ನವದೆಹಲಿ(ನ. 26): ಸಾಮಾನ್ಯವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ವಾಯು ಮಾಲಿನ್ಯ ಬಹಳ ಜಾಸ್ತಿಯಾಗುತ್ತದೆ. ಹಾಗೆ ಕ್ರಮೇಣವಾಗಿ ಕಡಿಮೆಯಾಗುತ್ತದೆ. ಆದರೆ ಈ ಬಾರಿ ದೀಪಾವಳಿ ಕಳೆದ 10 ದಿನವಾದರೂ ವಾಯು ಮಾಲಿನ್ಯ ನಿಯಂತ್ರಣವಾಗಿಲ್ಲ. ಬದಲಿಗೆ ಈಗ ಗಾಳಿಯ ಗುಣಮಟ್ಟ ಉಸಿರಾಟಮಾಡಲು ಆಗದಂತಹ ಸ್ಥಿತಿ ಮುಟ್ಟಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ ಮಾಹಿತಿ ಪ್ರಕಾರ ಸರಾಸರಿ 24 ಗಂಟೆಗಳ ವಾಯು ಗುಣಮಟ್ಟದ ಸೂಚ್ಯಂಕ ಗುರುವಾರ ಬೆಳಿಗ್ಗೆ ದೆಹಲಿಯ ವಿವಿಧ ಪ್ರದೇಶಗಳಲ್ಲಿ ಈ ರೀತಿ ಇದೆ.
ದೆಹಲಿ ವಿಶ್ವವಿದ್ಯಾಲಯ ಪ್ರದೇಶದಲ್ಲಿ 446. ನೋಯ್ಡಾ ಸುತ್ತಾ ಮುತ್ತಾ 487. ಪೂಸಾ ಪ್ರದೇಶದ ವ್ಯಾಪ್ತಿಯಲ್ಲಿ 365. ದೆಹಲಿ ಐಐಟಿ ಪ್ರದೇಶಗಳಲ್ಲಿ 366. ಗಾಳಿಯ ಗುಣಮಟ್ಟವು 301-400 ಅಂಕದ ನಡುವೆ ಇದ್ದರೆ ಅದನ್ನು 'ಅತ್ಯಂತ ಕಳಪೆ' ಎಂದು ವ್ಯಾಖ್ಯಾನಿಸಲಾಗುತ್ತದೆ. ಜೊತೆಗೆ ಅದನ್ನು 'ಉಸಿರಾಡಲು ಅನರ್ಹ' ಎಂದೂ ಹೇಳಲಾಗುತ್ತದೆ. ಹಾಗಾಗಿಯೇ ಇಂದು ದೆಹಲಿಯಲ್ಲಿ ಸರಾಸರಿ ಏರ್ ಕ್ವಾಲಿಟಿ ಇಂಡೆಕ್ಸ್ 365 ಆಗಿರುವುದರಿಂದ ಜನ ಆತಂಕಕ್ಕೀಡಾಗಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಆಟೋ ಮತ್ತು ಕ್ಯಾಬ್ ಚಾಲಕರ ಪ್ರತಿಭಟನೆ
ದೀಪಾವಳಿ ಸಂದರ್ಭದಲ್ಲಿ ದೆಹಲಿಯ ಸುತ್ತ ಇರುವ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಬೆಳೆ ತ್ಯಾಜ್ಯ ಸುಡಲಾಗುತ್ತದೆ. ಅದರ ಹೊಗೆ ದೆಹಲಿಯತ್ತ ಬರಲಿದೆ. ಇದಲ್ಲದೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಿಪರೀತ ಪಟಾಕಿ ಸಿಡಿಸಲಾಗುತ್ತದೆ. ಜೊತೆಗೆ ಈ ಸಂದರ್ಭದಲ್ಲಿ ಗಾಳಿಯ ವೇಗ ಕೂಡ ಕಡಿಮೆ ಆಗಲಿದೆ. ಈ ಎಲ್ಲಾ ಕಾರಣಗಳಿಂದ ದೆಹಲಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ವಾಯುಮಾಲಿನ್ಯ ಹೆಚ್ಚಾಗುವುದು ಸಾಮಾನ್ಯ.
ಆದರೆ ಈ ಬಾರಿ ದೆಹಲಿಯಲ್ಲಿ ಬೆಳೆ ತ್ಯಾಜ್ಯ ಸುಡುವುದನ್ನು ನಿಲ್ಲಿಸಲಾಗಿದೆ. ಅದಕ್ಕೆ ಬದಲಾಗಿ ತಾಜ್ಯದ ಮೇಲೆ ಕೆಮಿಕಲ್ ಸಿಂಪಡಿಸಲಾಗಿದೆ. ಇದಲ್ಲದೆ ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಇಷ್ಟೆಲ್ಲವನ್ನೂ ಮಾಡಿದ್ದರೂ ಮತ್ತು ದೀಪಾವಳಿ ಆಗಿ ವಾರ ಕಳೆದಿದ್ದರೂ ವಾಯುಮಾಲಿನ್ಯ ನಿಯಂತ್ರಣ ಆಗಿಲ್ಲದಿರುವುದರಿಂದ ಆತಂಕವನ್ನು ಸೃಷ್ಟಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ