಂಡಮಾರುತದ ಅಟ್ಟಹಾಸ ಶುರುವಾಗಲಿದೆ. ಇಂದು ಮುಂಜಾನೆಯಿಂದಲೇ ಬಂಗಾಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಸುಂಟರಗಾಳಿ ಎದ್ದಿದೆ. ಬಂಗಾಳದ ಅನೇಕ ಹಳ್ಳಿಗಳು ಮಳೆಯ ನೀರಿನಿಂದ ಮುಳುಗಡೆಯಾಗಿವೆ. ಆ ಗ್ರಾಮಗಳ ಜನರನ್ನು ಎನ್​ಡಿಆರ್​ಎಫ್ ಸಿಬ್ಬಂದಿ ಬೇರೆಡೆಗೆ ಸ್ಥಳಾಂತರಿಸಿದ್ದಾರೆ.



ಇಂದು ಬಂಗಾಳ ಮತ್ತು ಒರಿಸ್ಸಾದಲ್ಲಿ ಯಾಸ್ ಚಂಡಮಾರುತ (Yaas Cyclone)ದ ಅಬ್ಬರ ಹೆಚ್ಚಾಗಲಿದ್ದು, ಕೆಲವೆಡೆ ಭಾರೀ ಭೂಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಒರಿಸ್ಸಾ ಮತ್ತು ಪಶ್ಚಿಮ ಬಂಗಾಳದಲ್ಲಿನ ತಗ್ಗು ಪ್ರದೇಶಗಳ ಸುಮಾರು 20 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ. ಒರಿಸ್ಸಾ ಒಂದರಲ್ಲೇ 10 ಲಕ್ಷಕ್ಕೂ ಹೆಚ್ಚು ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ.



ಪಶ್ಚಿಮ ಬಂಗಾಳ ಮತ್ತು ಒರಿಸ್ಸಾದ ರಾಜ್ಯಗಳಲ್ಲಿ ನಿನ್ನೆ ಸಂಜೆಯಿಂದ ಭಾರೀ ಮಳೆ ಸುರಿಯುತ್ತಿದ್ದು, ಕರಾವಳಿ ತೀರದ ಮತ್ತು ನದಿ ತೀರದ ಒಟ್ಟು 20 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ. ಒರಿಸ್ಸಾದ 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ. ಈಗಾಗಲೇ 149 ಎನ್​ಡಿಆರ್​ಎಫ್​ ತಂಡಗಳು ಕಾರ್ಯಾಚರಣೆಗೆ ಸಿದ್ಧವಾಗಿವೆ.



ಪಶ್ಚಿಮ ಬಂಗಾಳದ 14 ಜಿಲ್ಲೆಗಳಿಂದ 11 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಒರಿಸ್ಸಾದಲ್ಲಿ 10 ಲಕ್ಷಕ್ಕೂ ಹೆಚ್ಚು ಜನರನ್ನು ಶಿಫ್ಟ್ ಮಾಡಲಾಗಿದೆ. ಈಗಾಗಲೇ NDRF​ ಸಿಬ್ಬಂದಿಯನ್ನು ಪಶ್ಚಿಮ ಬಂಗಾಳ ಮತ್ತು ಒರಿಸ್ಸಾಗೆ Airlift​ ಮಾಡಲಾಗಿದ್ದು, 26 ಹೆಲಿಕಾಪ್ಟರ್​ಗಳನ್ನು ಯಾವುದೇ ಕ್ಷಣದಲ್ಲಿ ಜನರ ರಕ್ಷಣೆಗೆ ಸಿದ್ಧಪಡಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಸುಮಾರು 11 ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಇಂದು ಬೆಳಗ್ಗೆಯಿಂದ ಕೊಲ್ಕತ್ತಾ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಸುರಿಯುತ್ತಿರುವ ಮಳೆಯಿಂದ ನಿನ್ನೆ ಮೂವರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Cyclone Yaas: ಪಶ್ಚಿಮ ಬಂಗಾಳ, ಒರಿಸ್ಸಾದಲ್ಲಿ ಯಾಸ್ ಚಂಡಮಾರುತ; ಭಾರೀ ಮಳೆ ಹಿನ್ನೆಲೆ 20 ಲಕ್ಷ ಜನರ ಸ್ಥಳಾಂತರ

ಇಂದು ಒರಿಸ್ಸಾ ಮತ್ತು ಪಶ್ಚಿಮ ಬಂಗಾಳದಲ್ಲಿ ಅಪ್ಪಳಿಸಲಿರುವ ಯಾಸ್ ಚಂಡಮಾರುತ ಗಂಟೆಗೆ 155 ಕಿ.ಮೀ.ಯಿಂದ 165 ಕಿ.ಮೀ. ವೇಗದಲ್ಲಿ ಚಲಿಸಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಒರಿಸ್ಸಾದಲ್ಲಿ 52 ಎನ್​ಡಿಆರ್​ಎಫ್ ತಂಡಗಳು ಹಾಗೂ ಪಶ್ಚಿಮ ಬಂಗಾಳದಲ್ಲಿ 45 ಎನ್​ಡಿಆರ್​ಎಫ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ.



ಯಾಸ್ ಚಂಡಮಾರುತದಿಂದ ಅಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ ಪಶ್ಚಿಮ ಬಂಗಾಳದಲ್ಲಿ 9 ಲಕ್ಷ ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಎರಡೂ ರಾಜ್ಯಗಳಲ್ಲಿ ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದ್ದು, ಕೇಂದ್ರ ಸರ್ಕಾರದೊಂದಿಗೆ ಒರಿಸ್ಸಾ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳು ಮಾತುಕತೆ ನಡೆಸಿ, ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಮನವಿ ಮಾಡಿದ್ದಾರೆ.

ಕರಾವಳಿ ತೀರದ ರಾಜ್ಯಗಳಲ್ಲಿ ಯಾಸ್ ಚಂಡಮಾರುತ (Cyclone Yaas) ಇಂದಿನಿಂದ ಆರ್ಭಟಿಸಲಿದ್ದು, ಭಾರೀ ಮಳೆಯಾಗಲಿದೆ. ಪಶ್ಚಿಮ ಬಂಗಾಳ, ಒರಿಸ್ಸಾ, ತಮಿಳುನಾಡು, ಗೋವಾ ಸೇರಿದಂತೆ ಕರಾವಳಿ ತೀರದ ರಾಜ್ಯಗಳಲ್ಲಿ ಯಾಸ್ ಚಂಡಮಾರುತದ ಆರ್ಭಟವಿರಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಇಂದು ಯಾಸ್ ಚಂಡಮಾರುತ ಪಶ್ಚಿಮ ಕರಾವಳಿಯ ರಾಜ್ಯಗಳಿಗೆ ಅಪ್ಪಳಿಸಿದೆ. ಹೀಗಾಗಿ, ಕಡಲ ತೀರದ ಪ್ರದೇಶಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Mandya: ಕೋವಿಡ್ ರಿಪೋರ್ಟ್​ ಇಲ್ಲದೆ ಗರ್ಭಿಣಿ ಪರದಾಟ; ಮಂಡ್ಯದ ಆಸ್ಪತ್ರೆ ಎದುರು ನಿಂತಲ್ಲೇ ಹೆರಿಗೆ; ಮಗು ಕೆಳಗೆ ಬಿದ್ದು ಸಾವು!

ಪಶ್ಚಿಮ ಬಂಗಾಳ ಮತ್ತು ಒರಿಸ್ಸಾದಲ್ಲಿ ಭಾರೀ ಮಳೆಯಿಂದ ಭೂಕುಸಿತವಾಗುತ್ತಿದ್ದು, 46 ಎನ್​ಡಿಆರ್​ಎಫ್​ ತಂಡಗಳನ್ನು ರಚಿಸಲಾಗಿದೆ. ಬಂಗಾಳದ ತಗ್ಗು ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲಾಗುತ್ತಿದೆ. ತೌಕ್ತೆ ಚಂಡಮಾರುತಕ್ಕಿಂತ ಯಾಸ್ ಚಂಡಮಾರುತದ ಅಬ್ಬರ ಹೆಚ್ಚಾಗಿರಲಿದ್ದು, ಕೇಂದ್ರ ಸರ್ಕಾರ ಸಕಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಆಯಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.



ಯಾಸ್​ ಚಂಡಮಾರುತದ ಅಬ್ಬರ ತೀವ್ರವಾಗಿರಲಿದೆ ಎಂಬ ಕಾರಣಕ್ಕೆ ಈಗಾಗಲೇ ಎನ್​ಡಿಆರ್​ಎಫ್, ಕೋಸ್ಟಲ್ ಗಾರ್ಡ್, ಐಎನ್​ಎಸ್​ ಚಿಲಿಕಾಗೆ ಒರಿಸ್ಸಾ ಮತ್ತು ಪಶ್ಚಿಮ ಬಂಗಾಳ ಸರ್ಕಾರ ಸನ್ನದ್ಧರಾಗಿರಲು ಸೂಚಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ ಒರಿಸ್ಸಾದಲ್ಲಿ 28 ಎನ್​ಡಿಆರ್​ಎಫ್ ತಂಡಗಳು ಹಾಗೂ ಪಶ್ಚಿಮ ಬಂಗಾಳದಲ್ಲಿ 32 ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ ಆಂಧ್ರಪ್ರದೇಶ, ತಮಿಳುನಾಡು, ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲೂ ಕೆಲವು ಎನ್​ಡಿಆರ್​ಎಫ್ ತಂಡಗಳನ್ನು ಕಳುಹಿಸಲಾಗಿದೆ.
Published by:Sushma Chakre
First published: