ಜೆಸ್ಸಿಕಾ ಲಾಲ್ ಹತ್ಯೆ ಪ್ರಕರಣ; ಜೀವಾವಧಿ ಶಿಕ್ಷೆಗೊಳಗಾಗಿರುವ ಮನು ಶರ್ಮಾ ಬಿಡುಗಡೆಗೆ ದೆಹಲಿ ಸರ್ಕಾರ ಒಪ್ಪಿಗೆ
ಕಾಂಗ್ರೆಸ್ ಮಾಜಿ ನಾಯಕ ವಿನೋದ್ ಶರ್ಮ ಅವರ ಮಗ ಮನು ಶರ್ಮಾ 1999ರಲ್ಲಿ ಮಾಡೆಲ್ ಜೆಸ್ಸಿಕಾ ಲಾಲ್ ಅವರನ್ನು ಕೊಲೆ ಮಾಡಿದ್ದ. ರೆಸ್ಟೋರೆಂಟ್ನಲ್ಲಿ ಮದ್ಯ ಪೂರೈಸಲು ಆಕೆ ನಿರಾಕರಿಸಿದಳು ಎಂಬ ಕಾರಣಕ್ಕೆ ಗುಂಡಿಕ್ಕಿ ಹತ್ಯೆ ಮಾಡಿದ್ದ.
ನವದೆಹಲಿ (ಜೂ. 2): ಖ್ಯಾತ ಮಾಡೆಲ್ ಜೆಸ್ಸಿಕಾ ಲಾಲ್ ಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ಹತ್ಯೆಯ ಆರೋಪಿ ಮನು ಶರ್ಮನನ್ನು ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅನುಮತಿ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ಮಾಜಿ ನಾಯಕ ವಿನೋದ್ ಶರ್ಮ ಅವರ ಮಗ ಮನು ಶರ್ಮಾ 1999ರಲ್ಲಿ ಮಾಡೆಲ್ ಜೆಸ್ಸಿಕಾ ಲಾಲ್ ಅವರನ್ನು ಕೊಲೆ ಮಾಡಿದ್ದ. ರೆಸ್ಟೋರೆಂಟ್ನಲ್ಲಿ ಮದ್ಯ ಪೂರೈಸಲು ಆಕೆ ನಿರಾಕರಿಸಿದಳು ಎಂಬ ಕಾರಣಕ್ಕೆ ಗುಂಡಿಕ್ಕಿ ಹತ್ಯೆ ಮಾಡಿದ್ದ. ಈ ಪ್ರಕರಣದಲ್ಲಿ ಮನು ಶರ್ಮಾಗೆ 2006ರಲ್ಲಿ ದೆಹಲಿ ಹೈಕೋರ್ಟ್ನಿಂದ ಜೀವಾವಧಿ ಶಿಕ್ಷೆಯೂ ಆಗಿತ್ತು. ಆತನನ್ನು ಬಿಡುಗಡೆ ಮಾಡಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿದೆ.
ದೆಹಲಿ ಸರ್ಕಾರದ ಅಧೀನದಲ್ಲಿರುವ ದೆಹಲಿ ಸೆಂಟೆನ್ಸ್ ರಿವ್ಯೂ ಬೋರ್ಡ್ (ಎಸ್ಆರ್ಬಿ) ಮನು ಶರ್ಮನನ್ನು ಬಿಡುಗಡೆ ಮಾಡುವಂತೆ ಕಳೆದ ತಿಂಗಳು ಶಿಫಾರಸು ಮಾಡಿತ್ತು. ಆ ಶಿಫಾರಸಿನಂತೆ ಶಿಕ್ಷೆಯ ಅವಧಿ ಮುಗಿಯುವ ಮೊದಲೇ ಮನು ಶರ್ಮನನ್ನು ಬಿಡುಗಡೆ ಮಾಡಲು ಒಪ್ಪಿಗೆ ನೀಡಲಾಗಿದೆ.
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ