ನವ ದೆಹಲಿ (ಫೆಬ್ರವರಿ 26); ಸಿಎಎ ಪರ-ವಿರೋಧಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಈಶಾನ್ಯ ದೆಹಲಿಯಲ್ಲಿ ಈವರೆಗೆ 20 ಜನ ಬಲಿಯಾಗಿದ್ದಾರೆ ಅಲ್ಲದೆ, 150ಕ್ಕೂ ಜನ ಗಾಯಗೊಂಡಿದ್ದಾರೆ. ಈ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದು ರಾಷ್ಟ್ರ ರಾಜಧಾನಿಯಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಂದು ತುರ್ತು ಸಚಿವ ಸಂಪುಟ ಸಭೆ ಕರೆದಿದೆ.
ದೆಹಲಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಹಿಂಸಾಚಾರವನ್ನು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಸೂಕ್ತ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎನ್ನಲಾಗುತ್ತಿದೆ.
ಅಲ್ಲದೆ, ಪ್ರಧಾನಮಂತ್ರಿ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರಿಗೆ ಭದ್ರತೆಗೆ ಸಂಬಂಧಿಸಿದಂತೆ ವರದಿ ನೀಡುವಂತೆಯೂ ಕೇಂದ್ರ ಸರ್ಕಾರ ಕೋರಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಈಗಾಗಲೇ ಪರಿಸ್ಥಿತಿ ಹತೋಟಿಗೆ ಸಹಕರಿಸುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿರುವ ನಿಟ್ಟಿನಲ್ಲಿ ಇಂದಿನ ಸಚಿವ ಸಂಪುಟ ಸಭೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.
ಇದನ್ನೂ ಓದಿ ; ದೆಹಲಿ ಹಿಂಸಾಚಾರ; ಮಧ್ಯರಾತ್ರಿ ವಿಚಾರಣೆ ನಡೆಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚಿಸಿದ ನ್ಯಾಯಾಲಯ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ