ಬೆಂಗಳೂರಲ್ಲಿ ದಿಗ್ವಿಜಯ ಸಿಂಗ್ ವಶಕ್ಕೆ ಪಡೆದ ಪ್ರಕರಣ; ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಬಿಜೆಪಿ ಜಿಲ್ಲಾಧ್ಯಕ್ಷ ವಿಕಾಸ್ ವಿರಾನಿಯವರ ದೂರಿನ ಮೇರೆಗೆ ರಾಹುಲ್ ರಾಥೋಡ್ ಮತ್ತು 50 ಅನಾಮಧೇಯ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಭೂಪೇಂದ್ರ ಸಿಂಗ್  ಪಿಟಿಐಗೆ ತಿಳಿಸಿದ್ದಾರೆ.

ಬಂಧನಕ್ಕೊಳಗಾದ ದಿಗ್ವಿಜಯ್ ಸಿಂಗ್​

ಬಂಧನಕ್ಕೊಳಗಾದ ದಿಗ್ವಿಜಯ್ ಸಿಂಗ್​

 • Share this:
  ಭೋಪಾಲ್ (ಮಾ.19): ಬೆಂಗಳೂರಿನ ರಮಾಡ ರೆಸಾರ್ಟ್​ನಲ್ಲಿರುವ ಮಧ್ಯಪ್ರದೇಶ ಕಾಂಗ್ರೆಸ್​​ನ ಅತೃಪ್ತ ಶಾಸಕರನ್ನು ಭೇಟಿ ಮಾಡಲು ಮಾಜಿ ಮುಖ್ಯಮಂತ್ರಿ ದಿಗ್ವಿಜಯ್​ ಸಿಂಗ್​ ಬುಧವಾರ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು. ಈ ವಿಚಾರಕ್ಕೆ ಸಂಬಂಧಿಸಿ ಭೋಪಾಲ್‌ನ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ ಏರ್ಪಟ್ಟಿದೆ.

  ಸರ್ಕಾರದ ವಿರುದ್ಧ ಬಂಡಾಯವೆದ್ದಿರುವ ಶಾಸಕರನ್ನು ಭೇಟಿಯಾಗಲು ಬೆಂಗಳೂರಿಗೆ ತೆರಳಿದ್ದ  ಕಾಂಗ್ರೆಸ್​ ನಾಯಕ ದಿಗ್ವಿಜಯ ಸಿಂಗ್ ಮತ್ತು ಪಕ್ಷದ ಇತರ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಪ್ರಕರಣ ಕಾಂಗ್ರೆಸ್​ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಹೆಚ್ಚು ಜನ ಸೇರದಂತೆ ಆದೇಶ ಇರುವ ಹೊರತಾಗಿಯೂ ಭೋಪಾಲ್‌ನ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ, ಕಚೇರಿ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಎರಡೂ ಕಾರ್ಯಕರ್ತರ ನಡುವೆ ಘರ್ಷಣೆ ಏರ್ಪಟ್ಟಿದೆ.

  ಬಿಜೆಪಿಯ ಮುಖ್ಯ ಕಚೇರಿಯ ಎದುರು ಕಾಂಗ್ರೆಸ್ ಕಾರ್ಯಕರ್ತರು ರಾಡ್ ಮತ್ತು ಇತರ ವಸ್ತುಗಳಿಂದ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ವಕ್ತಾರ ರಾಹುಲ್ ಕೊಠಾರಿ ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಕಾಂಗ್ರೆಸ್ ಪಕ್ಷ ಅಲ್ಲಗೆಳೆದಿದೆ.

  ಇದನ್ನೂ ಓದಿ: ರೆಸಾರ್ಟ್​ ಬಳಿ ಪ್ರತಿಭಟನೆ; ದಿಗ್ವಿಜಯ್​ ಸಿಂಗ್ ಸೇರಿ ಅನೇಕ ಕಾಂಗ್ರೆಸ್​ ನಾಯಕರು ವಶಕ್ಕೆ ಪಡೆದು ಬಿಡುಗಡೆ

  ಬಿಜೆಪಿ ಜಿಲ್ಲಾಧ್ಯಕ್ಷ ವಿಕಾಸ್ ವಿರಾನಿಯವರ ದೂರಿನ ಮೇರೆಗೆ ರಾಹುಲ್ ರಾಥೋಡ್ ಮತ್ತು 50 ಅನಾಮಧೇಯ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಭೂಪೇಂದ್ರ ಸಿಂಗ್  ಪಿಟಿಐಗೆ ತಿಳಿಸಿದ್ದಾರೆ. ಈಗಾಗಲೇ ಕೆಲ ಪ್ರತಿಭಟನಾಕಾರರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆದರೆ ಪ್ರತಿಭಟನೆಯಲ್ಲಿ ಯಾರಿಗೂ ತೊಂದರೆಯಾಗಿಲ್ಲ.

  ಬುಧವಾರ ಬೆಳಿಗ್ಗೆ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಅತೃಪ್ತ ಶಾಸಕರ ಭೇಟಿಗೆ ಅವಕಾಶ ಸಿಕ್ಕಿರಲಿಲ್ಲ.  ಹೀಗಾಗಿ, 500ಕ್ಕೂ ಅಧಿಕ ಕಾರ್ಯಕರ್ತರು ದಿಗ್ವಿಜಯ್​ ಸಿಂಗ್​ ನೇತೃತ್ವದಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದರು. ನಂತರ ಇವರನ್ನು ಬಂಧಿಸಿ ಬಿಡುಗಡೆ ಮಾಡಲಾಗಿದೆ.

  (ವರದಿ: ಸಂಧ್ಯಾ ಎಂ.)
  First published: