Delhi Schools Re-opening: ಇಂದಿನಿಂದ ದೆಹಲಿಯಲ್ಲಿ 9-12ನೇ ತರಗತಿಗಳು ಆರಂಭ; ಮಾರ್ಗಸೂಚಿಗಳು ಇಲ್ಲಿವೆ

Delhi Schools Re-opening: ಕೋವಿಡ್​-19 ಕಂಟೈನ್ಮೆಂಟ್​ ಝೋನ್​​ನಲ್ಲಿರುವ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ತರಗತಿಗಳಿಗೆ ಹಾಜರಾಗುವಂತಿಲ್ಲ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಕೊರೋನಾ ಹೆಮ್ಮಾರಿಯ ಹೊಡೆತಕ್ಕೆ ಸಿಕ್ಕಿ ನಲುಗಿದ್ದ ರಾಷ್ಟ್ರ ರಾಜಧಾನಿ ನವದೆಹಲಿ ಹಂತ-ಹಂತವಾಗಿ ಚೇತರಿಕೆ ಕಾಣುತ್ತಿದೆ. ದಿನೇ ದಿನೇ ಕೊರೋನಾ ಪ್ರಕರಣಗಳು ಕುಸಿಯುತ್ತಿರುವ ಹಿನ್ನೆಲೆ, ಸ್ಥಗಿತಗೊಂಡಿದ್ದ ಹಲವು ಆರ್ಥಿಕ ಚಟುವಟಿಕೆಗಳು ಗರಿಗೆದರುತ್ತಿವೆ. ಅದೇ ರೀತಿ ಕೊರೋನಾ ಕಾರಣದಿಂದ ಮುಚ್ಚಲ್ಪಟ್ಟಿದ್ದ ಶಾಲಾ-ಕಾಲೇಜುಗಳನ್ನೂ ಸಹ ತೆರೆಯಲು ದೆಹಲಿ ಸರ್ಕಾರ ಮುಂದಾಗಿದೆ. ಇಂದಿನಿಂದ(ಸೆಪ್ಟೆಂಬರ್ 1) ದೆಹಲಿಯಲ್ಲಿ 9-12ನೇ ತರಗತಿಗಳು ಪ್ರಾರಂಭವಾಗಲಿವೆ. ಸರ್ಕಾರದ ಮಾರ್ಗಸೂಚಿ ಅನ್ವಯ ತರಗತಿಗಳನ್ನು ನಡೆಸುವಂತೆ ಆದೇಶ ಹೊರಡಿಸಲಾಗಿದೆ.

ವಿದ್ಯಾರ್ಥಿಯು ತಗರತಿಗೆ ಹಾಜರಾಗಲೇಬೇಕೆಂದು ದೆಹಲಿ ಸರ್ಕಾರ ಕಡ್ಡಾಯವಾಗಿ ಹೇಳಿಲ್ಲ. ರಾಷ್ಟ್ರ ರಾಜಧಾನಿಯಲ್ಲಿ ಹಲವು ಶಾಲೆಗಳು ತಮ್ಮ ವಿದ್ಯಾರ್ಥಿಗಳನ್ನು ಕರೆಸಿಕೊಳ್ಳುವ ಮುನ್ನ, ಪರಿಸ್ಥಿತಿ ಹೇಗೆ ಮುಂದುವರೆಯುತ್ತದೆ ಎಂಬುದನ್ನು ನೋಡಲು ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿವೆ.

ಕಳೆದ ಶುಕ್ರವಾರ ದೆಹಲಿ ಸರ್ಕಾರ ಸೆಪ್ಟೆಂಬರ್ 1ರಿಂದ 9-12ನೇ ತರಗತಿಗಳನ್ನು ಪ್ರಾರಂಭಿಸುವುದಾಗಿ ಹೇಳಿತ್ತು. ಸರ್ಕಾರದ ಎಸ್​ಒಪಿ ಪ್ರಕಾರ, ಶೇ. 50 ರಷ್ಟು ಸಾಮರ್ಥ್ಯದೊಂದಿಗೆ ಮಾತ್ರ ಶಾಲಾ-ಕಾಲೇಜುಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಅಲ್ಲದೇ ಎಲ್ಲಾ ಶಿಕ್ಷಣ ಸಂಸ್ಥೆಗಳು ಸಹ ಕಡ್ಡಾಯವಾಗಿ ಕ್ವಾರಂಟೈನ್​ ಸೆಂಟರ್​​ಗಳನ್ನು ಹೊಂದಿರಬೇಕು ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ. ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಾಗಿರುವುದಿಲ್ಲ. ಮಾರ್ಗಸೂಚಿ ಪ್ರಕಾರ, ಆನ್​ಲೈನ್​ ಹಾಗೂ ಆಫ್​ಲೈನ್​​ ಎರಡೂ ತರಗತಿಗಳನ್ನೂ ನಡೆಸಲಾಗುತ್ತದೆ.



ಇದನ್ನೂ ಓದಿ:Gold Price Today: ಇಂದು ಮತ್ತೆ ಇಳಿಕೆಯಾದ ಚಿನ್ನದ ಬೆಲೆ; ಬೆಂಗಳೂರಿನಲ್ಲಿ ಎಷ್ಟಿದೆ ಗೊತ್ತಾ ರೇಟ್?

ದೆಹಲಿಯಲ್ಲಿ 9-12 ನೇ ತರಗತಿಗಳು ಇಂದಿನಿಂದ ಆರಂಭವಾಗುತ್ತಿವೆ. ಅದೇ ರೀತಿ 6-8ನೇ ತರಗತಿಗಳು ಸೆಪ್ಟೆಂಬರ್ 8ರಿಂದ ಶುರುವಾಗಲಿವೆ. ಇತ್ತೀಚೆಗೆ ಎಎಪಿ ಸರ್ಕಾರವು ತಜ್ಞರ ಸಮಿತಿಯೊಂದಿಗೆ ಸಭೆ ನಡೆಸಿತ್ತು. ಅಲ್ಲಿ ತಜ್ಞರು ಶಾಲೆಗಳನ್ನು ಹಂತ-ಹಂತವಾಗಿ ತೆರೆಯವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು. ತಜ್ಞರ ಸಮಿತಿಯ ಶಿಫಾರಸ್ಸಿನ ಮೇರೆಗೆ ಈಗ ದೆಹಲಿ ಸರ್ಕಾರ ಶಾಲೆಗಳನ್ನು ತೆರೆಯಲು ಮುಂದಾಗಿದೆ. ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಪೋಷಕರ ಆಯ್ಕೆಗೆ ಬಿಟ್ಟಿದ್ದು. ಒಂದು ವೇಳೆ ತಮ್ಮ ಮಗುವನ್ನು ಶಾಲೆಗೆ ಕಳುಹಿಸಲು ಪೋಷಕರಿಗೆ ಇಷ್ಟವಿಲ್ಲವಾದರೆ ಅಂತಹ ವಿದ್ಯಾರ್ಥಿಗಳು ಆನ್​ಲೈನ್​ ತರಗತಿ ಕೇಳಬಹುದು.

10 ಮತ್ತು 12ನೇ ತರಗತಿಗಳನ್ನು ಸಹ ಇತ್ತೀಚೆಗೆ ಪ್ರಾರಂಭಿಸಲಾಗಿದೆ. ಬೋರ್ಡ್​ ಎಕ್ಸಾಂಗಾಗಿ ಅಡ್ಮಿಷನ್ ಆಗಲು​ ಹಾಗೂ ಪ್ರಾಕ್ಟಿಕಲ್​ ಚಟುವಟಿಕೆಗಳಿಗಾಗಿ ಮಾತ್ರ ವಿದ್ಯಾರ್ಥಿಗಳನ್ನು ಕಾಲೇಜಿಗೆ ಬರಲು ಹೇಳಲಾಗಿದೆ.

ಕೊರೋನಾ ಸೋಂಕು ಹೆಚ್ಚಾಗಿ ಹರಡಲು ಶುರುಮಾಡಿದ್ದರಿಂದ ದೇಶಾದ್ಯಂತ ಲಾಕ್​ಡೌನ್​ ವಿಧಿಸಿದ ಕಾರಣ, ರಾಷ್ಟ್ರ ರಾಜಧಾನಿಯಲ್ಲಿ ಕಳೆದ ವರ್ಷ ಮಾರ್ಚ್​ ತಿಂಗಳಿನಿಂದ ಶಾಲೆಗಳನ್ನು ಮುಚ್ಚಲಾಗಿತ್ತು. 9-12ನೇ ತರಗತಿಗಳನ್ನು ಶುರುಮಾಡಲು ಜನವರಿಯಲ್ಲಿ ಶಾಲೆಗಳನ್ನು ಭಾಗಶಃ ತೆರೆಯಲಾಗಿತ್ತು. ಆದರೆ ಕೊರೋನಾ 2ನೇ ಅಲೆ ಬಂದ ಹಿನ್ನೆಲೆ, ಏಪ್ರಿಲ್​​ನಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು. ಈಗ ಎಲ್ಲಾ ಮಾರ್ಗಸೂಚಿಗಳನ್ವಯ ಮುಂಜಾಗ್ರತಾ ಕ್ರಮಗಳೊಂದಿಗೆ ಶಾಲೆಗಳನ್ನು ತೆರೆಯಲಾಗುತ್ತಿದೆ.

ದೆಹಲಿ ಮಾತ್ರವಲ್ಲದೇ, ದೇಶಾದ್ಯಂತ ಕೊರೋನಾ ಕಾರಣದಿಂದಾಗಿ ಶಾಲಾ-ಕಾಲೇಜುಗಳು, ಕೋಚಿಂಗ್​ ಸೆಂಟರ್​​ಗಳನ್ನು ಮುಚ್ಚಲಾಗಿತ್ತು. ಇದೀಗ ಸೆಪ್ಟೆಂಬರ್ 1ರಿಂದ ಶಾಲೆಗಳನ್ನು ತೆರೆಯಲು ದೆಹಲಿ ಸರ್ಕಾರ ನಿರ್ಧರಿಸಿದೆ. ಪ್ರತೀ ಕೊಠಡಿಯಲ್ಲಿ ಶೇ.50ರಷ್ಟು ವಿದ್ಯಾರ್ಥಿಗಳನ್ನು ಮಾತ್ರ ಕೂರಿಸಬೇಕು. ಥರ್ಮಲ್​ ಸ್ಕ್ರೀನಿಂಗ್ ಕಡ್ಡಾಯವಾಗಿರುತ್ತದೆ. ಶಾಲೆಗಳಿಗೆ ಅತಿಥಿಗಳ ಬರುವಿಕೆಯನ್ನು ಆದಷ್ಟು ತಡೆಯಲು ಹೇಳಲಾಗಿದೆ.

ಇನ್ನು, ಕೋವಿಡ್​-19 ಕಂಟೈನ್ಮೆಂಟ್​ ಝೋನ್​​ನಲ್ಲಿರುವ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ತರಗತಿಗಳಿಗೆ ಹಾಜರಾಗುವಂತಿಲ್ಲ. ವಿವಿಧ ಶಾಲೆಗಳಲ್ಲಿ ಈಗಾಗಲೇ ವ್ಯಾಕ್ಸಿನೇಷನ್​ ಸೆಂಟರ್​ಗಳನ್ನು ತೆರೆಯಲಾಗಿದೆ. ಜೊತೆಗೆ ಪಡಿತರ ವಿತರಣೆ ಮಾಡಲಾಗುತ್ತಿದೆ.

ಇದನ್ನೂ ಓದಿ:Karnataka Weather Today: ಸೆ.5ರವರೆಗೂ ಕರ್ನಾಟಕದಲ್ಲಿ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ

ದೆಹಲಿ ಜೊತೆಗೆ ಇತರೆ 5 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲೂ ಸೆಪ್ಟೆಂಬರ್​ 1ರಿಂದ ಶಾಲೆಗಳು ಆರಂಭವಾಗುತ್ತಿವೆ. ತಮಿಳುನಾಡು ಮಧ್ಯಪ್ರದೇಶ ಮತ್ತು ಗುಜರಾತ್​ ಸರ್ಕಾರಗಳು ಇಂದಿನಿಂದ ಶಾಲಾರಾಂಭಕ್ಕೆ ಹಸಿರು ನಿಶಾನೆ ತೋರಿವೆ.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು.
Published by:Latha CG
First published: