ದೆಹಲಿಯ ಬಹು ಮಹಡಿ ಕಟ್ಟದಲ್ಲಿ ಭೀಕರ ಅಗ್ನಿ ದುರಂತ; 20 ಸಾವು, 40 ಕ್ಕೂ ಹೆಚ್ಚು ಜನರಿಗೆ ಗಾಯ

ಬೆಂಕಿ ಅವಘಡ ನಡೆದ ಕಟ್ಟಡವನ್ನು ಸಾಮಾನ್ಯವಾಗಿ ಕಂಪನಿಗಳಿಗೆ ಕಚೇರಿ ಸ್ಥಳಾವಕಾಶಕ್ಕಾಗಿ ಬಳಸಲಾಗುತ್ತಿತ್ತು. ಈಕುರಿತು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ ಎಂದು ಉಪ ಪೊಲೀಸ್ ಆಯುಕ್ತ ಸಮೀರ್ ಶರ್ಮಾ ತಿಳಿಸಿದ್ದಾರೆ.

ಅಗ್ನಿ ದುರಂತದ ದೃಶ್ಯ

ಅಗ್ನಿ ದುರಂತದ ದೃಶ್ಯ

 • Share this:
  ದೆಹಲಿ: ಪಶ್ಚಿಮ ದೆಹಲಿಯ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಲ್ಲಿ (Delhi Massive Fire) ಹಲವಾರು ಜನರು ಸಾವನ್ನಪ್ಪಿದ್ದಾರೆ. ಇದುವರೆಗೆ 20 ಮೃತದೇಹಗಳು (Delhi Fire Death) ಪತ್ತೆಯಾಗಿವೆ. 40ಕ್ಕೂ ಹೆಚ್ಚು ಮಂದಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೂ ಇನ್ನೂ ಒಂದು ಮಹಡಿಯಲ್ಲಿ ಹುಡುಕಾಟ ನಡೆಸಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಣಿಜ್ಯ ಕಟ್ಟಡವು ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ (Metro Station)  ಬಳಿ ಇದೆ. ಕಟ್ಟಡದಿಂದ ಸುಮಾರು 60-70 ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

  ಅಗ್ನಿಶಾಮಕ ಇಲಾಖೆ ಅಧಿಕಾರಿಗಳ ಪ್ರಕಾರ, 20 ಅಗ್ನಿಶಾಮಕ ಟೆಂಡರ್‌ಗಳು ಘಟನಾ ಸ್ಥಳಕ್ಕೆ ಧಾವಿಸಿದ ನಂತರ ಸಂಜೆ 4.40 ಕ್ಕೆ ಬೆಂಕಿಯ ಬಗ್ಗೆ ಮಾಹಿತಿ ಲಭಿಸಿತು ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

  ಕಂಪನಿಗಳ ಕಚೇರಿಗಳಿಗೆ ಬಳಕೆ ಆಗುತ್ತಿತ್ತು
  ಬೆಂಕಿ ಅವಘಡ ನಡೆದ ಕಟ್ಟಡವನ್ನು ಸಾಮಾನ್ಯವಾಗಿ ಕಂಪನಿಗಳಿಗೆ ಕಚೇರಿ ಸ್ಥಳಾವಕಾಶಕ್ಕಾಗಿ ಬಳಸಲಾಗುತ್ತಿತ್ತು ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ ಎಂದು ಉಪ ಪೊಲೀಸ್ ಆಯುಕ್ತ ಸಮೀರ್ ಶರ್ಮಾ ತಿಳಿಸಿದ್ದಾರೆ.

  ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಕಚೇರಿಯಿಂದ ಟ್ವೀಟ್ ಮೂಲಕ ಸಂತಾಪ
  "ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಿಂದ ದುಃಖಿತವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ" ಎಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಕಚೇರಿ ಟ್ವೀಟ್ ಮಾಡಿದೆ.

  ಪ್ರಧಾನಿ ಮೋದಿ ಸಂತಾಪ
  "ದೆಹಲಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಿಂದ ಸಂಭವಿಸಿದ ಪ್ರಾಣಹಾನಿಯಿಂದ ಅತೀವ ದುಃಖವಾಗಿದೆ. ನನ್ನ ಆಲೋಚನೆಗಳು ದುಃಖತಪ್ತ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿ ಸಂತಾ ಸೂಚಿಸಿದ್ದಾರೆ.

  ಇದನ್ನೂ ಓದಿ: Jammu Bus Accident: ಮಾತಾ ವೈಷ್ಣೋದೇವಿ ಯಾತ್ರಿಕರಿದ್ದ ಬಸ್​ ಬೆಂಕಿಗೆ ಆಹುತಿ; ನಾಲ್ವರು ಸಜೀವ ದಹನ

  ಮೆಟ್ರೋ ನಿಲ್ದಾಣದ ಪಿಲ್ಲರ್ 544 ರ ಬಳಿ ಬೆಂಕಿ ಕಾಣಿಸಿಕೊಂಡಿತು ಎಂದು ಡಿಎಫ್‌ಎಸ್ ಮುಖ್ಯಸ್ಥ ಅತುಲ್ ಗಾರ್ಗ್ ಹೇಳಿದ್ದಾರೆ. ಆರಂಭದಲ್ಲಿ 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ನಂತರ ಇನ್ನೂ 14 ಜನರನ್ನು ಬೆಂಕಿಯನ್ನು ಹತೋಟಿಗೆ ತರಲು ಕಳುಹಿಸಲಾಗಿದೆ.

  ಇದನ್ನೂ ಓದಿ: Gyanvapi Masjid: ನಾನು ಮನೆಯಿಂದ ಹೊರಗೆ ಹೋದರೆ ಹೆಂಡತಿ ಭಯ ಪಡುತ್ತಾಳೆ! ನ್ಯಾಯಾಧೀಶರೇ ಹೀಗೆ ಹೇಳಿದ್ಯಾಕೆ?

  ಸಿಸಿಟಿವಿ ಕ್ಯಾಮೆರಾಗಳು ಮತ್ತು ರೂಟರ್‌ಗಳನ್ನು ತಯಾರಿಸುವ ಕಂಪನಿಯ ಕಚೇರಿಯಾಗಿ ಕಾರ್ಯನಿರ್ವಹಿಸುವ ಕಟ್ಟಡದ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಂಪನಿಯ 50 ಕ್ಕೂ ಹೆಚ್ಚು ಉದ್ಯೋಗಿಗಳನ್ನು ರಕ್ಷಿಸಲಾಗಿದೆ. ಈ ನಡುವೆ ಕಂಪನಿಯ ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ.
  Published by:guruganesh bhat
  First published: