ದೆಹಲಿ ವಿಧಾನಸಭೆ ಚುನಾವಣೆ; 57 ಕ್ಷೇತ್ರಗಳಿಗೆ ಅಭ್ಯರ್ಥಿ ಹೆಸರು ಪ್ರಕಟಿಸಿದ ಬಿಜೆಪಿ

ಕಳೆದ ವಿಧಾನಸಭೆ ಚುನಾವಣೆಯಲ್ಲಿ 70 ಕ್ಷೇತ್ರಗಳಲ್ಲಿ ಬಿಜೆಪಿ ಕೇವಲ ಮೂರು ಸ್ಥಾನಗಳಲ್ಲಷ್ಟೇ ಗೆಲುವು ಸಾಧಿಸಿತ್ತು. ಎಎಪಿ ಬರೋಬ್ಬರು 67 ಕ್ಷೇತ್ರಗಳಲ್ಲಿ ಗೆಲುವು ನಗೆ ಬೀರಿತ್ತು.

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮತ್ತು ದೆಹಲಿ ಬಿಜೆಪಿ ಮುಖ್ರ್ಯಸ್ಥ ಮನೋಜ್ ತಿವಾರಿ.

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮತ್ತು ದೆಹಲಿ ಬಿಜೆಪಿ ಮುಖ್ರ್ಯಸ್ಥ ಮನೋಜ್ ತಿವಾರಿ.

  • Share this:
ನವದೆಹಲಿ:  70 ಸದಸ್ಯ ಬಲದ ದೆಹಲಿ ವಿಧಾನಸಭೆ ಚುನಾವಣೆಗೆ ಬಿಜೆಪಿ 57 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಫೆಬ್ರವರಿ 8ರಂದು ಚುನಾವಣೆ ನಡೆಯಲಿದ್ದು, ಫೆ.11ರಂದು ಫಲಿತಾಂಶ ಪ್ರಕಟವಾಗಲಿದೆ.

ಆಡಳಿತಾರೂಢ ಆಮ್​ ಆದ್ಮಿ ಪಕ್ಷ ಮೂರು ದಿನಗಳ ಹಿಂದೆಯೇ 70 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.

ಎಎಪಿ ಶಾಸಕ ಕಪಿಲ್ ಮಿಶ್ರಾ ಮತ್ತು 11 ಎಸ್​ಸಿ ಹಾಗೂ ನಾಲ್ವರು ಮಹಿಳಾ ಅಭ್ಯರ್ಥಿಗಳ ಸೇರಿದಂತೆ 56 ಅಭ್ಯರ್ಥಿಗಳ ಪಟ್ಟಿಯನ್ನು ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಬಿಡುಗಡೆ ಮಾಡಿದರು. ಈ ವೇಳೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್​ ಕೂಡ ಉಪಸ್ಥಿತರಿದ್ದರು.

ಎಎಪಿ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಎದುರು ಯಾವುದೇ ಅಭ್ಯರ್ಥಿಯ ಹೆಸರನ್ನು ಬಿಜೆಪಿ ಮೊದಲ ಪಟ್ಟಿಯಲ್ಲಿ ಘೋಷಿಸಿಲ್ಲ. ಶೀಘ್ರದಲ್ಲಿಯೇ ನ್ಯೂಡೆಲ್ಲಿ ಕ್ಷೇತ್ರದ ಅಭ್ಯರ್ಥಿ ಹೆಸರನ್ನು ಪ್ರಕಟಿಸುವುದಾಗಿ ತಿವಾರಿ ತಿಳಿಸಿದರು.

ಗುಪ್ತಾ ಅವರು ಮತ್ತೆ ರೊಹಿನಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಮಿಶ್ರಾ ಅವರು ಮಾಡೆಲ್ ಟೌನ್​ನಿಂದ ಸ್ಪರ್ಧೆ ಮಾಡಲಿದ್ದಾರೆ. ಕೇಂದ್ರ ಚುನಾವಣಾ ಸಮಿತಿ ಗುರುವಾರ ರಾತ್ರಿ ಸಭೆ ಸೇರಿ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಅಂತಿಮಗೊಳಿಸಿದೆ.

2015ರ ದೆಹಲಿ ವಿಧಾನಸಭೆ ಚುನಾವಣೆಯಂತೆ ಈ ಬಾರಿಯೂ ಬಿಜೆಪಿಯ ಮೊದಲ ಹಂತದ ಪಟ್ಟಿಯಲ್ಲಿ ಯಾವುದೇ ಮುಸ್ಲಿಂ ಅಭ್ಯರ್ಥಿಗಳಿಲ್ಲ. ಎಎಪಿ ನಾಲ್ವರು ಮುಸ್ಲಿಮರನ್ನು ಅಭ್ಯರ್ಥಿಗಳನ್ನಾಗಿ ಕಣಕ್ಕೆ ಇಳಿಸಿದೆ.

ಇದನ್ನು ಓದಿ: ಪೂರ್ಣಪ್ರಮಾಣದ ಕೇಂದ್ರಾಡಳಿತವೂ ಅಲ್ಲದ, ಸ್ವಾಯತ್ತ ರಾಜ್ಯವೂ ಅಲ್ಲದ ದೆಹಲಿ ಗದ್ದುಗೆಗೆ ನಡೆದಿದೆ ಭಾರೀ ಗುದ್ದಾಟ

ಕಳೆದ ವಿಧಾನಸಭೆ ಚುನಾವಣೆಯಲ್ಲಿ 70 ಕ್ಷೇತ್ರಗಳಲ್ಲಿ ಬಿಜೆಪಿ ಕೇವಲ ಮೂರು ಸ್ಥಾನಗಳಲ್ಲಷ್ಟೇ ಗೆಲುವು ಸಾಧಿಸಿತ್ತು. ಎಎಪಿ ಬರೋಬ್ಬರು 67 ಕ್ಷೇತ್ರಗಳಲ್ಲಿ ಗೆಲುವು ನಗೆ ಬೀರಿತ್ತು.
First published: