Cyclone Yaas: ಪಶ್ಚಿಮ ಬಂಗಾಳಕ್ಕೆ ಇಂದು ಅಪ್ಪಳಿಸಲಿದೆ ಯಾಸ್ ಚಂಡಮಾರುತ; 950 NDRF​ ಸಿಬ್ಬಂದಿ ಏರ್​ಲಿಫ್ಟ್​

Cyclone Yaas in West Bengal: ಇಂದು ಸಂಜೆ ವೇಳೆಗೆ ಪಶ್ಚಿಮ ಬಂಗಾಳದತ್ತ ಸಾಗಲಿರುವ ಯಾಸ್ ಚಂಡಮಾರುತ ಮೇ 26ರ ವೇಳೆಗೆ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಒರಿಸ್ಸಾ ಮತ್ತು ಪಶ್ಚಿಮ ಬಂಗಾಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಕೊಲ್ಕತ್ತಾ (ಮೇ 24): ಕರ್ನಾಟಕ, ಕೇರಳ, ಮಹಾರಾಷ್ಟ್ರ, ಗುಜರಾತ್, ಒರಿಸ್ಸಾ ಸೇರಿದಂತೆ ಕೆಲವು ರಾಜ್ಯಗಳಲ್ಲಿ ತೌಕ್ತೆ (Cyclone Tauktae) ಚಂಡಮಾರುತ ಅಪ್ಪಳಿಸಿ ಅವಾಂತರ ಸೃಷ್ಟಿಸಿತ್ತು. ಇದೀಗ ಇಂದಿನಿಂದ ಯಾಸ್ ಚಂಡಮಾರುತ (Yaas Cyclone) ಅಪ್ಪಳಿಸಲು ಸಜ್ಜಾಗಿದೆ. ಇಂದು ಸಂಜೆ ವೇಳೆಗೆ ಪಶ್ಚಿಮ ಬಂಗಾಳದತ್ತ ಸಾಗಲಿರುವ ಯಾಸ್ ಚಂಡಮಾರುತ ಮೇ 26ರ ವೇಳೆಗೆ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಒರಿಸ್ಸಾ ಮತ್ತು ಪಶ್ಚಿಮ ಬಂಗಾಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಈಗಾಗಲೇ 950 NDRF​ ಸಿಬ್ಬಂದಿಯನ್ನು ಪಶ್ಚಿಮ ಬಂಗಾಳ ಮತ್ತು ಒರಿಸ್ಸಾಗೆ Airlift​ ಮಾಡಲಾಗಿದ್ದು, 26 ಹೆಲಿಕಾಪ್ಟರ್​ಗಳನ್ನು ಯಾವುದೇ ಕ್ಷಣದಲ್ಲಿ ಜನರ ರಕ್ಷಣೆಗೆ ಆಗಮಿಸಲು ಸಿದ್ಧಪಡಿಸಿಡಲಾಗಿದೆ. ಪಶ್ಚಿಮ ಬಂಗಾಳದ ಕರಾವಳಿ ತೀರದಿಂದ 670 ಕಿ.ಮೀ. ದೂರದಲ್ಲಿರುವ Yaas Cyclone ಇಂದು ಸಂಜೆಯ ವೇಳೆಗೆ ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಲಿದೆ ಎನ್ನಲಾಗಿದೆ. ಮೇ 26ರಂದು ಒರಿಸ್ಸಾ ಮತ್ತು ಪಶ್ಚಿಮ ಬಂಗಾಳದಲ್ಲಿ ಅಪ್ಪಳಿಸಲಿರುವ ಈ ಚಂಡಮಾರುತ ಗಂಟೆಗೆ 155 ಕಿ.ಮೀ.ಯಿಂದ 165 ಕಿ.ಮೀ. ವೇಗದಲ್ಲಿ ಚಲಿಸಲಿದೆ.

ಕರಾವಳಿ ತೀರದ ರಾಜ್ಯಗಳಲ್ಲಿ ಯಾಸ್ ಚಂಡಮಾರುತ (Cyclone Yaas) ಇಂದಿನಿಂದ ಆರ್ಭಟಿಸಲಿದ್ದು, ಮೇ 26ರವರೆಗೆ ಭಾರೀ ಮಳೆಯಾಗಲಿದೆ. ಪಶ್ಚಿಮ ಬಂಗಾಳ, ಒರಿಸ್ಸಾ, ತಮಿಳುನಾಡು, ಗೋವಾ ಸೇರಿದಂತೆ ಕರಾವಳಿ ತೀರದ ರಾಜ್ಯಗಳಲ್ಲಿ ಯಾಸ್ ಚಂಡಮಾರುತದ ಆರ್ಭಟವಿರಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಮೇ 26ರಂದು ಯಾಸ್ ಚಂಡಮಾರುತ ಪಶ್ಚಿಮ ಕರಾವಳಿಯ ರಾಜ್ಯಗಳಿಗೆ ಅಪ್ಪಳಿಸಲಿದೆ. ಹೀಗಾಗಿ, ಕಡಲ ತೀರದ ಪ್ರದೇಶಗಳಲ್ಲಿ ಮೇ 26ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.ಪಶ್ಚಿಮ ಬಂಗಾಳ ಮತ್ತು ಒರಿಸ್ಸಾದಲ್ಲಿ ಭಾರೀ ಮಳೆಯಿಂದ ಭೂಕುಸಿತವಾಗುತ್ತಿದ್ದು, 46 ಎನ್​ಡಿಆರ್​ಎಫ್​ ತಂಡಗಳನ್ನು ರಚಿಸಲಾಗಿದೆ. ಬಂಗಾಳದ ತಗ್ಗು ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲಾಗುತ್ತಿದೆ. ತೌಕ್ತೆ ಚಂಡಮಾರುತಕ್ಕಿಂತ ಯಾಸ್ ಚಂಡಮಾರುತದ ಅಬ್ಬರ ಹೆಚ್ಚಾಗಿರಲಿದ್ದು, ಕೇಂದ್ರ ಸರ್ಕಾರ ಸಕಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಆಯಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ಇದನ್ನೂ ಓದಿ: Cyclone Yaas: ತೌಕ್ತೆ ಬೆನ್ನಲ್ಲೇ ಮೇ 23ರಿಂದ ಅಪ್ಪಳಿಸಲಿದೆ ಯಾಸ್ ಚಂಡಮಾರುತ; ನಾಳೆಯಿಂದ ಭಾರೀ ಮಳೆ ಸಾಧ್ಯತೆ

ಯಾಸ್​ ಚಂಡಮಾರುತದ ಅಬ್ಬರ ತೀವ್ರವಾಗಿರಲಿದೆ ಎಂಬ ಕಾರಣಕ್ಕೆ ಈಗಾಗಲೇ ಎನ್​ಡಿಆರ್​ಎಫ್, ಕೋಸ್ಟಲ್ ಗಾರ್ಡ್, ಐಎನ್​ಎಸ್​ ಚಿಲಿಕಾಗೆ ಒರಿಸ್ಸಾ ಮತ್ತು ಪಶ್ಚಿಮ ಬಂಗಾಳ ಸರ್ಕಾರ ಸನ್ನದ್ಧರಾಗಿರಲು ಸೂಚಿಸಿದೆ. ಮೇ 26ರಂದು ಯಾಸ್ ಚಂಡಮಾರುತ ಅಪ್ಪಳಿಸುವುದರಿಂದ ಈಗಾಗಲೇ ಭಾರೀ ಮಳೆ ಶುರುವಾಗಿದ್ದು, ಪಶ್ಚಿಮ ಬಂಗಾಳ, ಗುಜರಾತ್, ಒರಿಸ್ಸಾ, ಗೋವಾದ ಎಲ್ಲ ಕರಾವಳಿ ತೀರದ ಜಿಲ್ಲೆಗಳಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ ಒರಿಸ್ಸಾದಲ್ಲಿ 28 ಎನ್​ಡಿಆರ್​ಎಫ್ ತಂಡಗಳು ಹಾಗೂ ಪಶ್ಚಿಮ ಬಂಗಾಳದಲ್ಲಿ 32 ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ ಆಂಧ್ರಪ್ರದೇಶ, ತಮಿಳುನಾಡು, ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲೂ ಕೆಲವು ಎನ್​ಡಿಆರ್​ಎಫ್ ತಂಡಗಳನ್ನು ಕಳುಹಿಸಲಾಗಿದೆ.ಇದನ್ನೂ ಓದಿ: Barge Tragedy: ಮುಂಬೈ ಬಾರ್ಜ್ ದುರಂತದ ಸಾವಿನ ಸಂಖ್ಯೆ 70ಕ್ಕೆ ಏರಿಕೆ; ಕೊನೆಗೂ ಸಿಗಲಿಲ್ಲ 16 ಜನರ ಸುಳಿವು!

ಜೂನ್ 1ರಂದು ಕೇರಳಕ್ಕೆ ಮುಂಗಾರು (Kerala Monsoon) ಪ್ರವೇಶವಾಗಲಿದೆ. ಅಷ್ಟರೊಳಗೆ ಯಾಸ್ ಎಂಬ ಮತ್ತೊಂದು ಚಂಡಮಾರುತ ಅಪ್ಪಳಿಸಲಿದ್ದು, ಇನ್ನೊಂದು ವಾರ ದಕ್ಷಿಣ ಕನ್ನಡ, ಉಡುಪಿ, ಕಾರವಾರ ಭಾಗಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಚಂಡಮಾರುತವಾಗಿ ಬದಲಾಗಿದ್ದು, ಗುಜರಾತ್, ಮಹಾರಾಷ್ಟ್ರದ, ಪಶ್ಚಿಮ ಬಂಗಾಳ, ಒರಿಸ್ಸಾ ಸೇರಿ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳ ಕೊಲ್ಲಿಯ ಪೂರ್ವ ಕೇಂದ್ರ ಹಾಗೂ ನೆರೆಯ ಉತ್ತರ ಅಂಡಮಾನ್‍ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಕರಾವಳಿ ರಕ್ಷಣಾ ಪಡೆ ಅಧಿಕೃತ ಎಚ್ಚರಿಕೆ ಹೊರಡಿಸಿದೆ. ಇದರ ಪ್ರಭಾವದಿಂದ ಗಾಳಿಯ ವೇಗ ಹೆಚ್ಚಾಗಿ ಮೇ 26ರವರೆಗೆ ಅಂಡಮಾನ್‍ ಸಮುದ್ರದಲ್ಲಿ ಪ್ರತಿಕೂಲ ಹವಾಮಾನ ಉಂಟಾಗಲಿದೆ.
Published by:Sushma Chakre
First published: