ದೆಹಲಿ ಹಿಂಸಾಚಾರ: ಇಲ್ಲಿಯವರೆಗೂ 630 ಮಂದಿ ಬಂಧನ; 123 ವಿರುದ್ಧ ಎಫ್​​​ಐಆರ್​​

ಇನ್ನು, ಹಿರಿಯ ಐಪಿಎಸ್ ಅಧಿಕಾರಿ ಎಸ್. ಎನ್. ಶ್ರೀವಾಸ್ತವರನ್ನು ದೆಹಲಿಯ ವಿಶೇಷ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಕೇಂದ್ರ ಗೃಹ ಇಲಾಖೆ ಈ ಕುರಿತು ಆದೇಶ ಹೊರಡಿಸಿದ್ದು, ತಕ್ಷಣ ಅಧಿಕಾರ ವಹಿಸಿಕೊಳ್ಳಬೇಕು ಎಂದು ಸೂಚನೆ ನೀಡಿದೆ.

news18-kannada
Updated:February 29, 2020, 7:06 AM IST
ದೆಹಲಿ ಹಿಂಸಾಚಾರ: ಇಲ್ಲಿಯವರೆಗೂ 630 ಮಂದಿ ಬಂಧನ; 123 ವಿರುದ್ಧ ಎಫ್​​​ಐಆರ್​​
ದೆಹಲಿಯ ಜಫ್ರಾಬಾದ್​ನಲ್ಲಿ ಸಿಎಎ ಹಿಂಸಾಚಾರ
  • Share this:
ನವದೆಹಲಿ(ಫೆ.29): ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿರುವ ಸಿಎಎ ಮತ್ತು ಎನ್​​ಆರ್​​ಸಿ ವಿರೋಧಿ ಪ್ರತಿಭಟನೆಯಲ್ಲಿ ಸಾವಿನ ಸಂಖ್ಯೆ ದಿನದಿಂದ ದಿನಕ್ಕೇರುತ್ತಲೇ ಇದೆ. ಇಲ್ಲಿಯವರೆಗೂ ಈ ಗಲಭೆಯಲ್ಲಿ 42 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ 123 ಮಂದಿ ವಿರುದ್ಧ ಎಫ್​​ಐಆರ್​​ ದಾಖಲಾಗಿದ್ದು, 630 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನು, ಹಿರಿಯ ಐಪಿಎಸ್ ಅಧಿಕಾರಿ ಎಸ್. ಎನ್. ಶ್ರೀವಾಸ್ತವರನ್ನು ದೆಹಲಿಯ ವಿಶೇಷ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಕೇಂದ್ರ ಗೃಹ ಇಲಾಖೆ ಈ ಕುರಿತು ಆದೇಶ ಹೊರಡಿಸಿದ್ದು, ತಕ್ಷಣ ಅಧಿಕಾರ ವಹಿಸಿಕೊಳ್ಳಬೇಕು ಎಂದು ಸೂಚನೆ ನೀಡಿದೆ. 1985ನೇ ಬ್ಯಾಚ್ ಐಪಿಎಸ್ ಅಧಿಕಾರಿ ಎಸ್. ಎನ್. ಶ್ರೀವಾಸ್ತವ ಅಮೂಲ್ಯ ಪಟ್ನಾಯಕ್ ಅವರ ಸ್ಥಾನಕ್ಕೆ ನೇಮಕಗೊಂಡಿದ್ದಾರೆ. ದೆಹಲಿಯಲ್ಲಿ ಇನ್ಯಾವುದೇ ಗಲಭೆ ಸಂಭವಿಸಿದಂತೆ ನೋಡಿಕೊಳ್ಳುವ ಸಂಪೂರ್ಣ ಹೊಣೆ  ಎಸ್. ಎನ್. ಶ್ರೀವಾಸ್ತರಿಗೆ ವಹಿಸಲಾಗಿದೆ.

ರಾಷ್ಟ್ರೀಯ ನಾಗರಿಕ ನೋಂದಣಿ ಮತ್ತು ಪೌರತ್ವ ಕಾಯ್ದೆ ಪರ-ವಿರೋಧಿ ಗುಂಪುಗಳ ನಡುವಿನ ಘರ್ಷಣೆಯಿಂದ ದೆಹಲಿಯಲ್ಲಿ ಹಿಂಸಾಚಾರ ಹೆಚ್ಚುತ್ತಲ್ಲೇ ಇದೆ. ಈ ಬೆನ್ನಲ್ಲೇ ಎಚ್ಚೆತ್ತ ದೆಹಲಿ ಪೊಲೀಸರು ಕಂಡಲ್ಲಿ ಗುಂಡಿಕ್ಕಲು ಆದೇಶ ಹೊರಡಿಸಿದ್ದಾರೆ. ಈ ಆದೇಶ ಈಶಾನ್ಯ ದೆಹಲಿಯ ಹಲವೆಡೆ ಜಾರಿಯಲ್ಲಿದ್ದು, ಹಿಂಸಾಚಾರ ತಡೆಗಟ್ಟಲು ಕಠಿಣ ಆದೇಶ ಹೊರಡಿಸಲಾಗಿದೆ. ಈ ಮಧ್ಯೆ ಸಿಎಎ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡುವವರನ್ನು ವಿರುದ್ಧ ಕಠಿಣ ಕ್ರಮಕೈಗೊಳ್ಳಿ ಎಂದು ಸುಪ್ರೀಂಕೋರ್ಟ್ ಪೊಲೀಸರಿಗೆ ನಿರ್ದೇಶನ ನೀಡಿತ್ತು.

ಇದನ್ನೂ ಓದಿ: ‘ಸಿಎಎ ಯಾರ ಪೌರತ್ವವೂ ಕಸಿದುಕೊಳ್ಳುವುದಿಲ್ಲ‘; ಕೇಂದ್ರ ಗೃಹ ಸಚಿವ ಅಮಿತ್​​​ ಶಾ ಮರು ಸ್ಪಷ್ಟನೆ

ದೆಹಲಿ ಹಿಂಸಾಚಾರ ಸಂಬಂಧ ಸುಪ್ರೀಂಕೋರ್ಟ್​ಗೆ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ. ಇಲ್ಲಿನ ಹಿಂಸಾಚಾರವೂ ದೆಹಲಿ ಹೈಕೋರ್ಟ್ ವ್ಯಾಪ್ತಿಗೆ ಬರಲಿದೆ. ಯಾರೇ ಆಗಲಿ ಅಲ್ಲಿಯೇ ಸರ್ಜಿ ಸಲ್ಲಿಸಬಹುದು. ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ದ್ವಿಸದಸ್ಯ ಪೀಠವು ತಿಳಿಸಿತ್ತು. ಅದರಂತೆಯೇ ದೆಹಲಿ ಹಿಂಸಾಚಾರದ ಸಂಬಂಧ ಹಲವು ಅರ್ಜಿಗಳು ಇಲ್ಲಿನ ಹೈಕೋರ್ಟ್​ಗೆ ಸಲ್ಲಿಕೆಯಾಗಿವು. ಇದರ ವಿಚಾರಣೆ ನಡೆಸುತ್ತಿರುವ ದೆಹಲಿ ಹೈಕೋರ್ಟ್​ ಹೀಗೆ ಆದೇಶ ನೀಡಿ ಪ್ರಕರಣ ಇತ್ಯರ್ಥ ಮಾಡುತ್ತಿದೆ.

ಇನ್ನು, ಪೌರತ್ವ ಕಾಯ್ದೆಯಿಂದಾಗಿಯೇ ದೆಹಲಿಯಲ್ಲಿ ಹಿಂಸಾಚಾರ ಹೆಚ್ಚಾಗುತ್ತಿದೆ ಎಂದು ಪ್ರತಿಪಕ್ಷಗಳು ಕಟುವಾಗಿ ಟೀಕಿಸಿವೆ. ಬಹುಜನ ಸಮಾಜ ಪಕ್ಷ(ಬಿಎಸ್​​ಪಿ), ಸಮಾಜವಾದಿ ಪಕ್ಷ(ಎಸ್​ಪಿ), ಕಮ್ಯೂನಿಸ್ಟ್​, ಕಾಂಗ್ರೆಸ್​ ಸೇರಿದಂತೆ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಜತೆಗೆ ಹಲವು ಪಕ್ಷಗಳು ಸಿಎಎ ವಿರುದ್ಧ ನಿಂತಿದ್ದಾರೆ. ಸಿಎಎ ಅಲ್ಪಸಂಖ್ಯಾತರ ಪೌರತ್ವ ಕಸಿದುಕೊಳ್ಳಲಿದೆ ಎನ್ನುವ ಮೂಲಕ ಕೇಂದ್ರದ ವಿರುದ್ಧ ಕೆಂಡಕಾರುತ್ತಿವೆ.
First published: February 29, 2020, 7:06 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading