ಜಯಪ್ರದಾ ವಿರುದ್ಧ ದೆಹಲಿ ಕೋರ್ಟ್​ನಿಂದ ಜಾಮೀನು ರಹಿತ ವಾರೆಂಟ್

2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ 57 ವರ್ಷದ ಬಿಜೆಪಿ ನಾಯಕಿ ಜಯಪ್ರದಾ ಮೇಲೆ ಪ್ರಕರಣ ದಾಖಲಾಗಿತ್ತು.

ಜಯ ಪ್ರದಾ

ಜಯ ಪ್ರದಾ

 • News18
 • Last Updated :
 • Share this:
  ರಾಮ್​ಪುರ್, ಉತ್ತರ ಪ್ರದೇಶ:  ಕಳೆದ ವರ್ಷದ ಲೋಕಸಭಾ ಚುನಾವಣೆಯ ಸಮಯದಲ್ಲಿ ನೀತಿ ಸಂಹಿತ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ, ಉತ್ತರ ಪ್ರದೇಶ ಕೋರ್ಟ್ ಜಯಪ್ರದಾ ಅವರಿಗೆ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.

  ಕಳೆದ 2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿರುವ ಕಾರಣ 57 ವರ್ಷದ ಬಿಜೆಪಿ ನಾಯಕಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯದಲ್ಲಿ ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 20ಕ್ಕೆ ಹಾಕಲಾಗಿದೆ.

  ಇದನ್ನೂ ಓದಿ: ಕಾನೂನುಬದ್ಧ ಪ್ರತಿಭಟನಾಕಾರರಿಗೆ ಬೆಂಬಲ ನೀಡುವ ಎನ್​ಜಿಒಗಳಿಗೆ ವಿದೇಶೀ ದೇಣಿಗೆ ನಿರಾಕರಿಸುವಂತಿಲ್ಲ: ಸುಪ್ರೀಂ ಕೊರ್ಟ್

  ಲೋಕಸಭಾ ಚುನಾವಣೆಯಲ್ಲಿ ರಾಮ್​ಪುರ್ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಆಜಾಂ ಖಾನ್ ವಿರುದ್ಧ 1 ಲಕ್ಷ ಮತಗಳ ಅಂತರದಲ್ಲಿ ಜಯಪ್ರದಾ ಸೋಲು ಅನುಭವಿಸಿದ್ದರು.

  - ಸಂಧ್ಯಾ ಎಂ.

  ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್ಸ್​ಕ್ರೈಬ್ ಮಾಡಿ.

  First published: