ನವದೆಹಲಿ (ಡಿ.17): ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನಿನ ಪ್ರತಿಗಳನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹರಿದು ಹಾಕಿದ್ದಾರೆ. ದೇಶದ ರಾಜಧಾನಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಚರ್ಚಿಸಲು ಕರೆಯಲಾಗಿದ್ದ ದೆಹಲಿ ವಿಶೇಷ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಅವರು, ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಕೃಷಿ ಕಾನೂನನ್ನು ಜಾರಿಗೆ ತರುವ ಅವಸರ ಏನಿತ್ತು ಎಂದು ಇದೇ ವೇಳೆ ಕೇಂದ್ರವನ್ನು ಪ್ರಶ್ನಿಸಿದ್ದಾರೆ. ಅಲ್ಲದೇ ಬ್ರಿಟಿಷರಿಗಿಂತ ಕೆಟ್ಟವರಾಗಬೇಡಿ ಎಂದು ಕೇಂದ್ರವನ್ನು ಎಚ್ಚರಿಸಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ಪ್ರತಿಯೊಬ್ಬ ರೈತ ಭಗತ್ಸಿಂಗ್ ಆಗಿದ್ದಾನೆ. ಕೇಂದ್ರ ನಾವು ರೈತರ ಪರವಾಗಿದ್ದೇವೆ. ಅವರಿಗೆ ಮಸೂದೆಯ ಲಾಭವನ್ನು ತಿಳಿಸಲು ಪ್ರಯತ್ನಿಸುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ರೈತರಿಂದ ನಿಮ್ಮ ಭೂಮಿಯನ್ನು ಕಸಿದುಕೊಳ್ಳುವುದಿಲ್ಲ. ಇದೇ ನಿಮಗೆ ಲಾಭಾ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಹೇಳುತ್ತಾರೆ. ಇದೇನಾ ಪ್ರಯೋಜನಾ ಎಂದರೆ ಎಂದು ಇದೇ ವೇಳೆ ಪ್ರಶ್ನಿಸಿದರು.
Delhi Assembly today rejected all 3 Farm laws & have appealed Central govt that it should take back these black laws. More than 20 farmers have died during 20 days of protest. On average, one farmer is getting martyred daily in this movement: Delhi Chief Minister Arvind Kejriwal pic.twitter.com/Mstgr79OXr
— ANI (@ANI) December 17, 2020
What was the hurry to get Farm Laws passed in Parliament during pandemic? It has happened for 1st time that 3 laws were passed without voting in Rajya Sabha...I hereby tear 3 Farm laws in this assembly & appeal Centre not to become worst than Britishers: Delhi CM Arvind Kejriwal https://t.co/zvc2Dx1w3E pic.twitter.com/rUOACIQwp3
— ANI (@ANI) December 17, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ