Bharat Jodo Yatra: ಭಾರತ ಜೋಡೋ ಯಾತ್ರೆ ಸಮಾರೋಪ; ಕಾಶ್ಮೀರದ ಹಿಮ ಸೌಂದರ್ಯಕ್ಕೆ ಮಾರುಹೋದ ಡಿಕೆಶಿ

ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್

ನಾನು ಈ ಹಿಂದೆ ಸ್ವಿಜರ್ಲೆಂಡ್ ಮತ್ತಿತರ ದೇಶಗಳಿಗೆ ಭೇಟಿ ನೀಡಿದ್ದೇನೆ. ಆದರೆ ಇಂದು ನನಗೆ ಆಗಿರುವ ಪ್ರಕೃತಿ ಸೌಂದರ್ಯದ ಅನುಭವ ಹಿಂದೆಂದೂ ಆಗಿರಲಿಲ್ಲ. ಇದನ್ನು ಎಂದು ಮರೆಯಲು ಸಾಧ್ಯವಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

  • News18 Kannada
  • 4-MIN READ
  • Last Updated :
  • Jammu and Kashmir, India
  • Share this:

ಶ್ರೀನಗರ: ಒಡೆದ ಮನಸ್ಸುಗಳನ್ನು ಒಂದುಗೂಡಿಸಲು ಹಾಗೂ ದೇಶದ ಜ್ವಲಂತ ಸಮಸ್ಯೆಗಳ ಕುರಿತು ಜನಪರ ಧ್ವನಿ ಎತ್ತಲು ರಾಹುಲ್ ಗಾಂಧಿ (Rahul Gandhi) ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಐತಿಹಾಸಿಕ ಭಾರತ ಜೋಡೋ ಯಾತ್ರೆ (Bharat Jodo Yatra) ಸೋಮವಾರ ಸಂಪೂರ್ಣವಾಗುತ್ತಿದೆ. ಕಳೆದ ಐದು ತಿಂಗಳಿಂದ ಕನ್ಯಾಕುಮಾರಿಯಿಂದ (Kanyakumari ) ಕಾಶ್ಮೀರದವರೆಗೆ (Kashmir) ಸುದೀರ್ಘ 3570 ಕಿ.ಮೀ. ಸಾಗಿದ ಈ ಯಾತ್ರೆ ದೇಶದ ಇತಿಹಾಸದ ಪುಟ ಸೇರಿದೆ. ಹೊಸ ಮೈಲುಗಲ್ಲು ಸೃಷ್ಟಿಸಿದೆ.


ವಿಭಿನ್ನ ಹವಾಮಾನಗಳ ವೈಪರಿತ್ಯ ಸವಾಲು, ರಾಜಕೀಯ ಎದುರಾಳಿಗಳ ಟೀಕೆ ಸೇರಿದಂತೆ ಎಲ್ಲಾ ಅಡೆತಡೆಗಳನ್ನು ಮೀರಿ ಯಾತ್ರೆ ತನ್ನ ಗುರಿ ತಲುಪಿದೆ. ಇದು ಕಾಂಗ್ರೆಸ್ ಹಾಗೂ ಪಕ್ಷದ ನಾಯಕರಿಗೆ ದೇಶದ ಬಗ್ಗೆ ಇರುವ ಕಾಳಜಿ, ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಡಿಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.ಕಣಿವೆ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು


ಇಂದು ಕಾಶ್ಮೀರದಲ್ಲಿ ಭಾರತ ಜೋಡೋ ಯಾತ್ರೆ ಸಮಾರೋಪ ಸಮಾರಂಭ ನಡೆಯುತ್ತಿದ್ದು, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರು ಕಣಿವೆ ರಾಜ್ಯಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಕಾಶ್ಮೀರದ ಹಿಮಪಾತ ಹಾಗೂ ಪ್ರಕೃತಿ ಸೌಂದರ್ಯಕ್ಕೆ ಮನಸೋತಿರುವ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಮೂಲಕ ತಮ್ಮ ಅನುಭವ ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: Ramesh Jarkiholi: 120 ದಾಖಲೆ ಇದೆ, ರಿಲೀಸ್ ಮಾಡಲ್ಲ: ಡಿಕೆಶಿ ವಿರುದ್ಧ ಗುಡುಗುತ್ತಲೇ ಕಾಂಗ್ರೆಸ್​ನ 'ವಿಷ ಕನ್ಯೆ' ಬಗ್ಗೆ ಪ್ರಸ್ತಾಪಿಸಿದ ರಮೇಶ್ ಜಾರಕಿಹೊಳಿ!


ಭಾರತ ಜೋಡೋ ಯಾತ್ರೆ ಅಂತಿಮ ದಿನ. ನಾವೆಲ್ಲರೂ ಕಾಶ್ಮೀರದ ಶ್ರೀನಗರಕ್ಕೆ ಆಗಮಿಸಿದ್ದೇವೆ. ದೇಶವನ್ನು ಒಗ್ಗೂಡಿಸಿ, ದೇಶದ ಐಕ್ಯತೆಗೆ ರಾಹುಲ್ ಗಾಂಧಿ ಅವರು ಈ ಯಾತ್ರೆ ಆರಂಭಿಸಿದ್ದು, ಇಂದು ಯಾತ್ರೆಯ ಅಂತಿಮ ದಿನವಾಗಿದೆ. ಈ ಸಮಾರೋಪ ಕಾರ್ಯಕ್ರಮಕ್ಕೆ ಸುಮಾರು 100 ಸಂಸದರು, ಪಕ್ಷದ ಕಾರ್ಯಕಾರಿ ಸಮಿತಿಯ ಸದಸ್ಯರು, ಪ್ರಮುಖ ನಾಯಕರು ಸೇರಿದಂತೆ ಸಾವಿರಾರು ಮಂದಿ ಕಾರ್ಯಕ್ರಮಕ್ಕೆ ಆಗಮಿಸಿದ್ದೇವೆ.
ಪ್ರಕೃತಿ ಸೌಂದರ್ಯದ ಅನುಭವನ್ನು ಮರೆಯಲು ಸಾಧ್ಯವಿಲ್ಲ ಎಂದ ಡಿಕೆಶಿ


ಯಾತ್ರೆ ರುವಾರಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಊಟ ಮುಗಿಸಿ ನಮ್ಮ ಕೊಣೆಗೆ ಬಂದು ಮಲಗುವಷ್ಟರಲ್ಲಿ ರಾತ್ರಿ 1 ಗಂಟೆ ಆಗಿತ್ತು. ರಾತ್ರಿ ಇಲ್ಲಿನ ಹವಾಮಾನ 9° ಸೆಲ್ಸಿಯಸ್ ಇತ್ತು. ಬೆಳಗಿನ ಜಾವ 2 ಗಂಟೆ ನಂತರ ಹಿಮ ಸುರಿಯಲು ಆರಂಭವಾಗಿದ್ದು, ಇಡೀ ಪ್ರದೇಶ ಹಿಮದಿಂದ ತುಂಬಿದೆ.


ಇಂದು ಬೆಳಗ್ಗೆ ಕೊಠಡಿಯ ಹೊರಗೆ ಬಂದು ನೋಡಿದಾಗ ನನ್ನ ಜೀವನದಲ್ಲಿ ಎಂದೂ ನೋಡಿರದ ಹಿಮಪಾತ ಹಾಗೂ ಅದರ ಸೌಂದರ್ಯ ಮನಸೂರೆಗೊಂಡಿದೆ. ಧಾರಾಕಾರ ಮಳೆಯಂತೆ ಹಿಮ ಸುರಿಯುತ್ತಿದೆ. ಹಿಂದೆಂದೂ ನಾನು ಈ ರೀತಿಯ ಅದ್ಭುತ ದೃಶ್ಯ ಕಂಡಿರಲಿಲ್ಲ. ನಾನು ಈ ಹಿಂದೆ ಸ್ವಿಜರ್ಲೆಂಡ್ ಮತ್ತಿತರ ದೇಶಗಳಿಗೆ ಭೇಟಿ ನೀಡಿದ್ದೇನೆ. ಆದರೆ ಇಂದು ನನಗೆ ಆಗಿರುವ ಪ್ರಕೃತಿ ಸೌಂದರ್ಯದ ಅನುಭವ ಹಿಂದೆಂದೂ ಆಗಿರಲಿಲ್ಲ. ಇದನ್ನು ಎಂದು ಮರೆಯಲು ಸಾಧ್ಯವಿಲ್ಲ ಎಂದಿದ್ದಾರೆ.


ರಾಹುಲ್ ಗಾಂಧಿ


ಈ ಕಾಶ್ಮೀರ ದೇಶದ ಆಸ್ತಿ ನಾವು ಇದನ್ನು ಕಾಪಾಡಿಕೊಳ್ಳಬೇಕು. ಈ ಹವಾಮಾನ ಪರಿಸ್ಥಿತಿಯಲ್ಲಿ ನಮ್ಮ ಯೋಧರು ಹೇಗೆ ಗಡಿ ಕಾಯುತ್ತಾರೆ. ಅವರಿಗೆ ಧನ್ಯವಾದಗಳು ಎಂದು ಶಿವಕುಮಾರ್ ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: Crime News: ಹೆಂಡ್ತಿ ಕೊಂದು ಎಸ್ಕೇಪ್​​ ಆಗಿದ್ದ ನಕಲಿ ಟೆಕ್ಕಿ ಭಾರತದ ಪ್ರಜೆಯೇ ಅಲ್ಲ; ವಿಚಾರಣೆ ವೇಳೆ ಪೊಲೀಸರಿಗೆ ಶಾಕ್!


ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ  ರದ್ದು


ಇನ್ನು, ಕಾರ್ಯಕ್ರಮದಲ್ಲಿ ಭಾಗಿಯಾಗಲು ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾಶ್ಮೀರ ಪ್ರವಾಸ ರದ್ದಾಗಿದೆ. ಭಾರೀ ಹಿಮಪಾತದ ಕಾರಣ ದೆಹಲಿಯಿಂದ ಕಾಶ್ಮೀರಕ್ಕೆ ತೆರಳುವ ಎಲ್ಲಾ ವಿಮಾನ ಹಾರಾಟ ರದ್ದಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಕಾರ್ಯಕ್ರಮವೂ ರದ್ದಾಗಿದೆ.


ಕಾಶ್ಮೀರಕ್ಕೆ ಪ್ರಯಾಣ ಬೆಳೆಸಲು ದೆಹಲಿ ವಿಮಾನ ನಿಲ್ದಾಣಕ್ಕೆ ಸಿದ್ದರಾಮಯ್ಯ ಅವರೊಂದಿಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಸಚಿವ ವಿನಯ್ ಕುಲಕರ್ಣಿ, ಶಾಸಕರಾದ ನಾಗೇಂದ್ರ, ರಾಘವೇಂದ್ರ ಹಿಟ್ನಾಳ್, ಪ್ರಕಾಶ್ ರಾಥೋಡ್, ಮಾಜಿ ಶಾಸಕರಾದ ಅಶೋಕ್ ಪಟ್ಟಣ, ಐವಾನ್ ಡಿಸೋಜಾ ಕೂಡ ಆಗಮಿಸಿದ್ದರು.

Published by:Sumanth SN
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು