BJP ಗೆದ್ದರೆ ರಾಜಕೀಯವನ್ನೇ ತೊರೆಯುವೆ.. ದೆಹಲಿ ಸಿಎಂ ಕೇಜ್ರಿವಾಲ್ ಸವಾಲನ್ನು ಸ್ವೀಕರಿಸುತ್ತಾ ಕೇಸರಿ ಪಕ್ಷ?

ಆಮ್ ಆದ್ಮಿ ಪಕ್ಷ (AAP) ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯನ್ನು ಕೆಳಗಿಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಂತರ ಕೇಜ್ರಿವಾಲ್ ಅವರು ತಮ್ಮ ಆಮ್ ಆದ್ಮಿ ಪಕ್ಷವು ಸ್ಥಳೀಯ ಚುನಾವಣೆಯಲ್ಲಿ ಸೋತರೆ ರಾಜಕೀಯ ತ್ಯಜಿಸುವುದಾಗಿ ಘೋಷಿಸಿದರು.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​

  • Share this:
ದೆಹಲಿ: ಪಂಜಾಬ್ ವಿಧಾನಸಭಾ (Punjab Assembly) ಚುನಾವಣೆಯ ಗೆಲುವಿನ ಹುಮ್ಮಸ್ಸಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Delhi Chief Minister Arvind Kejriwal) ಬುಧವಾರ ಭಾರತೀಯ ಜನತಾ ಪಕ್ಷಕ್ಕೆ (BJP) ಹೊಸ ಸವಾಲನ್ನು ಹಾಕಿದ್ದಾರೆ. ದೆಹಲಿ ಮಹಾನಗರ ಪಾಲಿಕೆ (MCD) ಚುನಾವಣೆ ಮುಂದೂಡಿರುವ ಸಂಬಂಧ ಬಿಜೆಪಿ ವಿರುದ್ಧ ಕೇಜ್ರಿವಾಲ್​​ ಕೆಂಡಾಮಂಡಲರಾಗಿದ್ದಾರೆ. ವಿಧಾನಸಭೆಯ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, ಸಮಯಕ್ಕೆ ಸರಿಯಾಗಿ ಚುನಾವಣೆ ನಡೆದರೆ ಆಮ್ ಆದ್ಮಿ ಪಕ್ಷ (AAP) ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯನ್ನು ಕೆಳಗಿಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಂತರ ಕೇಜ್ರಿವಾಲ್ ಅವರು ತಮ್ಮ ಆಮ್ ಆದ್ಮಿ ಪಕ್ಷವು ಸ್ಥಳೀಯ ಚುನಾವಣೆಯಲ್ಲಿ ಸೋತರೆ ರಾಜಕೀಯ ತ್ಯಜಿಸುವುದಾಗಿ ಘೋಷಿಸಿದರು. ಆಪ್​​ ಗೆದ್ದೇ ಗೆಲ್ಲುತ್ತೆ, ಬಿಜೆಪಿಗೆ ಸೋಲು ಖಚಿತ. ನನ್ನ ಲೆಕ್ಕಾಚಾರ ತಪ್ಪಾದರೆ ರಾಜಕೀಯದಿಂದ ನಿವೃತ್ತಿ ಹೊಂದುವೆ ಎಂದು ಕೇಜ್ರಿವಾಲ್​ ಸವಾಲು ಹಾಕಿದರು.

ಇದನ್ನೂ ಓದಿ: ಮುಸ್ಲಿಮರನ್ನು ಜನ ಮತ್ತಷ್ಟು ದ್ವೇಷಿಸಲು Kashmir Files ಟ್ಯಾಕ್ಸ್ ಫ್ರೀ ಮಾಡಲಾಗಿದೆ ಎಂದ ಮಾಜಿ ಸಿಎಂ

ಸಣ್ಣ ಚುನಾವಣೆಗೆ ಬಿಜೆಪಿ ಹೆದರುತ್ತಿದೆ..

ಎಂಸಿಡಿ ಚುನಾವಣೆಯನ್ನು ಈಗಲೇ ನಡೆಸಿ, ಅದರಲ್ಲಿ ಬಿಜೆಪಿ ಗೆದ್ದರೆ ನಾನು ರಾಜಕೀಯವನ್ನು ತೊರೆಯುತ್ತೇನೆ ಎಂದು ಎಎಪಿ ನಾಯಕ ಹೇಳಿದರು. ಬಿಜೆಪಿ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವೆಂದು ಕೊಚ್ಚಿಕೊಳ್ಳುತ್ತೆ, ಆದರೆ ಸಣ್ಣ ಪಕ್ಷ ಹಾಗೂ ಸಣ್ಣ ಚುನಾವಣೆಗೆ ಬಿಜೆಪಿ ಹೆದರಿದೆ. ಹಾಗಾಗಿ ಚುನಾವಣೆಯನ್ನು ಮುಂದೂಡಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಹುತಾತ್ಮರಿಗೆ ಮಾಡಿದ ಅವಮಾನ..

ನಂತರ ಟ್ವಿಟ್ಟರ್​ನಲ್ಲಿ ಬಿಜೆಪಿಯನ್ನು ಟಾರ್ಗೆಟ್​ ಮಾಡಿದ ಕೇಜ್ರಿವಾಲ್​,  ಚುನಾವಣೆಯನ್ನು ಮುಂದೂಡುವುದು ಹುತಾತ್ಮರಿಗೆ ಮಾಡಿದ ಅವಮಾನ ಎಂದು ಆಪಾದಿಸಿದರು.  ದೆಹಲಿ ಮಹಾನಗರ ಪಾಲಿಕೆ ಚುನಾವಣೆಯನ್ನು ಬಿಜೆಪಿ ಮುಂದೂಡಿರುವುದು ಬ್ರಿಟಿಷರನ್ನು ದೇಶದಿಂದ ಓಡಿಸಿ ದೇಶದಲ್ಲಿ ಪ್ರಜಾಪ್ರಭುತ್ವ ಸ್ಥಾಪಿಸಲು ತ್ಯಾಗ ಬಲಿದಾನ ಮಾಡಿದ ಹುತಾತ್ಮರಿಗೆ ಮಾಡಿದ ಅವಮಾನ. ಇಂದು ಸೋಲಿನ ಭಯದಿಂದ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯನ್ನು ಮುಂದೂಡುತ್ತಿದ್ದಾರೆ.‘ ರಾಜ್ಯಗಳು ಮತ್ತು ದೇಶದ ಚುನಾವಣೆಗಳನ್ನು ಮುಂದೂಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಸಿಎಂ ಟ್ವೀಟ್ ಮಾಡಿದ್ದಾರೆ.





ಏನಿದು ದೆಹಲಿ ಪಾಲಿಕೆ ಫೈಟ್​​..?

ಪಂಜಾಬ್ ಅಸೆಂಬ್ಲಿ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನ ಉತ್ಸಾಹದಲ್ಲಿ ಆಪ್​​​ ದೆಹಲಿಯ ಪಾಲಿಕೆ ಚುನಾವಣೆಯಲ್ಲೂ ಇದೇ ರೀತಿಯ ಗೆಲುವು ಸಾಧಿಸುವ ಭರವಸೆಯಲ್ಲಿದೆ. 2015 ರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಕ್ಕೆ ಬಂದ ಎಎಪಿ, ಮೂರು ಮುನ್ಸಿಪಲ್ ಕಾರ್ಪೊರೇಷನ್‌ಗಳಿಗೆ (ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್, ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಪೂರ್ವ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್) ಚುನಾವಣೆಯನ್ನು ದೆಹಲಿ ರಾಜ್ಯ ಚುನಾವಣಾ ಆಯೋಗ ಮುಂದೂಡಿದ ನಂತರ ಬಿಜೆಪಿ ವಿರುದ್ಧ ಧ್ವನಿ ಎತ್ತಿದೆ.

ಇದನ್ನೂ ಓದಿ: "ಹೌದು, ನಾವು ನೆಹರೂ ಕುಟುಂಬದ ಗುಲಾಮರು" ಅಂತ ಹೆಮ್ಮೆಯಿಂದ ಘೋಷಿಸಿಕೊಂಡ Congress ನಾಯಕ!

ಉತ್ತರ ಮತ್ತು ದಕ್ಷಿಣ ದೆಹಲಿ ಮಹಾನಗರ ಪಾಲಿಕೆಗಳಲ್ಲಿ ತಲಾ 104 ವಾರ್ಡ್‌ಗಳಿವೆ. ಪೂರ್ವ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ 64 ವಾರ್ಡ್‌ಗಳನ್ನು ಹೊಂದಿದೆ. ಈ ಮೂರು ಪ್ರಸ್ತುತ ಬಿಜೆಪಿಯ ಆಡಳಿತದಲ್ಲಿದೆ.  ದೆಹಲಿಯ ಮೂರು ಮುನ್ಸಿಪಲ್ ಕಾರ್ಪೊರೇಷನ್‌ಗಳನ್ನು ವಿಲೀನಗೊಳಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಒಪ್ಪಿಗೆ ನೀಡಿದೆ. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ತಿದ್ದುಪಡಿ) ಮಸೂದೆಯನ್ನು ಸಂಸತ್ತಿನ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ. ಈ ಬೆಳವಣಿಗೆಯು ದೇಶದ ರಾಜಧಾನಿಯಲ್ಲಿ ಉನ್ನತ ಮಟ್ಟದ ನಾಗರಿಕ ಚುನಾವಣೆಗೆ ಮುನ್ನ ಬಿಜೆಪಿ ಮತ್ತು ಎಎಪಿ ನಡುವೆ ನಡೆಯುತ್ತಿರುವ ರಾಜಕೀಯ ಜಟಾಪಟಿಯನ್ನು ಹೆಚ್ಚಿಸುವ ಸಾಧ್ಯತೆಯಿದೆ.
Published by:Kavya V
First published: