ನವದೆಹಲಿ: ನ್ಯಾಷನಲ್ ಹೆರಾಲ್ಡ್ ಕೇಸ್‌ನಲ್ಲಿ (National Herald Case) ಜಾರಿ ನಿರ್ದೇಶನಾಲಯ (ED) ಕಾಂಗ್ರೆಸ್ ನಾಯಕ (Congress Leader) ರಾಹುಲ್ ಗಾಂಧಿ (Rahul Gandhi) ಅವರನ್ನು ವಿಚಾರಣೆಗೆ (Enquiry) ಒಳಪಡಿಸಿರೋದಕ್ಕೆ ಕಾಂಗ್ರೆಸ್ (Congress) ಕೆಂಡಾಮಂಡಲವಾಗಿದೆ. ನಿನ್ನೆ ದೆಹಲಿ (Delhi), ಬೆಂಗಳೂರು (Bengaluru) ಸೇರಿದಂತೆ ದೇಶಾದ್ಯಂತ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪ್ರತಿಭಟನೆ (Protest) ನಡೆಸಿದ್ದರು. ಇಂದೂ ಕೂಡ ದೆಹಲಿ ಸೇರಿದಂತೆ ಹಲವೆಡೆ ಪ್ರತಿಭಟನೆ ಮುಂದುವರೆದಿದೆ. ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ರಾಜ್ಯದ ಹಲವು ನಾಯಕರು ಭಾಗಿಯಾಗಿದ್ದಾರೆ. ದಿನೇಶ್ ಗುಂಡೂರಾವ್ (Dinesh Gundurao), ಡಿಕೆ ಸುರೇಶ್ (DK Suresh) ಇಂದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಪೊಲೀಸರು (Police) ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
ದೆಹಲಿಯಲ್ಲಿ ಮುಂದುವರೆದ ಕಾಂಗ್ರೆಸ್ ಪ್ರೊಟೆಸ್ಟ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದೂ ಕೂಡ ಕಾಂಗ್ರೆಸ್ ಪ್ರತಿಭಟನೆ ಮುಂದುವರೆಯಿತು. ಈ ವೇಳೆ ಎಐಸಿಸಿ ಕಚೇರಿಯಿಂದ ಇಡಿ ಕಚೇರಿವರೆಗೆ ಪ್ರತಿಭಟನೆ ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದರು. ಪ್ರತಿಭಟನೆ ವೇಳೆ ಪೊಲೀಸರು ರಾಜ್ಯದ ಕಾಂಗ್ರೆಸ್ ನಾಯಕರಾದ ದಿನೇಶ್ ಗುಂಡೂರಾವ್, ಡಿಕೆ ಸುರೇಶ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆದರು.
ಡಿಕೆ ಸುರೇಶ್‌ರನ್ನು ವ್ಯಾನ್ ಒಳಕ್ಕೆ ತಳ್ಳಿದ ಪೊಲೀಸರು
ಕಾಂಗ್ರೆಸ್ ಕಚೇರಿಗೆ ಹೊರಟ ಈ ನಾಯಕರನ್ನು ಪೊಲೀಸರು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಸಂಸದ ಡಿ.ಕೆ. ಸುರೇಶ್ ಹಾಗೂ ಪೊಲೀಸರೊಂದಿಗೆ ವಾಗ್ವಾದ, ಮಾತಿನ ಚಕಮಕಿ, ತಳ್ಳಾಟ, ನೂಕಾಟ ನಡೆಯಿತು. ಈ ವೇಳೆ ನಿಮ್ಮ ಹಿರಿಯ ಅಧಿಕಾರಿಯನ್ನು ಸ್ಥಳಕ್ಕೆ ಬರೋದಕ್ಕೆ ಹೇಳಿ ಅಂತ ಸುರೇಶ್ ಆಗ್ರಹಿಸಿದ್ರು. ನಮ್ಮನ್ನು ಅರೆಸ್ಟ್ ಮಾಡೋದಕ್ಕೆ ಯಾರು ಹೇಳಿದ್ದಾರೆ ಅಂತ ಪ್ರಶ್ನಿಸಿದ್ರು. ಈ ವೇಳೆ ಪೊಲೀಸರೊಬ್ಬರು ಹಿಂಬದಿಯಿಂದ ತಳ್ಳಿದ್ದಾರೆ. ಬಳಿಕ ಸುರೇಶ್, ದಿನೇಶ್ ಗುಂಡೂರಾವ್ ಸೇರಿದಂತೆ ಹಲವರನ್ನು ಪೊಲೀಸ್ ವ್ಯಾನ್‌ನಲ್ಲಿ ಕರೆದುಕೊಂಡು ಹೋದ್ರು.
ಇದನ್ನೂ ಓದಿ: P Chidambaram: ಕೈ ಪ್ರೊಟೆಸ್ಟ್‌ನಲ್ಲಿ ಚಿದಂಬರಂ ಮೂಳೆ ಮುರಿತ! ಪೊಲೀಸರ ವಿರುದ್ಧ ಮಾಜಿ ಸಚಿವರ ಆರೋಪ
ಪೊಲೀಸರ ವರ್ತನೆಗೆ ಡಿಕೆ ಶಿವಕುಮಾರ್ ಆಕ್ರೋಶ್
ನವದೆಹಲಿಯಲ್ಲಿ ತಮ್ಮ ಸಹೋದರ ಡಿಕೆ ಸುರೇಶ್ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಅಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಪ್ರತಿಭಟನೆ ಮಾಡುವುದು ನಮ್ಮ ಹಕ್ಕು. ಆದರೆ, ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮ ನಾಯಕರು ಯಾವ ತಪ್ಪು ಮಾಡಿಲ್ಲ. ಬಿಜೆಪಿಯರು ತುರ್ತು ಪರಿಸ್ಥಿತಿಗಿಂತ ದೊಡ್ಡ ಪರಿಸ್ಥಿತಿ ತಂದೊಡ್ಡಿದ್ದಾರೆ ಅಂತ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಪ್ರತಿಭಟನೆ ನಮ್ಮ ಹಕ್ಕು ಎಂದ ಕೆಪಿಸಿಸಿ
ಇನ್ನು ಘಟನೆ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ, ಬಿಜೆಪಿ ಸರ್ಕಾರದ ವಿರುದ್ಧ ಹೋರಾಟವು ಮತ್ತೊಮ್ಮೆ ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ದದ ಹೋರಾಟವನ್ನು ನೆನಪಿಸುತ್ತಿದೆ ಅಂತ ಹೇಳಿದೆ. ನಾವು ಹೋರಾಡುತ್ತೇವೆ, ದೇಶವನ್ನು ಫ್ಯಾಸಿಸ್ಟ್ ಶಕ್ತಿಗಳಿಂದ ಮುಕ್ತಗೊಳಿಸುತ್ತೇವೆ, ಆ ಬದ್ಧತೆ ನಮಗಿದೆ, ಜನಪ್ರತಿನಿಧಿಗಳೊಂದಿಗೆ ಪೊಲೀಸರ ಈ ನಡವಳಿಕೆ ಪ್ರಜಾಪ್ರಭುತ್ವವನ್ನು ಅಣಕಿಸುವಂತಿದೆ ಅಂತ ಕಿಡಿಕಾರಿದೆ.
ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ
ಇನ್ನು ಪೊಲೀಸರ ವರ್ತನೆ ವಿರುದ್ಧ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಕಿರಿಕಾರಿದ್ದಾರೆ. ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ತಳೆಯುತ್ತಿದೆ ಎಂದಿದ್ದಾರೆ. ಪ್ರತಿ ಬಾರಿ ಬಿಜೆಪಿ ನಾಯಕರು ತುರ್ತು ಪರಿಸ್ಥಿತಿ ಹೇರಿದ್ದರು ಅಂತ ಕಾಂಗ್ರೆಸ್ ವಿರುದ್ಧ ಆರೋಪಿಸುತ್ತಿದ್ದರು. ಇದೀಗ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಅಂತ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ