ಕೊರೋನಾ ಹೆಮ್ಮಾರಿಯ ಹೊಡೆತಕ್ಕೆ ಸಿಕ್ಕಿ ನಲುಗಿದ್ದ ರಾಷ್ಟ್ರ ರಾಜಧಾನಿ ನವದೆಹಲಿ ಹಂತ-ಹಂತವಾಗಿ ಚೇತರಿಕೆ ಕಾಣುತ್ತಿದೆ. ದಿನೇ ದಿನೇ ಕೊರೋನಾ ಪ್ರಕರಣಗಳು ಕುಸಿಯುತ್ತಿರುವ ಹಿನ್ನೆಲೆ, ಸ್ಥಗಿತಗೊಂಡಿದ್ದ ಹಲವು ಆರ್ಥಿಕ ಚಟುವಟಿಕೆಗಳು ಗರಿಗೆದರುತ್ತಿವೆ. ಅದೇ ರೀತಿ ಕೊರೋನಾ ಕಾರಣದಿಂದ ಮುಚ್ಚಲ್ಪಟ್ಟಿದ್ದ ಶಾಲಾ-ಕಾಲೇಜುಗಳನ್ನೂ ಸಹ ತೆರೆಯಲು ದೆಹಲಿ ಸರ್ಕಾರ ಮುಂದಾಗಿದೆ. ಇದೇ ಸೆಪ್ಟೆಂಬರ್ 1ರಿಂದ ಅಂದರೆ ಬುಧವಾರದಿಂದ ದೆಹಲಿಯಲ್ಲಿ ಶಾಲಾ-ಕಾಲೇಜುಗಳು ಪ್ರಾರಂಭವಾಗಲಿವೆ. ಸರ್ಕಾರದ ಮಾರ್ಗಸೂಚಿ ಅನ್ವಯ ತರಗತಿಗಳನ್ನು ನಡೆಸುವಂತೆ ಆದೇಶ ಹೊರಡಿಸಲಾಗಿದೆ.
ಹೀಗಾಗಿ ಸರ್ಕಾರದ ಎಸ್ಒಪಿ ಪ್ರಕಾರ, ಶೇ. 50 ರಷ್ಟು ಸಾಮರ್ಥ್ಯದೊಂದಿಗೆ ಮಾತ್ರ ಶಾಲಾ-ಕಾಲೇಜುಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಅಲ್ಲದೇ ಎಲ್ಲಾ ಶಿಕ್ಷಣ ಸಂಸ್ಥೆಗಳು ಸಹ ಕಡ್ಡಾಯವಾಗಿ ಕ್ವಾರಂಟೈನ್ ಸೆಂಟರ್ಗಳನ್ನು ಹೊಂದಿರಬೇಕು ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ. ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಾಗಿರುವುದಿಲ್ಲ. ಮಾರ್ಗಸೂಚಿ ಪ್ರಕಾರ, ಆನ್ಲೈನ್ ಹಾಗೂ ಆಫ್ಲೈನ್ ಎರಡೂ ತರಗತಿಗಳನ್ನೂ ನಡೆಸಲಾಗುತ್ತದೆ.
ಇದನ್ನೂ ಓದಿ:Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ
ದೆಹಲಿಯಲ್ಲಿ 9-12 ನೇ ತರಗತಿಗಳು ಇದೇ ಬುಧವಾರದಿಂದ ಅಂದರೆ ಸೆಪ್ಟೆಂಬರ್ 1ರಿಂದ ಆರಂಭವಾಗುತ್ತಿವೆ. ಅದೇ ರೀತಿ 6-8ನೇ ತರಗತಿಗಳು ಸೆಪ್ಟೆಂಬರ್ 8ರಿಂದ ಶುರುವಾಗಲಿವೆ. ಇತ್ತೀಚೆಗೆ ಎಎಪಿ ಸರ್ಕಾರವು ತಜ್ಞರ ಸಮಿತಿಯೊಂದಿಗೆ ಸಭೆ ನಡೆಸಿತ್ತು. ಅಲ್ಲಿ ತಜ್ಞರು ಶಾಲೆಗಳನ್ನು ಹಂತ-ಹಂತವಾಗಿ ತೆರೆಯವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು. ತಜ್ಞರ ಸಮಿತಿಯ ಶಿಫಾರಸ್ಸಿನ ಮೇರೆಗೆ ಈಗ ದೆಹಲಿ ಸರ್ಕಾರ ಶಾಲೆಗಳನ್ನು ತೆರೆಯಲು ಮುಂದಾಗಿದೆ. ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಪೋಷಕರ ಆಯ್ಕೆಗೆ ಬಿಟ್ಟಿದ್ದು. ಒಂದು ವೇಳೆ ತಮ್ಮ ಮಗುವನ್ನು ಶಾಲೆಗೆ ಕಳುಹಿಸಲು ಪೋಷಕರಿಗೆ ಇಷ್ಟವಿಲ್ಲವಾದರೆ ಅಂತಹ ವಿದ್ಯಾರ್ಥಿಗಳು ಆನ್ಲೈನ್ ತರಗತಿ ಕೇಳಬಹುದು.
10 ಮತ್ತು 12ನೇ ತರಗತಿಗಳನ್ನು ಸಹ ಇತ್ತೀಚೆಗೆ ಪ್ರಾರಂಭಿಸಲಾಗಿತ್ತು. ಬೋರ್ಡ್ ಎಕ್ಸಾಂಗಾಗಿ ಅಡ್ಮಿಷನ್ ಆಗಲು ಹಾಗೂ ಪ್ರಾಕ್ಟಿಕಲ್ ಚಟುವಟಿಕೆಗಳಿಗಾಗಿ ಮಾತ್ರ ವಿದ್ಯಾರ್ಥಿಗಳನ್ನು ಕಾಲೇಜಿಗೆ ಬರಲು ಹೇಳಲಾಗಿತ್ತು.
ಇದನ್ನೂ ಓದಿ:Uttarakhand: ಉತ್ತರಾಖಂಡದಲ್ಲಿ ಭಾರೀ ಮಳೆಗೆ ಕುಸಿದ 3 ಮನೆಗಳು; ಇಬ್ಬರು ಸಾವು, ಹಲವರು ಕಣ್ಮರೆ
ಕೊರೋನಾ ಸೋಂಕು ಹೆಚ್ಚಾಗಿ ಹರಡಲು ಶುರುಮಾಡಿದ್ದರಿಂದ ದೇಶಾದ್ಯಂತ ಲಾಕ್ಡೌನ್ ವಿಧಿಸಿದ ಕಾರಣ, ರಾಷ್ಟ್ರ ರಾಜಧಾನಿಯಲ್ಲಿ ಕಳೆದ ವರ್ಷ ಮಾರ್ಚ್ ತಿಂಗಳಿನಿಂದ ಶಾಲೆಗಳನ್ನು ಮುಚ್ಚಲಾಗಿತ್ತು. 9-12ನೇ ತರಗತಿಗಳನ್ನು ಶುರುಮಾಡಲು ಜನವರಿಯಲ್ಲಿ ಶಾಲೆಗಳನ್ನು ಭಾಗಶಃ ತೆರೆಯಲಾಗಿತ್ತು. ಆದರೆ ಕೊರೋನಾ 2ನೇ ಅಲೆ ಬಂದ ಹಿನ್ನೆಲೆ, ಏಪ್ರಿಲ್ನಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು. ಈಗ ಎಲ್ಲಾ ಮಾರ್ಗಸೂಚಿಗಳನ್ವಯ ಮುಂಜಾಗ್ರತಾ ಕ್ರಮಗಳೊಂದಿಗೆ ಶಾಲೆಗಳನ್ನು ತೆರೆಯಲಾಗುತ್ತಿದೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು. ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ