HOME » NEWS » National-international » DELHI BOMB BLAST EXPLOSIVE PETN FOUND NEAR DELHI ISRAEL EMBASSY PROOF HINTS AT AL QAEDA ISIS SSCT

Delhi Bomb Blast: ಇಸ್ರೇಲ್ ರಾಯಭಾರಿ ಕಚೇರಿ ಬಳಿ ಸ್ಫೋಟಕ ಪತ್ತೆ; ದೆಹಲಿ ಸ್ಫೋಟದ ಹಿಂದೆ ಉಗ್ರರ ಕೈವಾಡದ ಶಂಕೆ

Delhi Bomb Blast: ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ PETN ಎಂಬ ಹೈಗ್ರೇಡ್ ಮಿಲಿಟರಿ ಸ್ಫೋಟಕ ಪತ್ತೆಯಾಗಿದೆ. ಈ ಸ್ಫೋಟದ ಹಿಂದೆ ಐಸಿಸ್, ಅಲ್​ಖೈದಾ ಉಗ್ರ ಸಂಘಟನೆಗಳ ಕೈವಾಡ ಇರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

Sushma Chakre | news18-kannada
Updated:January 30, 2021, 2:17 PM IST
Delhi Bomb Blast: ಇಸ್ರೇಲ್ ರಾಯಭಾರಿ ಕಚೇರಿ ಬಳಿ ಸ್ಫೋಟಕ ಪತ್ತೆ; ದೆಹಲಿ ಸ್ಫೋಟದ ಹಿಂದೆ ಉಗ್ರರ ಕೈವಾಡದ ಶಂಕೆ
ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಪೊಲೀಸರಿಂದ ಪರಿಶೀಲನೆ
  • Share this:
ನವದೆಹಲಿ (ಜ. 30): ಭಾರತದ ರಾಜಧಾನಿ ನವದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ನಿನ್ನೆ ಸಂಜೆ ಬಾಂಬ್ ಸ್ಫೋಟ ಸಂಭವಿಸಿದೆ. ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದ್ದರಿಂದ ಈ ಘಟನೆಯಲ್ಲಿ ಇದುವರೆಗೂ ಯಾರಿಗೂ ಗಾಯಗಳಾಗಿಲ್ಲ. ಈ ಘಟನೆಯ ಕುರಿತು ವಿಶೇಷ ಪೊಲೀಸ್ ತಂಡದಿಂದ ತನಿಖೆ ನಡೆಸಲಾಗುತ್ತಿದ್ದು, ಇಸ್ರೇಲ್ ರಾಯಭಾರಿ ಕಚೇರಿಯ ಬಳಿ PETN ಎಂಬ ಹೈಗ್ರೇಡ್ ಮಿಲಿಟರಿ ಸ್ಫೋಟಕ ಪತ್ತೆಯಾಗಿದೆ. ಉಗ್ರ ಸಂಘಟನೆಗಳಾದ ಐಸಿಸ್, ಅಲ್​ಖೈದಾ ಸಂಘಟನೆಗಳಲ್ಲಿ ಈ ರೀತಿಯ ಹೈಗ್ರೇಡ್ ಸ್ಫೋಟಕಗಳು ಸಿಗುತ್ತವೆ ಎಂದು ಅಧಿಕಾರಿಗಳು ಹೇಳಿದ್ದು, ನಿನ್ನೆ ನಡೆದ ಬಾಂಬ್ ಸ್ಫೋಟದ ಹಿಂದೆ ಉಗ್ರ ಸಂಘಟನೆಗಳ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ, ಇದಕ್ಕೆ ಯಾವುದೇ ಸಾಕ್ಷಿಗಳು ಇನ್ನೂ ಸಿಕ್ಕಿಲ್ಲ.

ಈಗಾಗಲೇ ಇಸ್ರೇಲ್ ರಾಯಭಾರಿ ಕಚೇರಿ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗಿದ್ದು, ನಿನ್ನೆ ಸಂಜೆ ಇಬ್ಬರು ಕ್ಯಾಬ್​ನಿಂದ ಇಳಿದು, ಬಾಂಬ್ ಸ್ಫೋಟವಾದ ಸ್ಥಳದಲ್ಲಿ ಅನುಮಾನಾಸ್ಪದವಾಗಿ ಓಡಾಡಿರುವ ದೃಶ್ಯ ಸೆರೆಯಾಗಿದೆ. ಆ ಇಬ್ಬರನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.

ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಕಡಿಮೆ ತೀವ್ರತೆಯ ಬಾಂಬ್ ಸ್ಫೋಟಿಸಿದ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲ ವಿಮಾನ ನಿಲ್ದಾಣಗಳು, ಪ್ರಮುಖ ಕಟ್ಟಡಗಳು, ಸರ್ಕಾರಿ ಕಚೇರಿಗಳಲ್ಲಿ ಹೆಚ್ಚಿನ ಭದ್ರತೆ ವಹಿಸಲಾಗಿದೆ ಎಂದು ಸಿಐಎಸ್​ಎಫ್​ (ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್​) ತಿಳಿಸಿದೆ. ಹಾಗೇ, ಹರಿದ್ವಾರದಲ್ಲಿ ಕುಂಭಮೇಳ ನಡೆಯಲಿರುವ ಹಿನ್ನೆಲೆಯಲ್ಲಿ ಅಲ್ಲಿಯೂ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇದು ಉಗ್ರರ ಸಂಚಿರಬಹುದು ಎಂದು ಇಸ್ರೇಲ್ ಕೂಡ ಅನುಮಾನ ವ್ಯಕ್ತಪಡಿಸಿದೆ.
ಇಸ್ರೇಲ್ ರಾಯಭಾರ ಕಚೇರಿಯಿಂದ ಕೇವಲ 2 ಕಿ.ಮೀ ದೂರದಲ್ಲಿ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೀಟಿಂಗ್ ರಿಟ್ರೀಟ್ ಕಾರ್ಯಕ್ರಮ ನಡೆಯುತ್ತಿತ್ತು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಗವಹಿಸಿದ್ದರು. ವಿವಿಐಪಿಗಳಿದ್ದ ಪ್ರದೇಶದಲ್ಲಿ ಹೈ ಸೆಕ್ಯುರಿಟಿ ನಡುವೆಯೂ ಸ್ಫೋಟ ಸಂಭವಿಸಿರುವುದರಿಂದ ಹೈ ಅಲರ್ಟ್​ ಘೋಷಿಸಲಾಗಿದೆ.

ಇದನ್ನೂ ಓದಿ: Rahul Gandhi: ತಮಿಳಿನ ವಿಲೇಜ್ ಕುಕಿಂಗ್ ಶೋನಲ್ಲಿ ಅಡುಗೆ ಮಾಡಿ, ಬಿರಿಯಾನಿ ಸವಿದ ರಾಹುಲ್ ಗಾಂಧಿ!

ಇಸ್ರೇಲ್ ರಾಯಭಾರಿ ಕಚೇರಿಯ ಎಲ್ಲ ಸಿಬ್ಬಂದಿ ಮತ್ತು ಅಧಿಕಾರಿಗಳು ಸುರಕ್ಷಿತರಾಗಿದ್ದಾರೆ ಎಂದು ಇಸ್ರೇಲ್ ವಿದೇಶಾಂಗ ಇಲಾಖೆ ತಿಳಿಸಿದೆ. ಹಾಗೇ, ಇಸ್ರೇಲ್ ರಾಜತಾಂತ್ರಿಕ ಕಚೇರಿಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ಭಾರತ ಸರ್ಕಾರಕ್ಕೆ ಇಸ್ರೇಲ್ ಮನವಿ ಮಾಡಿದೆ. ಈ ಸ್ಫೋಟದಿಂದ ಮೂರು ಕಾರುಗಳ ಗಾಜುಗಳು ಚೂರಾಗಿದ್ದು, ಯಾರಿಗೂ ಗಾಯಗಳಾಗಿಲ್ಲ.

ದೆಹಲಿಯಲ್ಲಿ ನಡೆದ ಸ್ಫೋಟದ ಹಿನ್ನೆಲೆಯಲ್ಲಿ ಉತ್ತರ ಭಾರತದ ಪ್ರಸಿದ್ಧ ಆಚರಣೆ ಮಹಾಕುಂಭ ಮೇಳಕ್ಕೆ ಭದ್ರತೆಯನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ. ಹರಿದ್ವಾರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಅಯೋಧ್ಯೆ ಸೇರಿದಂತೆ ಉತ್ತರ ಪ್ರದೇಶದ ಹಲವೆಡೆ ಬಿಗಿ ಭದ್ರತೆ ನೀಡಲು ನಿರ್ಧರಿಸಲಾಗಿದೆ. ನವದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಸ್ಫೋಟ ಸಂಭವಿಸುತ್ತಿದ್ದಂತೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ದೇಶದ ಪ್ರಮುಖ ನಗರಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಿಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
Youtube Video

ನವದೆಹಲಿಯಲ್ಲಿ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಡಾ. ಎಪಿಜೆ ಅಬ್ದುಲ್ ಕಲಾಂ ರಸ್ತೆಯ ಜಿಂದಾಲ್ ಹೌಸ್ ಬಳಿ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದೆ. ಈ ವಿಷಯ ತಿಳಿಯುತ್ತಿದ್ದಂತೆ ದೆಹಲಿ ವಿಶೇಷ ತನಿಖಾ ತಂಡದ ಪೊಲೀಸರು ರಾಷ್ಟ್ರೀಯ ತನಿಖಾ ತಂಡದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
Published by: Sushma Chakre
First published: January 30, 2021, 2:17 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories