ಪೌರತ್ವ ಕಾಯ್ದೆ ಕಿಚ್ಚು: ಹೊತ್ತಿ ಉರಿಯುತ್ತಿರುವ ದೆಹಲಿ; ಪರಿಸ್ಥಿತಿ ನಿಯಂತ್ರಣಕ್ಕೆ ಕಂಡಲ್ಲಿ ಗುಂಡಿಕ್ಕಲು ಆದೇಶ

ರಾಷ್ಟ್ರೀಯ ನಾಗರಿಕ ನೋಂದಣಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುತ್ತಿದ್ದ ಹೋರಾಟವೂ ಹಿಂಸಾರೂಪಕ್ಕೆ ತಿರುಗಿದೆ. ಇದರ ಪರಿಣಾಮ ದೆಹಲಿಯಲ್ಲಿ ಸಾವನ್ನಪಿದವರ ಸಂಖ್ಯೆಯೂ ಏರುತ್ತಲೇ ಇದೆ. ಇಲ್ಲಿಯವರೆಗೂ ಸುಮಾರು 156 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಈ ಮಧ್ಯೆ ಪೊಲೀಸರು ಹೀಗೆ ಕಠಿಣ ಆದೇಶಿಸಿದ್ದಾರೆ.

news18-kannada
Updated:February 26, 2020, 7:39 AM IST
ಪೌರತ್ವ ಕಾಯ್ದೆ ಕಿಚ್ಚು: ಹೊತ್ತಿ ಉರಿಯುತ್ತಿರುವ ದೆಹಲಿ; ಪರಿಸ್ಥಿತಿ ನಿಯಂತ್ರಣಕ್ಕೆ ಕಂಡಲ್ಲಿ ಗುಂಡಿಕ್ಕಲು ಆದೇಶ
ಹೊತ್ತಿ ಉರಿಯುತ್ತಿರು ಈಶಾನ್ಯ ದೆಹಲಿ
  • Share this:
ನವದೆಹಲಿ(ಫೆ.25): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿಎಎ ಮತ್ತು ಎನ್​​ಆರ್​​ಸಿ ಪರ-ವಿರೋಧಿ ಗುಂಪುಗಳ ನಡುವಿನ ಘರ್ಷಣೆಯಿಂದ ಹಿಂಸಾಚಾರ ಹೆಚ್ಚುತ್ತಲ್ಲೇ ಇದೆ. ಈ ಬೆನ್ನಲ್ಲೇ ಎಚ್ಚೆತ್ತ ದೆಹಲಿ ಪೊಲೀಸರು ಕಂಡಲ್ಲಿ ಗುಂಡಿಕ್ಕಲು ಆದೇಶ ಹೊರಡಿಸಿದ್ದಾರೆ. ಈ ಆದೇಶವೂ ಈಶಾನ್ಯ ದೆಹಲಿಯ ಹಲವೆಡೆ ಜಾರಿಯಲ್ಲಿದ್ದು, ಹಿಂಸಾಚಾರ ತಡೆಗಟ್ಟಲು ಕಠಿಣ ಆದೇಶ ಹೊರಡಿಸಲಾಗಿದೆ.

ದೆಹಲಿಯ ನಾಲ್ಕು ಭಾಗಗಳಲ್ಲಿ ನಿಷೇಧಾಜ್ಞೆ ಜಾರಿಗೆ ತರಲಾಗಿದೆ. ಇದೇ ವೇಳೆ ಹಿಂಸಾಚಾರ ತಡೆಗಟ್ಟಲು 12 ಪ್ಯಾರ ಮಿಲಿಟರಿ ಪಡೆ ನಿಯೋಜನೆ ಮಾಡಲಾಗುತ್ತಿದೆ. ಇನ್ನು ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ರಾಷ್ಟ್ರೀಯ ನಾಗರಿಕ ನೋಂದಣಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುತ್ತಿದ್ದ ಹೋರಾಟವೂ ಹಿಂಸಾರೂಪಕ್ಕೆ ತಿರುಗಿದೆ. ಇದರ ಪರಿಣಾಮ ದೆಹಲಿಯಲ್ಲಿ ಸಾವನ್ನಪಿದವರ ಸಂಖ್ಯೆಯೂ ಏರುತ್ತಲೇ ಇದೆ. ಇಲ್ಲಿಯವರೆಗೂ ಸುಮಾರು 156 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಈ ಮಧ್ಯೆ ಪೊಲೀಸರು ಹೀಗೆ ಕಠಿಣ ಆದೇಶಿಸಿದ್ದಾರೆ.

ಮೂರು ದಿನಗಳ ಹಿಂದೆ ದೆಹಲಿಯಲ್ಲಿ ಸಿಎಎ ಮತ್ತು ಎನ್​​ಆರ್​ಸಿ ಪರ-ವಿರೋಧಿ ಗುಂಪುಗಳ ನಡುವೆ ಶುರುವಾದ ಸಂಘರ್ಷ ಮೂರನೇ ದಿನವೂ ಮುಂದುವರಿದಿದೆ. ಇಲ್ಲಿನ ಈಶಾನ್ಯ ಭಾಗದಲ್ಲಿ ಇರುವ ಮೌಜ್​ಪುರದಲ್ಲಿ ಇಂದು ಕೂಡ ಎರಡು ಗುಂಪುಗಳು ಪರಸ್ಪರ ಕಲ್ಲು ತೂರಾಟದಲ್ಲಿ ತೊಡಗಿವೆ. ನಿನ್ನೆ ಕಲ್ಲು ತೂರಾಟದ ವೇಳೆ ಪೊಲೀಸ್ ಕಾನ್ಸ್​ಟೇಬಲ್​​​​ ಓರ್ವ ಸಾವನ್ನಪ್ಪಿದ್ದಾರೆ. ಈಗ ಪೊಲೀಸ್ ಕಾನ್ಸ್​ಟೇಬಲ್ ಬೆನ್ನಲ್ಲೇ 9 ಮಂದಿ ನಾಗರಿಕರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಮುಂದುವರಿದ ಹಿಂಸಾಚಾರ: ಸಾವಿನ ಸಂಖ್ಯೆ 13ಕ್ಕೇರಿಕೆ; ಉದ್ವಿಘ್ನ ಪರಿಸ್ಥಿತಿ

ಸೋಮವಾರ(24) ಸಿಎಎ ಬೆಂಬಲಿಗರು ಎನ್ನಲಾದ ಗುಂಪೊಂದು ವ್ಯಕ್ತಿಯೊಬ್ಬರ ಮೇಲೆ ದೊಣ್ಣೆಗಳಿಂದ ದಾಳಿ ನಡೆಸಿದ್ದರು. ಹೀಗೊಂದು ಫೋಟೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಪತ್ರಕರ್ತ ದಾನಿಶ್ ಸಿದ್ದಿಕಿ ಎಂಬುವರ ಕ್ಯಾಮರಾದಲ್ಲಿ ಈ ಭಯಾನಕ ದಾಳಿಯ ದೃಶ್ಯ ಸೆರೆಯಾಗಿದೆ ಎಂದು ವರದಿಯಾಗಿದೆ. ಇದರಿಂದ ದೆಹಲಿಯ ಈಶಾನ್ಯ ಭಾಗದಲ್ಲಿ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗಿದ್ದು, 144 ಸೆಕ್ಷನ್​​ ಜಾರಿಗೊಳಿಸಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸಿಎಎ ಪರ-ವಿರೋಧಿ ಗುಂಪುಗಳ ನಡುವಿನ ಘರ್ಷಣೆ ತಡೆಯಲು ಪೊಲೀಸರು ಹರಸಾಹಸ ಮಾಡುತ್ತಿದ್ಧಾರೆ.

ಶಾಹೀನ್ ಬಾಗ್​ನಲ್ಲಿ ನಿರಂತರ ಪ್ರತಿಭಟನೆ ಕಂಡಿದ್ದ ದೆಹಲಿ ಈಗ ಜಾಫ್ರಾಬಾದ್​ನಲ್ಲೂ ಪ್ರತಿಭಟನೆಯ ಬಿಸಿ ಅನುಭವಿಸುತ್ತಿದೆ. ಸೀಲಂಪುರ್​ನಿಂದ ಮೌಜ್​ಪುರ್ ಮತ್ತು ಯಮುನಾ ವಿಹಾರ್​ಗೆ ಸಂಪರ್ಕ ಸಾಧಿಸುವ ಜಾಫ್ರಾಬಾದ್ ಮೆಟ್ರೋ ಸ್ಟೇಷನ್ ಬಳಿಯ ರಸ್ತೆಯೊಂದನ್ನು ಸಿಎಎ ಪ್ರತಿಭಟನಾಕಾರರು ಮುತ್ತಿಗೆ ಹಾಕಿದ್ದು ಸೂಕ್ಷ್ಮ ಪರಿಸ್ಥಿತಿಗೆ ಎಡೆ ಮಾಡಿಕೊಟ್ಟಿದೆ.ರಸ್ತೆಯನ್ನು ಮುತ್ತಿಗೆ ಹಾಕಿದ ನೂರಾರು ಪ್ರತಿಭಟನಾಕಾರರಲ್ಲಿ ಮಹಿಳೆಯರೇ ಹೆಚ್ಚಾಗಿದ್ದರು. ಭದ್ರತೆಯ ದೃಷ್ಟಿಯಿಂದ ಜಾಫ್ರಾಬಾದ್ ಮೆಟ್ರೋ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚಲಾಯಿತು. ಹಾಗೆಯೇ, ಮೌಜ್​ಪುರ್-ಬಾಬರ್​ಪುರ್ ಮೆಟ್ರೋ ಸ್ಟೇಷನ್​ನ ದ್ವಾರಗಳನ್ನೂ ಬಂದ್ ಮಾಡಲಾಯಿತು.
First published: February 26, 2020, 7:32 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading