HOME » NEWS » National-international » DELHI POLICE ARREST FREELANCE JOURNALIST ALLEGEDLY FOUND IN POSSESSION OF CLASSIFIED DOCUMENTS

ದೆಹಲಿ: ಅಧಿಕೃತ ರಹಸ್ಯ ಕಾಯ್ದೆಯಡಿ ದೆಹಲಿಯ ಫ್ರೀಲಾನ್ಸ್​ ಪತ್ರಕರ್ತ ರಾಜೀವ್ ಶರ್ಮಾ ಬಂಧನ

ಶರ್ಮಾ ಅವರು ರಾಜೀವ್ ಕಿಷ್ಕಿಂಧಾ ಎಂಬ ಯೂಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿದ್ದು, ಇದರಲ್ಲಿ ಸಾವಿರಾರು ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ. ಬಂಧನದ ದಿನ ಅವರು ಎರಡು ವೀಡಿಯೊಗಳನ್ನು ಅಪ್‌ಲೋಡ್ ಮಾಡಿದ್ದಾರೆ. 

news18-kannada
Updated:September 19, 2020, 10:40 PM IST
ದೆಹಲಿ: ಅಧಿಕೃತ ರಹಸ್ಯ ಕಾಯ್ದೆಯಡಿ ದೆಹಲಿಯ ಫ್ರೀಲಾನ್ಸ್​ ಪತ್ರಕರ್ತ ರಾಜೀವ್ ಶರ್ಮಾ ಬಂಧನ
ರಾಜೀವ್ ಶರ್ಮಾ.
  • Share this:
ನವ ದೆಹಲಿ: ಕೇಂದ್ರ ಸರ್ಕಾರದ ರಕ್ಷಣಾ ಸಂಬಂಧಿತ ವರ್ಗೀಕೃತ ದಾಖಲೆಗಳನ್ನು ಹೊಂದಿದ್ದಾರೆ ಎಂಬ ಆರೋಪದ ಮೇಲೆ ದೆಹಲಿಯ ಫ್ರೀ ಲಾನ್ಸರ್ ಪತ್ರಕರ್ತನನ್ನು ರಾಜೀವ್ ಶರ್ಮಾ ಎಂಬ ವ್ಯಕ್ತಿಯನ್ನು ದೆಹಲಿ ವಿಶೇಷ ಪೊಲೀಸ್ ಸೆಲ್ ಅಧಿಕೃತ ರಹಸ್ಯ ಕಾಯ್ದೆಯ ಅಡಿಯಲ್ಲಿ ಬಂಧಿಸಿದೆ. ಈ ಸುದ್ದಿ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಈ ಸಂಬಂಧ ಮಾಹಿತಿ ನೀಡಿರುವ ವಿಶೇಷ ಸೆಲ್ ಉಪ ಪೊಲೀಸ್ ಆಯುಕ್ತ ಸಂಜೀವ್ ಕುಮಾರ್, “ಪ್ರಾಥಮಿಕ ತನಿಖೆಯಲ್ಲಿ ಬಂಧಿತ ಆರೋಪಿ ಕೆಲವು ರಕ್ಷಣಾ ಸಂಬಂಧಿತ ವರ್ಗೀಕೃತ ದಾಖಲೆಗಳನ್ನು ಹೊಂದಿದ್ದರೆಂದು ತಿಳಿದುಬಂದಿದೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಮತ್ತು ಹೆಚ್ಚಿನ ವಿವರಗಳನ್ನು ಮುಂದಿನ ದಿನಗಳಲ್ಲಿ ಹಂಚಿಕೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

“ಸೆಪ್ಟೆಂಬರ್ 14 ರಂದು ಶರ್ಮಾ ಅವರನ್ನು ಬಂಧಿಸಿ, ಮರುದಿನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನಂತರ ನ್ಯಾಯಾಲಯವು ಪತ್ರಕರ್ತನನ್ನು ಆರು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿತು. ದೆಹಲಿ ಪೊಲೀಸರು ಆತನ ಲ್ಯಾಪ್‌ಟಾಪ್, ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದು, ಅವರ ಕರೆಯ ದಾಖಲೆಗಳನ್ನು ಸ್ಕ್ಯಾನ್ ಮಾಡುತ್ತಿದ್ದಾರೆ” ಎಂದು ಸ್ಕ್ರಾಲ್.ಇನ್ ವರದಿ ಮಾಡಿದೆ.

ಶರ್ಮಾ ಅವರು ‘ರಾಜೀವ್ ಕಿಷ್ಕಿಂಧಾ’ ಎಂಬ ಯೂಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿದ್ದು, ಇದರಲ್ಲಿ ಸಾವಿರಾರು ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ. ಬಂಧನದ ದಿನ ಅವರು ಎರಡು ವೀಡಿಯೊಗಳನ್ನು ಅಪ್‌ಲೋಡ್ ಮಾಡಿದ್ದಾರೆ.

ಇದನ್ನೂ ಓದಿ : ರಾಜ್ಯಸಭೆಯಲ್ಲಿ ಕೇಂದ್ರದ ಮೂರು ಕೃಷಿ ಮಸೂದೆ; ಬಿಜೆಪಿಗಿದೆಯೇ ಬಹುಮತ?, ಸಂಖ್ಯೆಗಳ ಆಟದಲ್ಲಿ ಸರ್ಕಾರ!

ವಿದೇಶಾಂಗ ಮಂತ್ರಿಗಳ ಮಟ್ಟದಲ್ಲಿ ಉಭಯ ದೇಶಗಳ ನಡುವೆ ಮಾತುಕತೆ ನಡೆಸಿದರೂ, ಚೀನಾ ಇನ್ನೂ ಕಿಡಿಗೇಡಿತನ ಮಾಡುತ್ತದೆ ಎಂದು ವೀಡಿಯೊವೊಂದರಲ್ಲಿ ಹೇಳಿದ್ದಾರೆ. ಇನ್ನೊಂದು ವೀಡಿಯೋದಲ್ಲಿ ದೇಶದಲ್ಲಿನ ಪತ್ರಿಕೋದ್ಯಮದ ಪರಿಸ್ಥಿತಿಯ ಕುರಿತು ಮಾತನಾಡಿದ್ದರು.

5,300 ಕ್ಕೂ ಹೆಚ್ಚು ಫಾಲೋವರ್ಸ್‌ಗಳನ್ನು ಹೊಂದಿರುವ ಇವರ ಟ್ವಿಟ್ಟರ್ ಖಾತೆಯನ್ನು ನಿರ್ಬಂಧಿಸಲಾಗಿದೆ. ಸೆಪ್ಟೆಂಬರ್ 7 ರಂದು, ಶರ್ಮಾ ಚೀನಾದ ಸರ್ಕಾರಿ ದಿನಪತ್ರಿಕೆ ಗ್ಲೋಬಲ್ ಟೈಮ್ಸ್‌ಗಾಗಿ ಲೇಖನವೊಂದನ್ನು ಬರೆದಿದ್ದಾರೆ ಎಂದು ವರದಿಯಾಗಿದೆ.
Published by: MAshok Kumar
First published: September 19, 2020, 10:40 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories