ಪಂಜಾಬ್‌ ನಕಲಿ ಮದ್ಯ ದುರಂತ; 62ಕ್ಕೆ ಏರಿದ ಸಾವಿನ ಸಂಖ್ಯೆ, ಪೊಲೀಸ್‌ ದಾಳಿ ವಿಷ ಜಾಲದ 25 ಜನರ ಬಂಧನ

ಕಳೆದ ಬುಧವಾರ ರಾತ್ರಿಯಿಂದ ಪಂಜಾಬ್‌ನ ಕೆಲ ಜಿಲ್ಲೆಗಳಲ್ಲಿ ದಿಢೀರೆಂದು ಸರಣಿ ಸಾವುಗಳು ಸಂಭವಿಸಲು ಆರಂಭವಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದಾಗ ನಕಲಿ ಮದ್ಯ ಸೇವನೆಯೇ ಈ ಎಲ್ಲಾ ಸಾವಿಗೂ ಕಾರಣ ಎಂದು ತಿಳಿದುಬಂದಿದೆ. ಅದರಲ್ಲೂ ಪಂಜಾಬಿನ ತರ್ಣ್ ತರಣ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಬರೋಬ್ಬರಿ 63 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇನ್ನೂ ಅಮೃತಸರದಲ್ಲಿ 12 ಹಾಗೂ ಬಟಾಲಾದಲ್ಲಿ 11 ಜನ ಮೃತಪಟ್ಟಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಅಮರೀಂದರ್​ ಸಿಂಗ್​.

ಪಂಜಾಬ್ ಮುಖ್ಯಮಂತ್ರಿ ಅಮರೀಂದರ್​ ಸಿಂಗ್​.

  • Share this:
ಅಮೃತಸರ (ಆಗಸ್ಟ್‌ 02); ಪಂಜಾಬ್‌ನಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ 86ಕ್ಕೆ ಏರಿಕೆಯಾಗಿದೆ. ಈ ಘಟನೆ ಸಂಬಂಧ ಈಗಾಗಲೇ ನ್ಯಾಯಾಂಗ ತನಿಖೆಗೆ ಆದೇಶ ನೀಡಿರುವ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್‌ ಸಿಂಗ್ ಮೃತರ ಕುಟುಂಬಗಳಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಅಬಕಾರಿ ಇಲಾಖೆ ಅಧಿಕಾರಿಗಳು ಹಾಗೂ ಆರು ಪೊಲೀಸರನ್ನು ಅಮಾನತುಗೊಳಿಸಿದ್ದಾರೆ.

ಕಳೆದ ಬುಧವಾರ ರಾತ್ರಿಯಿಂದ ಪಂಜಾಬ್‌ನ ಕೆಲ ಜಿಲ್ಲೆಗಳಲ್ಲಿ ದಿಢೀರೆಂದು ಸರಣಿ ಸಾವುಗಳು ಸಂಭವಿಸಲು ಆರಂಭವಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದಾಗ ನಕಲಿ ಮದ್ಯ ಸೇವನೆಯೇ ಈ ಎಲ್ಲಾ ಸಾವಿಗೂ ಕಾರಣ ಎಂದು ತಿಳಿದುಬಂದಿದೆ. ಅದರಲ್ಲೂ ಪಂಜಾಬಿನ ತರ್ಣ್ ತರಣ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಬರೋಬ್ಬರಿ 63 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇನ್ನೂ ಅಮೃತಸರದಲ್ಲಿ 12 ಹಾಗೂ ಬಟಾಲಾದಲ್ಲಿ 11 ಜನ ಮೃತಪಟ್ಟಿದ್ದಾರೆ.

ಘಟನೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ಶಾಮೀಲಾದವರ ಬಂಧನಕ್ಕೆ ಮುಂದಾಗಿದೆ. ಅಲ್ಲದೆ, ಸಂಬಂಧಪಟ್ಟ ಅಧಿಕಾರಿಗಳನ್ನೂ ಅಮಾನತುಗೊಳಿಸಿದೆ.

ಈ ಸಂಬಂಧ ಅಧಿಕೃತ ಹೇಳಿಕೆ ಹೊರಡಿಸಿರುವ ಪಂಜಾಬ್ ಸರ್ಕಾರ, “ನಕಲಿ ಮದ್ಯ ಸೇವಿಸಿ ಜನ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನ ಅಬಕಾರಿ ಇಲಾಖೆ ಹಾಗೂ ಆರು ಜನ ಪೊಲೀಸ್‌ ಇಲಾಖೆ ಅಧಿಕಾರಿಗಳನ್ನು ಈಗಾಗಲೇ ಅಮಾನತು ಮಾಡಲಾಗಿದೆ. ಅಮಾನತುಗೊಂಡ ಅಧಿಕಾರಿಗಳ ಪೈಕಿ ಇಬ್ಬರು ಉಪ ಪೊಲೀಸ್‌ ವರಿಷ್ಠಾಧಿಕಾರಿಗಳು ಮತ್ತು ನಾಲ್ವರು ಸ್ಟೇಷನ್‌ ಹೌಸ್‌ ಅಧಿಕಾರಿಗಳು ಸೇರಿದ್ದಾರೆ.

ಇದನ್ನೂ ಓದಿ : Amar Singh passes away: ರಾಜ್ಯಸಭಾ ಸದಸ್ಯ, ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್ ಸಿಂಗ್ ನಿಧನ

ಪೋಲಿಸ್ ಮತ್ತು ಅಬಕಾರಿ ಇಲಾಖೆಯು ನಕಲಿ ಮದ್ಯ ತಯಾರಿಕೆ ಮತ್ತು ಮಾರಾಟವನ್ನು ಪರಿಶೀಲಿಸುವಲ್ಲಿ ವಿಫಲವಾಗಿದೆ. ಹೀಗಾಗಿ ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಸರ್ಕಾರಿ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ನಮ್ಮ ಜನರಿಗೆ ವಿಷ ನೀಡಿದ ಯಾರನ್ನೂ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸರ್ಕಾರ ಅವಕಾಶ ನೀಡುವುದಿಲ್ಲ” ಎಂದು ಎಚ್ಚರಿಸಿದೆ.

ನಕಲಿ ಮದ್ಯ ಮಾರಾಟ ಮಾಡಲಾದ ಅಮೃತಸರ, ಗುರುದಾಸಪುರ ಹಾಗೂ ತರ್ಣ್ ತರಣ್ ಜಿಲ್ಲೆಗಳಲ್ಲಿ ನಿನ್ನೆಯಿಂದ ನೂರಕ್ಕೂ ಹೆಚ್ಚು ದಾಳಿ ನಡೆಸಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 25 ಜನರನ್ನು ಬಂಧಿಸಿದೆ. ಬಂಧಿತರಲ್ಲಿ ಮಾಫಿಯಾ ಮಾಸ್ಟರ್ ಮೈಂಡ್, ಮಹಿಳಾ ಕಿಂಗ್‌ಪಿನ್‌ಗಳು ಸಾರಿಗೆ ಮಾಲೀಕರು, ವಾಂಟೆಡ್ ಕ್ರಿಮಿನಲ್‌ಗಳು ಮತ್ತು ವಿವಿಧ ಢಾಬಾಗಳ ಮಾಲೀಕರು ಮತ್ತು ವ್ಯವಸ್ಥಾಪಕರು ಇದ್ದಾರೆ. ಇವರೆಲ್ಲರೂ ಅಕ್ರಮವಾಗಿ ನಕಲಿ ಮದ್ಯ ಮಾರಾಟ ಜಾಲದಲ್ಲಿ ಕಾರ್ಯನಿರ್ವಹಿಸಿದ್ದಕ್ಕೆ ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ಡಿಜಿಪಿ ದಿನಕರ್ ಗುಪ್ತಾ ತಿಳಿಸಿದ್ದಾರೆ.
Published by:MAshok Kumar
First published: