ದೆಹಲಿ: ಅನೇಕ ದಿನಗಳಿಂದ ಬಿಹಾರದಲ್ಲಿ ನಡೆಯುತ್ತಿರುವ ಕುಟುಂಬ ಕಾಳಗಕ್ಕೆ ಕೋರ್ಟ್ ತಾತ್ಕಾಲಿಕ ತಿಲಾಂಜಲಿ ಇಟ್ಟಿದೆ. ಆದರೆ ಎಷ್ಟು ದಿನ. ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರ ಎಲ್ಜೆಪಿ ಪಕ್ಷದಲ್ಲಿನ ನಾಯಕತ್ವದ ಕಿತ್ತಾಟ ಸದ್ಯಕ್ಕೆ ಕೊನೆಯಾಗುವಂತೆ ಕಾಣುತ್ತಿಲ್ಲ. ಕೇಂದ್ರ ಸಚಿವ ಪಶುಪತಿ ಪಾರಸ್ ಮತ್ತು ರಾಮ್ ವಿಲಾಸ್ ಪಾಸ್ವಾನ್ ಪುತ್ರ ಚಿರಾಗ್ ಪಾಸ್ವಾನ್ ನಡುವಿನ ಕಚ್ಚಾಟ ಈಗ ನ್ಯಾಯಾಲಯದ ಅಂಗಳಕ್ಕೆ ಕಾಲಿಟ್ಟಿದೆ.
ದೆಹಲಿ ಹೈಕೋರ್ಟ್ನಲ್ಲಿ ಚಿರಾಗ್ ಪಾಸ್ವಾನ್ ಅವರಿಗೆ ಹಿನ್ನಡೆಯಾಗಿದ್ದು ಪಶುಪತಿ ಪಾರಸ್ ಅವರನ್ನು ಎಲ್ಜೆಪಿ ನಾಯಕ ಎಂಬ ಸ್ಪೀಕರ್ ತೀರ್ಮಾನವನ್ನು ಕೋರ್ಟ್ ಎತ್ತಿಹಿಡಿದಿದೆ.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಪಶುಪತಿ ಪಾರಸ್ ಅವರನ್ನು ಎಲ್ಜೆಪಿ ನಾಯಕ ಎಂದು ಮಾನ್ಯ ಮಾಡಿದ್ದನ್ನು ಪ್ರಶ್ನಿಸಿ ರಾಮ್ ಚಿರಾಗ್ ಪಾಸ್ವಾನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಚಿರಾಗ್ ಪಾಸ್ವಾನ್ ಅವರ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಸ್ಪೀಕರ್ ಓಂ ಬಿರ್ಲಾ ತೀರ್ಮಾನಕ್ಕೆ ತಡೆ ನೀಡಲು ನಿರಾಕರಿಸಿದೆ. ಆ ಮೂಲಕ ಎಲ್ಜೆಪಿ ಮುಖ್ಯಸ್ಥ ಪಟ್ಟಕ್ಕೆ ಏರುವ ಚಿರಾಗ್ ಪಾಸ್ವಾನ್ ಕನಸು ಭಗ್ನಗೊಂಡಿದೆ.
ಪಶುಪತಿ ಪಾರಸ್ ಅವರು ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಮಂತ್ರಿಯಾಗಿ ನೇಮಕಗೊಂಡಿದ್ದಾರೆ. ಹೈಕೋರ್ಟ್ ಆದೇಶ ಮತ್ತು ಕೇಂದ್ರ ಮಂತ್ರಿ ಮಂಡಲದ ಪುನರ್ರಚನೆಯ ನಂತರ ಚಿರಾಗ್ ಪಾಸ್ವಾನ್ ಅವರಿಗೆ ತೀವ್ರ ಹಿನ್ನಡೆಯಾಗಿದ್ದು ಸಚಿವ ಪಶುಪತಿ ಪಾರಸ್ ಕೈ ಮೇಲಾಗಿದೆ.
ಇತ್ತೀಚೆಗಷ್ಟೆ ಪಶುಪತಿ ಪಾರಸ್ ಇತರ ನಾಲ್ಕು ಎಂಪಿಗಳೊಂದಿಗೆ ಚಿರಾಗ್ ಪಾಸ್ವಾನ್ ವಿರುದ್ಧ ಬಂಡಾಯವೆದ್ದಿದರು ಮತ್ತು ಅವರನ್ನು ಪಕ್ಷದಿಂದ ಉಚ್ಛಾಟನೆಗೊಳಿಸಿದ್ದರು.
ಸ್ಪೀಕರ್ ಓಂ ಬಿರ್ಲಾ ಪಶುಪತಿ ಪಾರಸ್ ಅವರನ್ನು ಲೋಕಸಭೆಯಲ್ಲಿ ಪಕ್ಷದ ನಾಯಕ ಎಂದು ಗುರಿತಿಸಿರುವುದನ್ನು ಪ್ರಶ್ನಿಸಿ ಎಲ್ಜೆಪಿ ಇಂದು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ. ಪಾರಸ್ ಅವರನ್ನು ಕೇಂದ್ರ ಮಂತ್ರಿಮಂಡಳಕ್ಕೆ ಸೇರಿಸಿಕೊಂಡಿದ್ದನ್ನು ಪಕ್ಷ ಖಂಡಿಸುತ್ತದೆ ಎಂದು ಚಿರಾಗ್ ಪಾಸ್ವಾನ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಕಳೆದ ಜೂನ್ ತಿಂಗಳಲ್ಲಿ ಬಿಜೆಪಿ ವಿರುದ್ದ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದ ಚಿರಾಗ್ ’’ನನ್ನ ತಂದೆ ರಾಮ್ ವಿಲಾಸ್ ಪಾಸ್ವಾನ್ ಮತ್ತು ನಾನು ಯಾವಾಗಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಬಂಡೆಯಂತೆ ನಿಂತು ಬೆಂಬಲ ನೀಡಿದ್ದೇವೆ. ಆದರೆ, ಈ ಕಷ್ಟದ ಸಮಯದಲ್ಲಿ ಬಿಜೆಪಿಯ ಹಸ್ತಕ್ಷೇಪವನ್ನು ಬಯಸಿದಾಗ ಅದು ಸಿಗಲಿಲ್ಲ’’ ಎಂದಿದ್ದರು.
ಇದನ್ನೂ ಓದಿ: BJP: ಬೆಂಗಳೂರಿಗೆ ಸದಾನಂದ ಗೌಡ ಆಗಮನ; ಜಮಾಯಿಸಿದ ಸಾವಿರಾರು ಕಾರ್ಯಕರ್ತರು
ಇಂತಹ ಸಮಯದಲ್ಲಿ ಪ್ರಧಾನಿ ಮೋದಿಯವರು ಸರಿಯಾದ ನಿರ್ಧಾರ ತೆಗೆದುಕೊಳ್ಳದಿದ್ದರೆ ಮುಂದಿನ ಭವಿಷ್ಯ ಬೇರೆ ತರ ಇರಲಿದೆ ಎಂದು ಚಿರಾಗ್ ಪರೋಕ್ಷವಾಗಿ ಬಿಜೆಪಿಗೆ ಎಚ್ಚರಿಕೆ ನೀಡಿದ್ದರು. ಬಿಜೆಪಿ ಮಧ್ಯ ಪ್ರವೇಶಿಸಿ ನಮ್ಮ ಸಮಸ್ಯೆ ಬಗೆಹರಿಸುತ್ತದೆ ಎಂದು ನಾನು ಅಂದು ಕೊಂಡಿದ್ದೆ ಆದರೆ ಈ ಕೆಲಸವನ್ನು ಬಿಜೆಪಿ ಮಾಡುತ್ತಿಲ್ಲ ಎಂದಿದ್ದರು.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಮನೆಯಿಂದ ಅನಗತ್ಯವಾಗಿ ಹೊರಗೆ ಹೋಗುವುದನ್ನು ಕಡಿಮೆ ಮಾಡಿ. ಗುಂಪುಗೂಡುವುದನ್ನು ಆದಷ್ಟು ಕಡಿಮೆ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ