Devendra Fadnavis: ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಮತ್ತೆ ದೇವೇಂದ್ರ ಫಡ್ನವೀಸ್​​ ಆಯ್ಕೆ

ಕಳೆದ ವರ್ಷಗಳ ಕಾಲ ಮಹಾರಾಷ್ಟ್ರ ಸಿಎಂ ಆಗಿ ಶಿವಸೇನೆ-ಬಿಜೆಪಿ ಮೈತ್ರಿ ಸರ್ಕಾರ ಮುನ್ನಡೆಸಿದ್ದ ದೇವೇಂದ್ರ ಫಡ್ನವೀಸ್​​ ಅವರನ್ನೇ ಮತ್ತೊಮ್ಮೆ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

news18-kannada
Updated:October 30, 2019, 4:39 PM IST
Devendra Fadnavis: ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಮತ್ತೆ ದೇವೇಂದ್ರ ಫಡ್ನವೀಸ್​​ ಆಯ್ಕೆ
ಸಿಎಂ ದೇವೇಂದ್ರ ಫಡ್ನವೀಸ್
  • Share this:
ನವದೆಹಲಿ(ಅ.30): ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸಿಎಂ ದೇವೇಂದ್ರ ಫಡ್ನವೀಸ್​​ ಮುರು ಆಯ್ಕೆಯಾಗಿದ್ದಾರೆ. ಇಂದು ಮುಂಬೈನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಜೆಪಿಯ 105 ಮಂದಿ ಶಾಸಕರು ಒಮ್ಮತವಾಗಿ ಸಿಎಂ ದೇವೇಂದ್ರ ಫಡ್ನವೀಸ್​​ರನ್ನೇ ಮತ್ತೊಮ್ಮೆ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ಧಾರೆ.

ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಪಕ್ಷದ ಉಪಾಧ್ಯಕ್ಷ ಅವಿನಾಶ್ ರೈ ಖನ್ನಾ ಸಮ್ಮುಖದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಯಿತು. ಸಿಎಂ ದೇವೇಂದ್ರ ಫಡ್ನವೀಸ್​​ರನ್ನೇ ಮತ್ತೊಮ್ಮೆ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಬೇಕೆಂದು 105 ಬಿಜೆಪಿ ಶಾಸಕರು ಪಟ್ಟು ಹಿಡಿದಿದ್ದರು. ಅಲ್ಲದೇ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಫಡ್ನವಿಸ್ ಹೊರತುಪಡಿಸಿ ಬೇರೆ ಯಾವುದೇ ಹೆಸರು ಪ್ರಸ್ತಾಪವಾಗಿಲ್ಲ. ತೋಮರ್​​ ಅವರೇ ಖುದ್ದು ಫಡ್ನವೀಸ್​​ರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿ ಆದೇಶಿಸಿದರು.

"ನನ್ನ ಮೇಲೆ ನಂಬಿಕೆ ಇಟ್ಟು ಮತ್ತೊಮ್ಮೆ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ ಶಾಸಕರಿಗೆ ಧನ್ಯವಾದಗಳು. ಬಿಜೆಪಿ ಸಂಘಟನೆಗಾಗಿ ಮತ್ತಷ್ಟು ಶ್ರಮಿಸುತ್ತೇನೆ. ನನ್ನ ಮೇಲೆ ನೀವಿಟ್ಟ ನಂಬಿಕೆ ಉಳಿಸಿಕೊಳ್ಳುತ್ತೇನೆ" ಎಂದು ಸಿಎಂ ದೇವೇಂದ್ರ ಫಡ್ನವೀಸ್​ ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ ವರ್ಷಗಳ ಕಾಲ ಮಹಾರಾಷ್ಟ್ರ ಸಿಎಂ ಆಗಿ ಶಿವಸೇನೆ-ಬಿಜೆಪಿ ಮೈತ್ರಿ ಸರ್ಕಾರ ಮುನ್ನಡೆಸಿದ್ದ ದೇವೇಂದ್ರ ಫಡ್ನವೀಸ್​​ ಅವರನ್ನೇ ಮತ್ತೊಮ್ಮೆ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಸರ್ಕಾರ ರಚನೆಗಾಗಿ ಶಿವಸೇನೆ ಮತ್ತು ಬಿಜೆಪಿ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿರುವಾಗಲೇ ಈ ಮಹತ್ವದ ಬೆಳವಣಿಗೆ ನಡೆದಿದೆ ಎಂಬುದು ಗಮನಾರ್ಹ.

ಇದನ್ನೂ ಓದಿ: ‘2.5 ವರ್ಷ ಸಿಎಂ ಹುದ್ದೆ ನೀಡುತ್ತೇವೆಂದು ಶಿವಸೇನೆಗೆ ಮಾತು ಕೊಟ್ಟಿರಲಿಲ್ಲ‘: ಸಿಎಂ ದೇವೇಂದ್ರ ಫಡ್ನವೀಸ್​​

ಮಹಾರಾಷ್ಟ್ರದಲ್ಲಿ ಸುಲಭವಾಗಿ ಸರ್ಕಾರ ರಚಿಸಬಹುದು ಎಂಬ ಬಿಜೆಪಿ ನಿರೀಕ್ಷೆ ಸುಳ್ಳಾಗಿದೆ. ಇತ್ತ 50:50 ಸೂತ್ರಕ್ಕೆ ಒಪ್ಪಿಗೆ ಸೂಚಿಸಿದರೆ ಮಾತ್ರ ಸರ್ಕಾರ ರಚನೆ ಮಾಡಲು ಬೆಂಬಲ ನೀಡುವುದಾಗಿ ಶಿವಸೇನೆ ಹೊಸ ದಾಳ ಉರುಳಿಸಿದೆ. ಈ ಸೂತ್ರದ ಪ್ರಕಾರ 5 ವರ್ಷಗಳ ಆಡಳಿತಾವಧಿಯಲ್ಲಿ ಬಿಜೆಪಿ-ಶಿವಸೇನೆ ಸಮ್ಮಿಶ್ರ ಸರ್ಕಾರ ಇಬ್ಬರು ಉಖ್ಯಮಂತ್ರಿಗಳನ್ನು ಮಾಡಬೇಕಾಗುತ್ತದೆ. ಅಂತೆಯೇ ಎರಡೂವರೆ ವರ್ಷ ಶಿವಸೇನೆ ಅಭ್ಯರ್ಥಿ ಸಿಎಂ ಆದರೆ, ಇನ್ನುಳಿದ ಅವಧಿಗೆ ಬಿಜೆಪಿ ಅಭ್ಯರ್ಥಿ ಮುಖ್ಯಮಂತ್ರಿ ಆಗಬಹುದಾಗಿದೆ.

ಆರಂಭದಿಂದಲೂ ಸಿಎಂ ಹುದ್ದೆ ಮೇಲೆ ಹದ್ದಿನ ಕಣ್ಣಿಟ್ಟಿದ್ದ ಶಿವಸೇನೆಯೀಗ, ಇಂತಹ ಬೇಡಿಕೆಯಿಟ್ಟಿದೆ. ಶಿವಸೇನಯಿಂದ ಆದಿತ್ಯ ಠಾಕ್ರೆ ಸಿಎಂ ಸ್ಥಾನಕ್ಕೆ ಯತ್ನಿಸುತ್ತಿದ್ದರೆ, ಅತ್ತ ಬಿಜೆಪಿಯಿಂದಹಾಲಿ ಸಿಎಂ ದೇವೇಂದ್ರ ಫಡ್ನವಿಸ್ ಮತ್ತೆ ತಮ್ಮ ಸ್ಥಾನದಲ್ಲೇ ಮುಂದುವರೆಯಲು ಸಜ್ಜಾಗಿದ್ದಾರೆ. ಆದರೀಗ ಶಿವಸೇನೆ ಆಗ್ರಹದಿಂದ ಬಿಜೆಪಿಗೆ ಸರ್ಕಾರ ರಚಿಸುವುದು ಕಷ್ಟವಾಗಿದೆ.ಇದನ್ನೂ ಓದಿ: ‘ಠಾಕ್ರೆ 50:50 ಸೂತ್ರ ಆಗ್ರಹಿಸುತ್ತಿರುವುದರಲ್ಲಿ ತಪ್ಪೇನಿಲ್ಲ‘: ಶಿವಸೇನೆ ಪರ ಶರದ್​ ಪವಾರ್​​ ಬ್ಯಾಟಿಂಗ್​​

ಈ ಮಧ್ಯೆ ಚುನಾವಣಾಪೂರ್ವ ಮೈತ್ರಿ ಮಾಡಿಕೊಂಡಾಗ 2.5 ವರ್ಷ ಸಿಎಂ ಹುದ್ದೆ ನೀಡುತ್ತೇವೆಂದು ಶಿವಸೇನೆಗೆ ಮಾತು ಕೊಟ್ಟಿರಲಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಹೇಳಿದ್ದಾರೆ. ಅಲ್ಲದೇ ಶಿವಸೇನೆ ದೇವೇಂದ್ರ ಫಡ್ನವೀಸ್​ ಹೇಳಿಕೆ ತಿರುಗೇಟು ನೀಡಿದೆ. ಲೋಕಸಭಾ ಚುನಾವಣೆಗೆ ಮುನ್ನ 50:50 ಸೂತ್ರ ಅನುಸರಿಸೋಣ ಎಂದು ಖುದ್ದು ಸಿಎಂ ಫಡ್ನವೀಸ್ ಮಾತು ಕೊಟ್ಟಿದ್ದರು ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್​​ ಠಾಕ್ರೆ ತಪರಾಕಿ ಬಾರಿಸಿದ್ದಾರೆ.
----------
First published:October 30, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ