ನವ ದೆಹಲಿ (ಜೂನ್ 25); ಜನವರಿ 29 ರಂದು ಇಸ್ರೇಲ್ ರಾಯಭಾರ ಕಚೇರಿಯ ಬಳಿ ನಡೆದ ಕಡಿಮೆ ತೀವ್ರತೆಯ ಸ್ಫೋಟ ಪ್ರಕರಣ ನಡದಿತ್ತು. ಈ ಸ್ಪೋಟದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕಾರ್ಗಿಲ್‌ನ ನಾಲ್ಕು ಕಾಲೇಜು ವಿದ್ಯಾರ್ಥಿ ಗಳನ್ನು ಬಂಧಿಸಿದ್ದಾರೆ. ನಾಲ್ವರನ್ನು ಕಾರ್ಗಿಲ್‌ನಿಂದ ವಶಕ್ಕೆ ಪಡೆಯಲಾಗಿದ್ದು, ಅವರನ್ನು ದೆಹಲಿ ಪೊಲೀಸ್ ವಿಶೇಷ ತನಿಖಾ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಲಿದ್ದಾರೆ ಎಂದು ಮೂಲಗಳು ನ್ಯೂಸ್ 18 ಗೆ ಖಚಿತಪಡಿಸಿವೆ. ಬಂಧಿತ ಎಲ್ಲರೂ 21 ರಿಂದ 25 ವಯಸ್ಸಿನ ಯುವಕರು ಎಂದು ಹೇಳಲಾಗುತ್ತಿದೆ.
ಕಾರ್ಗಿಲ್ ಅಧಿಕಾರಿಯೊಬ್ಬರು ನ್ಯೂಸ್18ಗೆ ಈ ಬಗ್ಗೆ ಮಾಹಿತಿ ನೀಡಿದ್ದು, "ಬಂಧಿತ ವಿದ್ಯಾರ್ಥಿಗಳು ಮಧ್ಯಮ ವರ್ಗದ ಕುಟುಂಬಗಳಿಂದ ಬಂದವರು. ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ. ದೆಹಲಿ ಪೊಲೀಸರು ಅವರ ವಿರುದ್ಧದ ಆರೋಪ ನಿಖರವಾಗಿ ಏನು ಎಂಬುದರ ಕುರಿತು ಹೆಚ್ಚಿನ ವಿವರಗಳನ್ನು ಹಂಚಿಕೊಂಡಿಲ್ಲ. ಅವರನ್ನು ನಿನ್ನೆ ವಶಕ್ಕೆ ತೆಗೆದುಕೊಳ್ಳಲಾಗಿದೆ. ಸಾರಿಗೆ ರಿಮಾಂಡ್‌ನಲ್ಲಿ ಕರೆದೊಯ್ಯಲಾಯಿತು ಮತ್ತು ಬುಧವಾರ ದೆಹಲಿಗೆ ಕಳುಹಿಸಲಾಗಿದೆ " ಎಂದು ತಿಳಿಸಿದ್ದಾರೆ.
ಜನವರಿ 29 ರಂದು ಲುಟಿಯೆನ್ಸ್ ದೆಹಲಿಯ ಹೃದಯಭಾಗದಲ್ಲಿರುವ ಇಸ್ರೇಲಿ ರಾಯಭಾರ ಕಚೇರಿಯ ಬಳಿ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿತ್ತು. ಆದರೆ ಯಾವುದೇ ಸಾವು-ನೋವು ವರದಿಯಾಗಿರಲಿಲ್ಲ. ಹೆಚ್ಚಿನ ಭದ್ರತಾ ವಲಯದ ಪಾದಚಾರಿ ಬಳಿ ಸ್ಫೋಟ ಸಂಭವಿಸಿದೆ ಮತ್ತು ಹತ್ತಿರದ ಮೂರು ಕಾರುಗಳ ವಿಂಡ್‌ಸ್ಕ್ರೀನ್‌ಗಳು ಹಾನಿಗೊಂಡಿವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದರು.
ಇದನ್ನೂ ಓದಿ: PM Modi: ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಕೇಂದ್ರ ಬದ್ಧ; ಪ್ರಧಾನಿ ಮೋದಿ ಭರವಸೆ
ಜೂನ್ 15 ರಂದು ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಬ್ಬರು ಶಂಕಿತರ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿತ್ತು. ಇಬ್ಬರು ಶಂಕಿತರ ಮಾಹಿತಿಗಾಗಿ ಎನ್‌ಐಎ ತಲಾ 10 ಲಕ್ಷ ರೂ. ಬಹುಮಾನ ಘೋಷಿಸಿದೆ. ಅಲ್ಲದೆ, ಐಎನ್ಎ ಈ ನಾಲ್ಕು ವ್ಯಕ್ತಿಗಳನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ