ದೆಹಲಿ (ಫೆಬ್ರವರಿ 11); ಇಡೀ ದೇಶದ ಗಮನ ಸೆಳೆದಿದ್ದ ದೆಹಲಿ ವಿಧಾನಸಭಾ ಚುನಾವಣೆ ಮತ ಎಣಿಕೆ ಶುರುವಾಗಿದೆ. ಮತಗಟ್ಟೆ ಸಮೀಕ್ಷೆಗಳು ನೀಡಿದ ಫಲಿತಾಂಶದಂತೆ ಆಮ್ ಆದ್ಮಿ ಪಕ್ಷ ಎಲ್ಲೆಡೆ ಮುನ್ನಡೆ ಸಾಧಿಸಿದ್ದು, ಅರವಿಂದ ಕೇಜ್ರಿವಾಲ್ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ.
ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಕಳೆದ ಫೆಬ್ರವರಿ 08 ರಂದು ಚುನಾವಣೆ ನಡೆದಿತ್ತು. ಚುನಾವಣೆ ಬೆನ್ನಿಗೆ ಸಮೀಕ್ಷೆ ಹೊರಹಾಕಿದ್ದ ಖಾಸಗಿ ಸಂಸ್ಥೆಗಳು ಈ ಬಾರಿಯೂ ಆಮ್ ಆದ್ಮಿಗೆ ಬಹುಮತ ದೊರೆಯಲಿದೆ ಎಂದು ಭವಿಷ್ಯ ನುಡಿದಿದ್ದವು. ಅದರಂತೆ ಇಂದು ಮತ ಎಣಿಕೆ ಆರಂಭವಾಗಿದ್ದು, ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸುಮಾರು 43 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಈ ಮುನ್ನಡೆ ಫಲಿತಾಂಶವಾಗಿ ಬದಲಾದೆ ಆಮ್ ಆದ್ಮಿ ಮತ್ತೊಮ್ಮೆ ರಾಷ್ಟ್ರ ರಾಜಧಾನಿಯ ಗದ್ದುಗೆ ಏರುವುದು ಬಹುತೇಕ ಖಚಿತವಾಗಲಿದೆ. ದೆಹಲಿಯಲ್ಲಿ ಬಡ ಜನರಿಗೆ ನೀರು, ವಿದ್ಯುತ್, ಶಿಕ್ಷಣ ಸೇರಿದಂತೆ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಕಡೆಗೆ ಹೆಚ್ಚಿನ ಗಮನ ನೀಡಿದ್ದು ಆಮ್ ಆದ್ಮಿ ಗೆಲುವಿಗೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.
ಇದನ್ನೂ ಓದಿ : Delhi Assembly Election Results 2020 LIVE: ದೆಹಲಿ ಫಲಿತಾಂಶ; ಆಪ್ಗೆ ಭಾರೀ ಮುನ್ನಡೆ; ಖಾತೆ ತೆರೆಯದ ಕಾಂಗ್ರೆಸ್
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ