Delhi Air Pollution: ಚಳಿ ಜೊತೆಗೆ ಹದಗೆಡುತ್ತಲೇ ಇದೆ ರಾಷ್ಟ್ರ ರಾಜಧಾನಿ ದೆಹಲಿಯ ಗಾಳಿ

ದೆಹಲಿ ವಾಯುಮಾಲಿನ್ಯ (ಸಾಂದರ್ಭಿಕ ಚಿತ್ರ)

ದೆಹಲಿ ವಾಯುಮಾಲಿನ್ಯ (ಸಾಂದರ್ಭಿಕ ಚಿತ್ರ)

ದೆಹಲಿ ವಿಶ್ವವಿದ್ಯಾಲಯ ಪ್ರದೇಶದಲ್ಲಿ 397. ನೋಯ್ಡಾ ಸುತ್ತಾ ಮುತ್ತಾ 432. ಪೂಸಾ ಪ್ರದೇಶದ ವ್ಯಾಪ್ತಿಯಲ್ಲಿ 353. ದೆಹಲಿ ಐಐಟಿ ಪ್ರದೇಶಗಳಲ್ಲಿ 369. ಗಾಳಿಯ ಗುಣಮಟ್ಟವು 301-400 ಅಂಕದ ನಡುವೆ ಇದ್ದರೆ ಅದನ್ನು 'ಅತ್ಯಂತ ಕಳಪೆ' ಎಂದು ವ್ಯಾಖ್ಯಾನಿಸಲಾಗುತ್ತದೆ.

  • Share this:

ನವದೆಹಲಿ (ಡಿ. 6):  ಸಾಮಾನ್ಯವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ವಾಯು ಮಾಲಿನ್ಯ ಬಹಳ ಜಾಸ್ತಿಯಾಗುತ್ತದೆ. ಹಾಗೆ ಕ್ರಮೇಣವಾಗಿ ಕಡಿಮೆಯಾಗುತ್ತದೆ. ಆದರೆ ಈ ಬಾರಿ ದೀಪಾವಳಿ ಕಳೆದ 20 ದಿನವಾದರೂ ವಾಯು ಮಾಲಿನ್ಯ ನಿಯಂತ್ರಣಕ್ಕೆ ಬರುತ್ತಿಲ್ಲ. ಈಗ ಒಂದೆಡೆ ಚಳಿ ಹೆಚ್ಚಾಗುತ್ತಿದೆ ಇನ್ನೊಂದೆಡೆ ದೆಹಲಿ ವಾಯು ಮಾಲಿನ್ಯವೂ ಹೆಚ್ಚಾಗುತ್ತಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ ಮಾಹಿತಿ ಪ್ರಕಾರ ಸರಾಸರಿ 24 ಗಂಟೆಗಳ ವಾಯು ಗುಣಮಟ್ಟದ ಸೂಚ್ಯಂಕ ಭಾನುವಾರ ಬೆಳಿಗ್ಗೆ  ದೆಹಲಿಯ ವಿವಿಧ ಪ್ರದೇಶಗಳಲ್ಲಿ ಈ ರೀತಿ ಇದೆ.


ದೆಹಲಿ ವಿಶ್ವವಿದ್ಯಾಲಯ ಪ್ರದೇಶದಲ್ಲಿ 397. ನೋಯ್ಡಾ ಸುತ್ತಾ ಮುತ್ತಾ 432. ಪೂಸಾ ಪ್ರದೇಶದ ವ್ಯಾಪ್ತಿಯಲ್ಲಿ 353. ದೆಹಲಿ ಐಐಟಿ ಪ್ರದೇಶಗಳಲ್ಲಿ 369. ಗಾಳಿಯ ಗುಣಮಟ್ಟವು 301-400 ಅಂಕದ ನಡುವೆ ಇದ್ದರೆ ಅದನ್ನು 'ಅತ್ಯಂತ ಕಳಪೆ' ಎಂದು ವ್ಯಾಖ್ಯಾನಿಸಲಾಗುತ್ತದೆ. ಜೊತೆಗೆ ಅದನ್ನು 'ಉಸಿರಾಡಲು ಅನರ್ಹ' ಎಂದೂ ಹೇಳಲಾಗುತ್ತದೆ. ಹಾಗಾಗಿಯೇ ಭಾನುವಾರ ದೆಹಲಿಯಲ್ಲಿ ಸರಾಸರಿ ಏರ್ ಕ್ವಾಲಿಟಿ ಇಂಡೆಕ್ಸ್ 375 ಆಗಿರುವುದರಿಂದ ಜನ ಆತಂಕಕ್ಕೀಡಾಗಿದ್ದಾರೆ.


Cyclone Burevi: ಬುರೇವಿ ಚಂಡಮಾರುತದಿಂದ ತಮಿಳುನಾಡಿನಲ್ಲಿ 7 ಜನ ಸಾವು; ಕೇರಳದಲ್ಲಿಂದು ಆರೆಂಜ್ ಅಲರ್ಟ್​


ದೀಪಾವಳಿ ಸಂದರ್ಭದಲ್ಲಿ ದೆಹಲಿಯ ಸುತ್ತ ಇರುವ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಬೆಳೆ ತ್ಯಾಜ್ಯ ಸುಡಲಾಗುತ್ತದೆ. ಅದರ ಹೊಗೆ ದೆಹಲಿಯತ್ತ ಬರಲಿದೆ.‌ ಇದಲ್ಲದೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಿಪರೀತ ಪಟಾಕಿ ಸಿಡಿಸಲಾಗುತ್ತದೆ. ಜೊತೆಗೆ ಈ ಸಂದರ್ಭದಲ್ಲಿ ಗಾಳಿಯ ವೇಗ ಕೂಡ ಕಡಿಮೆ ಆಗಲಿದೆ. ಈ ಎಲ್ಲಾ ಕಾರಣಗಳಿಂದ ದೆಹಲಿಯಲ್ಲಿ ದೀಪಾವಳಿ ಸಂದರ್ಭದಲ್ಲಿ ವಾಯುಮಾಲಿನ್ಯ ಹೆಚ್ಚಾಗುವುದು ಸಾಮಾನ್ಯ.


ಆದರೆ ಈ ಬಾರಿ ದೆಹಲಿಯಲ್ಲಿ ಬೆಳೆ ತ್ಯಾಜ್ಯ ಸುಡುವುದನ್ನು ನಿಲ್ಲಿಸಲಾಗಿದೆ. ಅದಕ್ಕೆ ಬದಲಾಗಿ ತಾಜ್ಯದ ಮೇಲೆ ಕೆಮಿಕಲ್ ಸಿಂಪಡಿಸಲಾಗಿದೆ. ಇದಲ್ಲದೆ ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಇಷ್ಟೆಲ್ಲವನ್ನೂ ಮಾಡಿದ್ದರೂ ಮತ್ತು ದೀಪಾವಳಿ ಆಗಿ ವಾರ ಕಳೆದಿದ್ದರೂ ವಾಯುಮಾಲಿನ್ಯ ನಿಯಂತ್ರಣ ಆಗಿಲ್ಲದಿರುವುದರಿಂದ ಆತಂಕವನ್ನು ಸೃಷ್ಟಿಸಿದೆ.


ಕೇಂದ್ರ ಸರ್ಕಾರದ ಹೊಸ ಕಾನೂನಿನ ಪ್ರಕಾರ ಗಾಳಿಯನ್ನು ಮಲಿನಗೊಳಿಸುವ ಯಾವುದೇ ಚಟುವಟಿಕೆಗಳನ್ನು ಅಪರಾಧ ಎಂದು ಪರಿಗಣಿಸಲಾಗುತ್ತದೆ. ಈ ಕಾನೂನನ್ನು ಉಲ್ಲಂಘಿಸಿದವರಿಗೆ ದಂಡ ಹಾಗೂ ಶಿಕ್ಷೆಯನ್ನು ವಿಧಿಸಲಾಗುತ್ತದೆ. ಆದರೆ ಇವೆಲ್ಲವೂ ಕಾಗದದ ಮೇಲಿವೆಯೇ ಹೊರತು ವಾಸ್ತವವಾಗಿ ಅನುಷ್ಠಾನಕ್ಕೆ ಬಂದಿಲ್ಲ ಎಂಬುದು ದೆಹಲಿಯ ವಾಯು ಮಾಲಿನ್ಯದಿಂದ ಸ್ಪಷ್ಟವಾಗುತ್ತದೆ.

Published by:Latha CG
First published: